ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಾರ್ಕಿಂಗ್ ಶುಲ್ಕ ಪರಿಷ್ಕರಿಸಲು ಬಿಬಿಎಂಪಿ ಚಿಂತನೆ

|
Google Oneindia Kannada News

ಬೆಂಗಳೂರು, ಸೆ.20 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೂತನ ಪಾರ್ಕಿಂಗ್ ನೀತಿಗೆ ಸಾರ್ವಜನಿಕರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಜನರಿಗೆ ಹೊರೆಯಾಗದಂತೆ ಪಾರ್ಕಿಂಗ್ ಶುಲ್ಕವನ್ನು ಪರಿಷ್ಕರಣೆ ಮಾಡಲಾಗುವುದು ಎಂದು ಬಿಬಿಎಂಪಿ ಭರವಸೆ ನೀಡಿದೆ.

katte satyanarayana

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಬಿಬಿಎಂಪಿ ಮೇಯರ್ ಕಟ್ಟೆ ಸತ್ಯನಾರಾಯಣ, ಸರ್ಕಾರದ ನಿರ್ದೇಶನದಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಪಾರ್ಕಿಂಗ್ ನೀತಿ ಜಾರಿಗೆ ತರಲು ಪಾಲಿಕೆ ಕೌನ್ಸಿಲ್ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗಿತ್ತು.

ಆದರೆ, ಗಂಟೆಗಳ ಲೆಕ್ಕದಲ್ಲಿ ದ್ವಿಚಕ್ರ ವಾಹನಗಳಿಗೆ 15, 10, 5 ರೂ. ಮತ್ತು ಕಾರುಗಳಿಗೆ 30, 20, 15 ರೂ. ಶುಲ್ಕ ವಿಧಿಸಿರುವುದು ಹೆಚ್ಚಾಯಿತು ಎಂದು ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದ್ದರಿಂದ ಶುಲ್ಕ ಪರಿಷ್ಕರಣೆ ಮಾಡಲಾಗುವುದು ಎಂದರು.

ಪಾಲಿಕೆ ಸಭೆಯಲ್ಲಿ ಪಾರ್ಕಿಂಗ್ ಶುಲ್ಕ ವಿಧಿಸುವ ಕುರಿತು ಮಾತ್ರ ಒಪ್ಪಿಗೆ ಪಡೆಯಲಾಗಿದೆ. ಬಿಬಿಎಂಪಿ ಶುಲ್ಕವನ್ನು ಪರಿಷ್ಕರಣೆ ಮಾಡಿ ಸದ್ಯದಲ್ಲೇ, ಸಾರ್ವಜನಿಕರಿಗೆ ಹೊರೆಯಾಗದಂತೆ ಹೊಸ ದರ ಪ್ರಕಟಿಸಲಾಗುವುದು ಎಂದು ಮೇಯರ್ ಭರವಸೆ ನೀಡಿದರು. (ಪಾರ್ಕಿಂಗ್ ಎಲ್ಲಿ, ಎಷ್ಟು)

ನಗರದ ಎಲ್ಲಾ ರಸ್ತೆಗಳಲ್ಲಿ ಏಕಾಏಕಿ ಪಾರ್ಕಿಂಗ್ ಶುಲ್ಕ ವಿಧಿಸುವುದಿಲ್ಲ. ಸಾಧಕ-ಬಾಧಕಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಬಳಿಕ ಪಾರ್ಕಿಂಗ್ ಗೆ ಸಂಬಂಧಿಸಿದಂತೆ ಟೆಂಡರ್ ಕರೆಯಲಾಗುವುದು. ಮುಂದಿನ ಮೂರು ತಿಂಗಳಿನಲ್ಲಿ ಪೇ ಅಂಡ್ ಪಾರ್ಕ್ ನೀತಿ ಜಾರಿಗೆ ಬರಲಿದೆ ಎಂದರು.

ಒಟ್ಟಾರೆ ಸಾರ್ವಜನಿಕರ ಒತ್ತಡಕ್ಕೆ ಮಣಿದಿರುವ ಬಿಬಿಎಂಪಿ ಪಾರ್ಕಿಂಗ್ ಶುಲ್ಕವನ್ನು ಪರಿಷ್ಕರಣೆ ಮಾಡುವ ಭರವಸೆ ನೀಡಿದೆ. ನೂತನ ಮೇಯರ್ ತಾವು ನೀಡಿದ ಭರವಸೆಯನ್ನು ಈಡೇರಿಸಿ ಬೆಂಗಳೂರಿಗರ ಮೆಚ್ಚುಗೆಗೆ ಪಾತ್ರರಾಗುತ್ತಾರೋ? ಕಾದು ನೋಡೋಣ.

English summary
In wake of the massive protests against hike in parking fees The Bruhat Bengaluru Mahanagara Palike (BBMP) has assured that, it will come up with a parking policy that does not burden the Bangaloreans. BBMP mayor katte satyanarayana said, we will revised Parking fees soon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X