'ಬಿಜೆಪಿಯ ಹುಚ್ಚು ಕನಸು ನನಸಾಗೋಲ್ಲ,' ಗುಡುಗಿದ ಸಿದ್ದರಾಮಯ್ಯ

ಬೆಂಗಳೂರು, ಜುಲೈ 10: "ಹಣದ ಥೈಲಿ ಹಿಡಿದುಕೊಂಡು ಅಧಿಕಾರಕ್ಕೆ ಬರುವ ನಿಮ್ಮ ಹುಚ್ಚು ಕನಸು ನನಸಾಗುವುದಕ್ಕೆ ನಾವು ಬಿಡುವುದಿಲ್ಲ" ಎಂದು ಮಾಜಿ ಮುಖ್ಯಮಂತ್ರಿ ಸಿದ್ದಾರಮಯ್ಯ ಬಿಜೆಪಿ ವಿರುದ್ಧ ಗುಡುಗಿದ್ದಾರೆ.

"ಮುಂಬೈಯಲ್ಲಿ ಕಾಂಗ್ರೆಸ್-ಜೆಡಿಎಸ್ ಅತೃಪ್ತ ಶಾಸಕರು ತಂಗಿರುವ ರಿನೈಸಾನ್ಸ್ ಹೊಟೇಲ್ ಗೆ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ಭೇಟಿ ನೀಡಲು ಅವಕಾಶ ನೀಡದೆ ಇರುವುದು ಮತ್ತು ಕರ್ನಾಟಕದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಲು ಅವಕಾಶ ನೀಡದೆ ಇರುವುದು ಈ ಇಡೀ ಪ್ರಕರಣದಲ್ಲಿ ಬಿಜೆಪಿ ಕೈವಾಡವಿದೆ ಎಂಬುದಕ್ಕೆ ಸಾಕ್ಷಿ. ಈ ಎಲ್ಲ ಬೆಳವಣಿಗೆಯ ನಂತರವೂ ಇದರಲ್ಲಿ ಬಿಜೆಪಿ ಕೈವಾಡವಿಲ್ಲ ಎಂದರೆ ಯಾರಾದರೂ ನಂಬುತ್ತಾರಾ" ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

We will not let your dreams come true: Siddaramaiah to bJP

"ಪ್ರಧಾನಿ ನರೇಂದ್ರ ಮೋದಿ ಸರ್ವಾಧಿಕಾರ, ಸ್ವಾಭಿಮಾನಿ ಕರ್ನಾಟಕದಲ್ಲಿ ನಡೆಯದು. ಅಡ್ಡಹಾದಿಯ ಮೂಲಕ,ಹಣದ ಥೈಲಿ ಹಿಡಿದುಕೊಂಡು ಅಧಿಕಾರಕ್ಕೆ ಬರುವ ಬಿಜೆಪಿ ಹುಚ್ಚುಕನಸನ್ನು ನನಸು ಮಾಡಲು ನಾವು ಬಿಡುವುದಿಲ್ಲ. ನಮ್ಮ ಈ ಹೋರಾಟ ರಾಜ್ಯದಾದ್ಯಂತ ಮುಂದುವರಿಯಲಿದೆ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+