ಬೆಂಗಳೂರಿಗರೆ ಹೆಲ್ಮೆಟ್ ಧರಿಸಿ, ಇಲ್ಲವೇ ದಂಡಕಟ್ಟಿ

ಬೆಂಗಳೂರು, ಫೆ.13 : ಬೆಂಗಳೂರಿನ ದ್ವಿಚಕ್ರ ವಾಹನ ಸವಾರರೇ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಇಲ್ಲವೇ ಕಠಿಣ ಕ್ರಮಗಳನ್ನು ಎದುರಿಸಲು ಸಜ್ಜಾಗಿ. ಇದು ಬೆಂಗಳೂರು ಸಂಚಾರಿ ಪೊಲೀಸರು ವಾಹನ ಸವಾರರಿಗೆ ನೀಡಿರುವ ಖಡಕ್ ಎಚ್ಚರಿಕೆ. ಹೌದು, ಬೆಂಗಳೂರು ಸಂಚಾರಿ ಪೊಲೀಸರು ಹೆಲ್ಮೆಟ್ ಇಲ್ಲದೇ ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ಬೆಂಗಳೂರು ಸಂಚಾರಿ ಪೊಲೀಸರು ನೀಡಿರುವ ಮಾಹಿತಿಯಂತೆ 2013ರಲ್ಲಿ ನಗರದಲ್ಲಿ 5230 ಅಪಘಾತ ಪ್ರಕರಣಗಳು ನಡೆದಿವೆ. ಇವುಗಳಲ್ಲಿ ಶೇ 38ರಷ್ಟು ಜನ ದ್ವಿಚಕ್ರ ವಾಹನ ಸವಾರರು ಮೃತಪಟ್ಟಿದ್ದಾರೆ. ಈ ಬಗ್ಗೆ ಸಮೀಕ್ಷೆ ನಡೆಸಿದಾಗ ಹೆಲ್ಮೆಟ್ ಇಲ್ಲದೇ ಪ್ರಯಾಣ ಮಾಡುತ್ತಿದ್ದರಿಂದಲೇ ಸಾವು ಸಂಭವಿಸಿದೆ ಎಂದು ತಿಳಿದು ಬಂದಿದೆ. [ಬೆಂಗಳೂರು ಸಂಚಾರಿ ಪೊಲೀಸ್]

Bangalore traffic police

ಆದ್ದರಿಂದ ಹೆಲ್ಮೆಟ್ ಧರಿಸುವ ಬಗ್ಗೆ ವಾಹನ ಸವಾರರಿಗೆ ಜಾಗೃತಿ ಮೂಡಿಸಲು ಬೆಂಗಳೂರು ಸಂಚಾರಿ ಪೊಲೀಸರು ನಿರ್ಧರಿಸಿದ್ದಾರೆ. ಅದರ ಅಂಗವಾಗಿ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಜ್ಜಾಗಿದ್ದಾರೆ. ಈ ಕಾರ್ಯಾಚರಣೆ ಫೆ.13ರಿಂದ 19ರವರಗೆ ನಗರ ವ್ಯಾಪ್ತಿಯಲ್ಲಿ ನಡೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. [ಮೃತ್ಯುರೂಪಿ ನಾಯಂಡಹಳ್ಳಿ ಜಂಕ್ಷನ್]

ಈಗಾಗಲೇ ಬೆಂಗಳೂರು ಸಂಚಾರಿ ಪೊಲೀಸರು ಹೆಲ್ಮೆಟ್ ಧರಿಸಿ ಸುರಕ್ಷಿತವಾಗಿ ಪ್ರಯಾಣಿಸಿ ಎಂದು ಜನರಿಗೆ ಹಲವಾರು ಬಾರಿ ಜಾಗೃತಿ ಮೂಡಿಸಿದ್ದಾರೆ. ಆದರೆ, ಜನರು ಅದರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಆದ್ದರಿಂದ ಫೆ.13ರಿಂದ 19ರ ತನಕ ಹೆಲ್ಮೆಟ್ ಧರಿಸದೆ ಪ್ರಯಾಣ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಜೊತೆಗೆ ಅರಿವು ಮೂಡಿಸುವ ಕಾರ್ಯವನ್ನು ಸಂಚಾರಿ ಪೊಲೀಸರು ಆರಂಭಿಸಿದ್ದಾರೆ. [ಹೆಲ್ಮೆಟ್ ಧರಿಸದೆ ಸಾವಿಗೀಡಾದ ಸುಬ್ಬು ಏನಾದ?]

2013ರಲ್ಲಿ ಸಂಭವಿಸಿದ ರಸ್ತೆ ಅಪಘಾತದ ಬಗ್ಗೆ ಬೆಂಗಳೂರು ಸಂಚಾರಿ ಪೊಲೀಸರು ನೀಡಿರುವ ಮಾಹಿತಿ ಹೀಗಿದೆ. 2013ರಲ್ಲಿ ಒಟ್ಟು 5,230 ರಸ್ತೆ ಅಪಘಾತ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 771 ಜನರು ಮೃತಪಟ್ಟಿದ್ದಾರೆ. ಇವರಲ್ಲಿ ಶೇ 38ರಷ್ಟು ಜನರು ದ್ವಿಚಕ್ರ ವಾಹನ ಸವಾರರಾಗಿದ್ದಾರೆ. ಆದ್ದರಿಂದ ಮತ್ತೊಂದು ಸುತ್ತಿನಲ್ಲಿ ಹೆಲ್ಮೆಟ್ ಧರಿಸಿ ಸಂಚರಿಸುವ ಬಗ್ಗೆ ಸವಾರರಿಗೆ ಮಾಹಿತಿ ನೀಡಲು ನಿರ್ಧರಿಸಲಾಗಿದೆ. ಈ ಅಭಿಯಾನದಲ್ಲಿ ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ. [ಸವಾರರ ತಲೆಗೆ ಸರಕಾರದ ಹೆಲ್ಮೆಟ್]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+