ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ಲಾಕ್ ಡೌನ್ ಅಂತ್ಯ; ಟ್ರಾಫಿಕ್ ಜಾಮ್

|
Google Oneindia Kannada News

ಬೆಂಗಳೂರು, ಜುಲೈ 22 : ಕೊರೊನಾ ವೈರಸ್ ಸೋಂಕು ಹರಡುವಿಕೆ ತಡೆಯಲು ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಜಾರಿಗೊಳಿಸಿದ್ದ ಒಂದು ವಾರದ ಲಾಕ್ ಡೌನ್ ಬುಧವಾರ ಮುಂಜಾನೆ ಅಂತ್ಯಗೊಂಡಿದೆ. ಇಂದಿನಿಂದ ನಗರದಲ್ಲಿ ಸಂಚಾರ ದಟ್ಟಣೆ ಪುನಃ ಆರಂಭವಾಗಲಿದೆ

Recommended Video

America ನಂತರ Indiaದಲ್ಲಿ ಅತಿ ಹೆಚ್ಚು Covid test | Oneindia Kannada

ಸರ್ಕಾರ ಜುಲೈ 14ರಿಂದ 22ರ ಬೆಳಗ್ಗೆ 5ಗಂಟೆ ತನಕ ಲಾಕ್ ಡೌನ್ ಘೋಷಣೆ ಮಾಡಿತ್ತು. ಬುಧವಾರ ಬೆಳಗ್ಗೆ 5 ಗಂಟೆಗೆ ಲಾಕ್ ಡೌನ್ ಅವಧಿ ಮುಗಿದಿದೆ. "ಬೆಂಗಳೂರು ಸೇರಿದಂತೆ ಯಾವುದೇ ಜಿಲ್ಲೆಗಳಲ್ಲಿ ಇನ್ನು ಮುಂದೆ ಲಾಕ್ ಡೌನ್ ಇರುವುದಿಲ್ಲ" ಎಂದು ರಾಜ್ಯವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಬೆಂಗಳೂರು ನಗರದಲ್ಲಿ ಲಾಕ್ ಡೌನ್ ವಿಸ್ತರಣೆ ಇಲ್ಲ ಬೆಂಗಳೂರು ನಗರದಲ್ಲಿ ಲಾಕ್ ಡೌನ್ ವಿಸ್ತರಣೆ ಇಲ್ಲ

ಲಾಕ್ ಡೌನ್ ಮುಗಿದ ಹಿನ್ನಲೆಯಲ್ಲಿ ಬಿಎಂಟಿಸಿ, ಕೆಎಸ್ಆರ್‌ಟಿಸಿ ಬಸ್‌ಗಳು ರಸ್ತೆಗೆ ಇಳಿಯಲಿವೆ. ಆಟೋ, ಟ್ಯಾಕ್ಸಿ, ಖಾಸಗಿ ವಾಹನಗಳ ಸಂಚಾರ ಆರಂಭವಾಗಲಿದೆ. ಬುಧವಾರ ನಗರದ ವಿವಿಧ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗುವುದು ಖಚಿತವಾಗಿದೆ.

ಬೆಂಗಳೂರು ನಗರದಲ್ಲಿ ಭಾನುವಾರದ ಕರ್ಫ್ಯೂ ಮತ್ತೆ ಜಾರಿ ಬೆಂಗಳೂರು ನಗರದಲ್ಲಿ ಭಾನುವಾರದ ಕರ್ಫ್ಯೂ ಮತ್ತೆ ಜಾರಿ

ಕರ್ನಾಟಕ ಸರ್ಕಾರ ಬೆಂಗಳೂರು ಅನ್ ಲಾಕ್ ಮಾರ್ಗಸೂಚಿಯನ್ನು ಮಂಗಳವಾರವೇ ಪ್ರಕಟಿಸಿದೆ. ಲಾಕ್ ಡೌನ್ ಅಂತ್ಯಗೊಂಡರೂ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ನಗರದಲ್ಲಿ ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆ ತನಕ ಕರ್ಫ್ಯೂ ಇರಲಿದೆ.

ಬೆಂಗಳೂರು ಲಾಕ್ ಡೌನ್; ಯಡಿಯೂರಪ್ಪ ಮಹತ್ವದ ಟ್ವೀಟ್ ಬೆಂಗಳೂರು ಲಾಕ್ ಡೌನ್; ಯಡಿಯೂರಪ್ಪ ಮಹತ್ವದ ಟ್ವೀಟ್

ರಸ್ತೆಗೆ ಇಳಿದ ಬಿಎಂಟಿಸಿ ಬಸ್

ರಸ್ತೆಗೆ ಇಳಿದ ಬಿಎಂಟಿಸಿ ಬಸ್

ಲಾಕ್ ಡೌನ್ ಅಂತ್ಯಗೊಂಡ ಹಿನ್ನಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗಳು ರಸ್ತೆಗೆ ಇಳಿದಿವೆ. ಇಂದು ಬೆಳಗ್ಗೆ 5 ರಿಂದ ರಾತ್ರಿ 9ರ ತನಕ 1500 ಬಸ್‌ಗಳನ್ನು ಓಡಿಸಲಾಗುತ್ತದೆ ಎಂದು ಬಿಎಂಟಿಸಿ ಹೇಳಿದೆ. ಪ್ರಯಾಣಿಕರು ಮಾಸ್ಕ್ ಧರಿಸುವುದು, ಬಸ್‌ನಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯ.

ಪಾರ್ಕ್‌ನಲ್ಲಿ ವಾಕಿಂಗ್ ಮಾತ್ರ

ಪಾರ್ಕ್‌ನಲ್ಲಿ ವಾಕಿಂಗ್ ಮಾತ್ರ

ಕರ್ನಾಟಕ ಸರ್ಕಾರ ಪ್ರಕಟಿಸಿದ ಅನ್ ಲಾಕ್ ಮಾರ್ಗಸೂಚಿ ಅನ್ವಯ ನಗರದ ಪಾರ್ಕ್‌ಗಳಲ್ಲಿ ಬೆಂಜ್‌ಗಳಲ್ಲಿ ಕುಳಿತುಕೊಳ್ಳುವಂತಿಲ್ಲ, ಜಿಮ್ ಸಲಕರಣೆಗಳನ್ನು ಉಪಯೋಗ ಮಾಡುವಂತಿಲ್ಲ. ಕೇವಲ ವಾಕಿಂಗ್ ಮಾಡಬಹುದಾಗಿದೆ.

ರಾತ್ರಿ ಕರ್ಫ್ಯೂ ಜಾರಿ

ರಾತ್ರಿ ಕರ್ಫ್ಯೂ ಜಾರಿ

ಬೆಂಗಳೂರು ನಗರದಲ್ಲಿ ಲಾಕ್ ಡೌನ್ ಅಂತ್ಯಗೊಂಡರೂ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ನಗರದಲ್ಲಿ ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆ ತನಕ ಕರ್ಫ್ಯೂ ಇರಲಿದೆ. ಆದ್ದರಿಂದ, ನಗರದಿಂದ ಹೊರ ಹೋಗುವ ಬಸ್‌ಗಳು ರಾತ್ರಿ 9ಕ್ಕೆ ಹೊರಡಲಿವೆ. ಬಿಎಂಟಿಸಿ ಸಂಚಾರ ಕೂಡಾ ರಾತ್ರಿ 9ಕ್ಕೆ ಅಂತ್ಯಗೊಳ್ಳಲಿದೆ.

ಭಾನುವಾರದ ಕರ್ಫ್ಯೂ

ಭಾನುವಾರದ ಕರ್ಫ್ಯೂ

ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಲಾಕ್ ಡೌನ್ ಇರುವುದಿಲ್ಲ ಆದರೆ, ಭಾನುವಾರದ ಕರ್ಫ್ಯೂ ಜಾರಿಯಲ್ಲಿರಲಿದೆ. ಶನಿವಾರ ರಾತ್ರಿ 9 ಗಂಟೆಯಿಂದ ಸೋಮವಾರ ಮುಂಜಾನೆ 5 ಗಂಟೆಯ ತನಕ ಕರ್ಫ್ಯೂ ಜಾರಿಯಲ್ಲಿರುತ್ತದೆ.

English summary
Week long lockdown in Bengaluru city ended on 5 am July 22, 2020. Lockdown will not be extended. Sunday Curfew will continue in the city.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X