ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವೀಕೆಂಡ್ ಲಾಕ್‌ಡೌನ್: ಪೊಲೀಸರಿಂದ ಅಂಗಡಿ ಮುಂಗಟ್ಟು ಬಂದ್

|
Google Oneindia Kannada News

ಬೆಂಗಳೂರು, ಏಪ್ರಿಲ್ 23: ಕೊರೋನಾ ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ ರಾಜಧಾನಿ ವೀಕೆಂಡ್ ಲಾಕ್‌ಡೌನ್‌ಗೆ ಸಿದ್ಧವಾಗಿದೆ. ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆ ವರೆಗೆ ರಾಜ್ಯ ಹಾಗೂ ರಾಜಧಾನಿಯಲ್ಲಿ ಮೊದಲ ವೀಕೆಂಡ್ ಲಾಕ್ ಡೌನ್ ಜಾರಿಗೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ತುರ್ತು ಸೇವೆ ಹೊರತು ಪಡಿಸಿ ಬಹುತೇಕ ಎಲ್ಲಾ ಸೇವೆ ಸ್ಥಗಿತಗೊಳ್ಳಲಿದೆ.

ನಾಲ್ಕು ಗಂಟೆ ಸಮಯ: ವೀಕೆಂಡ್ ಅವಧಿಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಮೆಟ್ರೋ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಇದರೊಂದಿಗೆ ಬಹುತೇಕ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತಿದೆ. ಬೆಂಗಳೂರು ಪೊಲೀಸರು ಈಗಾಗಲೇ ನಗರದ ಪ್ರಮುಖ ವಾಣಿಜ್ಯ ವಹಿವಾಟು ಮಾರುಕಟ್ಟೆಗಳನ್ನು ಬಂದ್ ಮಾಡಿಸುತ್ತಿದ್ದಾರೆ. ವೀಕೆಂಡ್ ಲಾಕ್ ಡೌನ್ ಸಮಯದಲ್ಲಿ ಬೆಳಗ್ಗೆ 6 ಗಂಟೆಯಿಂದ 10 ಗಂಟೆ ವರೆಗೂ ಅಗತ್ಯ ವಸ್ತುಗಳನ್ನು ಖರೀದಿ ಮಾಡಲು ಅವಕಾಶ ನೀಡಲಾಗಿದೆ. ಹೊರತು ಪಡಿಸಿ ಬಹುತೇಕ ಎಲ್ಲಾ ವಹಿವಾಟು ಸ್ಥಗಿತಗೊಳ್ಳಲಿದೆ.

Weekend Lockdown effect: Police shutting down Shops

ಮಧ್ಯಾಹ್ನವೇ ಬೀದಿಗೆ ಇಳಿದ ಪೊಲೀಸರು: ವೀಕೆಂಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲು ಬೆಂಗಳೂರು ಪೊಲೀಸರು ಬೀದಿಗೆ ಇಳಿದಿದ್ದಾರೆ. ರಾತ್ರಿ ಹತ್ತು ಗಂಟೆಗೆ ಲಾಕ್ ಡೌನ್ ಆರಂಭ ಹಿನ್ನೆಲೆಯಲ್ಲಿ ಪೊಲೀಸರು ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವಂತೆ ಜಾಗೃತಿ ಮೂಡಿಸುತ್ತಿದ್ದಾರೆ. ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡದಂತೆ ಎಚ್ಚರಿಕೆ ನೀಡುತ್ತಿದ್ದಾರೆ. ಪೊಲೀಸರ ಎಚ್ಚರಿಕೆ ಹಿನ್ನೆಲೆಯಲ್ಲಿ ಬೆಂಗಳೂರಿನ ಚಿಕ್ಕಪೇಟೆ, ಕೆ.ಆರ್. ಮಾರ್ಕೆಟ್, ಯಶವಂತಪುರ, ಶಿವಾಜಿನಗರ ಮಾರುಕಟ್ಟೆಗಳನ್ನು ಈಗಾಗಲೇ ಸಂಪೂರ್ಣ ಬಂದ್ ಮಾಡಿದ್ದಾರೆ.

Weekend Lockdown effect: Police shutting down Shops

ಮೆಟ್ರೋ ಸೇವೆ ಸ್ಥಗಿತ: ವೀಕೆಂಡ್ ಲಾಕ್‌ಡೌನ್ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ. ಸೋಮವಾರದಿಂದ ಶುಕ್ರವಾರದ ಸಂಜೆ ವರೆಗೆ ಎಂದಿನಂತೆ ಮೆಟ್ರೋ ಸಂಚರಿಸಲಿದೆ. ಉಳಿದಂತೆ ಶನಿವಾರ ಮತ್ತು ಭಾನುವಾರ ವೀಕೆಂಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಮೆಟ್ರೋ ಸೇವೆ ಸ್ಥಗಿತಗೊಳಿಸಲಾಗಿದೆ.

English summary
Police closing all the shops in the wake of a weekend Lockdown in Bengaluru know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X