ಗಮನಿಸಿ: ಜ.22ರಿಂದ ನಮ್ಮ ಮೆಟ್ರೋ ರೈಲು ಸಂಚಾರ ಸಮಯದಲ್ಲಿ ಬದಲಾವಣೆ
ಬೆಂಗಳೂರು, ಜನವರಿ 21: ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿದ ಹಿನ್ನೆಲೆ ಬೆಂಗಳೂರಿನ ನಮ್ಮ ಮೆಟ್ರೋ ರೈಲು ಸಂಚಾರ ನಾಳೆಯಿಂದ (ಜನವರಿ 22) ಯಥಾಸ್ಥಿತಿಯಲ್ಲಿರಲಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.
ವಾರಾಂತ್ಯದ ಕರ್ಫ್ಯೂ ವಿಧಿಸಿದ್ದ ಹಿನ್ನೆಲೆಯಲ್ಲಿ ಹಾಗೂ ಸಂಚಾರ ನಿರ್ಬಂಧಗಳ ಪರಿಣಾಮ ನಮ್ಮ ಮೆಟ್ರೋ ರೈಲುಗಳ ಕಾರ್ಯಾಚರಣೆಯನ್ನು ಕಡಿಮೆ ಆವರ್ತನದೊಂದಿಗೆ ಕಾರ್ಯನಿರ್ವಹಿಸಲಾಗಿತ್ತು.
ರಾಜ್ಯ ಸರ್ಕಾರವು ವಾರಾಂತ್ಯದ ಕರ್ಫ್ಯೂ ವಾಪಸ್ ಪಡೆದಿರುವದರಿಂದ ದಿನಾಂಕ ಜ.22ರಿಂದ ವಾರದ ಎಲ್ಲಾ ದಿನಗಳಲ್ಲಿ ಭಾನುವಾರ ಹೊರತುಪಡಿಸಿ ಮೆಟ್ರೋ ರೈಲುಗಳ ಸೇವೆಯು ಬೆಳಗ್ಗೆ 5 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಹಾಗೂ ಭಾನುವಾರದಂದು ಬೆಳಗ್ಗೆ 7 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಲಭ್ಯವಿರುತ್ತದೆ.

ಆ ಪ್ರಕಾರ ಪ್ರತಿ ಐದು ನಿಮಿಷಕ್ಕೆ ಒಂದರಂತೆ ಮೆಟ್ರೋ ರೈಲು ಸಂಚಾರ ಮಾಡಲಿದೆ. ವೀಕೆಂಡ್ ಕರ್ಫ್ಯೂ ವೇಳೆ 30 ನಿಮಿಷಗಳಿಗೆ ಒಂದು ಮೆಟ್ರೋ ರೈಲು ಕಾರ್ಯಾಚರಣೆಯಾಗುತ್ತಿತ್ತು. ಸದ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ರದ್ದು ಮಾಡಿದ ಹಿನ್ನಲೆ ಮೊದಲಿನ ಫ್ರೀಕ್ವೆನ್ಸಿಯಲ್ಲೇ ಮೆಟ್ರೋ ರೈಲುಗಳ ಕಾರ್ಯಾಚರಣೆ ನಡೆಯಲಿದೆ ಎಂದು ಮೆಟ್ರೋ ನಿಗಮದ ಎಂಡಿ ಅಂಜುಂ ಪರ್ವೇಜ್ ಮಾಹಿತಿ ನೀಡಿದ್ದಾರೆ.
ವೀಕೆಂಡ್ ಕರ್ಫ್ಯೂ ವೇಳೆ ನಮ್ಮ ಮೆಟ್ರೋದಲ್ಲಿ ಶೇಕಡಾ 50ರಷ್ಟು ಮಾತ್ರ ಪ್ರಯಾಣಿಕರಿಗೆ ಅವಕಾಶ ಇತ್ತು. ವೀಕೆಂಡ್ ಕರ್ಫ್ಯೂ ವೇಳೆ ನಮ್ಮ ಮೆಟ್ರೋ ಸಂಚಾರಕ್ಕೆ ಅಡ್ಡಿಯಿರಲಿಲ್ಲ. ಶನಿವಾರ ಮತ್ತು ಭಾನುವಾರ ಎಂದಿನಂತೆ ನಮ್ಮ ಮೆಟ್ರೋ ರೈಲು ಸಂಚರಿಸುತ್ತಿತ್ತು.
ನಮ್ಮ ಮೆಟ್ರೋ ಹಸಿರು, ನೇರಳೆ ಮಾರ್ಗದಲ್ಲಿ ಯಾವುದೇ ಬದಲಾವಣೆ ಇರಲಿಲ್ಲ. ಆದರೆ ನಮ್ಮ ಮೆಟ್ರೋದಲ್ಲಿ ಶೇಕಡಾ 50ರಷ್ಟು ಪ್ರಯಾಣಿಕರಿಗೆ ಅವಕಾಶ ಇತ್ತು. ಮೆಟ್ರೋ ರೈಲಿನಲ್ಲಿ 1800-1900 ಜನ ಪ್ರಯಾಣಿಸುತ್ತಿದ್ದರು.
ಕೋವಿಡ್ ಹೆಚ್ಚಳ ಹಿನ್ನೆಲೆ 800-900 ಜನ ಪ್ರಯಾಣಕ್ಕೆ ಅವಕಾಶ ನೀಡಲಾಗಿತ್ತು. ಕೊರೊನಾ ನಿಯಮ ಪಾಲಿಸಿ ಮೆಟ್ರೋ ರೈಲು ಓಡಿಸಲು ನಿರ್ಧಾರ ಮಾಡಿದ್ದೇವೆ. ನಮ್ಮ ಮೆಟ್ರೋ ಸಂಚಾರದ ಅವಧಿ ಕಡಿತಗೊಳಿಸಿ ಮೆಟ್ರೋ ಕಾರ್ಯಾಚರಣೆ ನಡೆಸಲಿದೆ. ವೀಕೆಂಡ್ ಕರ್ಫ್ಯೂ ವೇಳೆ 30 ನಿಮಿಷಕ್ಕೊಂದು ಮೆಟ್ರೋ ಸಂಚಾರ ಮಾಡುತ್ತಿತ್ತು.

ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ರದ್ದಾಗಿದೆ
ಕರ್ನಾಟಕದಲ್ಲಿ ನಾಳೆಯಿಂದಲೇ (ಜ.21) ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ರದ್ದಾಗಿದೆ. ಯಾವುದೇ ಶಾಸಕರು ಅಥವಾ ಸಚಿವರ ಒತ್ತಡಕ್ಕೆ ಮಣಿದು ಕರ್ಫ್ಯೂ ರದ್ದುಪಡಿಸುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿಲ್ಲ. ತಜ್ಞರ ಅಭಿಪ್ರಾಯದಂತೆ ವೀಕೆಂಡ್ ಕರ್ಫ್ಯೂ ರದ್ದುಪಡಿಸಲಾಗಿದೆ ಎಂದು ಸಚಿವ ಆರ್. ಅಶೋಕ್ ತಿಳಿಸಿದರು.
ರಾಜ್ಯದಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 7ರವರೆಗೆ ರಾತ್ರಿ ಕರ್ಫ್ಯೂ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ. ಆಸ್ಪತ್ರೆಗೆ ಸೇರುವವರ ಸಂಖ್ಯೆ ಹೆಚ್ಚಾದರೆ ವೀಕೆಂಡ್ ಕರ್ಫ್ಯೂ ಜಾರಿಮಾಡುವುದು ಅನಿವಾರ್ಯವಾಗುತ್ತದೆ. ವೀಕೆಂಡ್ ಕರ್ಫ್ಯೂ ಹೊರತುಪಡಿಸಿ ಉಳಿದೆಲ್ಲ ಕೊವಿಡ್ ನಿಯಮಗಳು ಎಂದಿನಂತೆ ಮುಂದುವರಿಯಲಿವೆ ಎಂದರು.
ಆಸ್ಪತ್ರೆಗೆ ಸೇರುವವರ ಸಂಖ್ಯೆ ಕಡಿಮೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದರಿಂದ ವೀಕೆಂಡ್ ಕರ್ಫ್ಯೂ ರದ್ದುಪಡಿಸಲಾಗಿದೆ. ಕೊರೊನಾ 3ನೇ ಅಲೆಯಲ್ಲಿ ಆಸ್ಪತ್ರೆಗೆ ಸೇರುವವರ ಸಂಖ್ಯೆ ಶೇ.5ರಷ್ಟು ಮಾತ್ರ ಇದೆ. ಎಲ್ಲ ತಜ್ಞರ ಒಟ್ಟು ಅಭಿಪ್ರಾಯ ಪಡೆದೇ ನಿಯಮಗಳನ್ನು ರೂಪಿಸಲಲಾಗಿದೆ. ವೀಕೆಂಡ್ ಕರ್ಫ್ಯೂ ರದ್ದು ಪಡಿಸುವಾಗಲೂ ಅವರ ಅಭಿಪ್ರಾಯಗಳನ್ನು ಪಡೆದುಕೊಳ್ಳಲಾಗಿದೆ. ಪಾರ್ಟಿ, ಬಾರ್‌ಗಳಲ್ಲಿ ಚಟುವಟಿಕೆ ನಿಯಂತ್ರಿಸುವ ಉದ್ದೇಶದಿಂದ ರಾಜ್ಯದಲ್ಲಿ ನೈಟ್ ಕರ್ಫ್ಯೂ ಮುಂದುವರಿಯಲಿದೆ ಎಂದು ಅವರು ತಿಳಿಸಿದರು.
ಹೋಟೆಲ್, ಬಾರ್, ಪಬ್ ಓಪನ್; ಮದ್ಯಪ್ರಿಯರಿಗೆ ಗುಡ್ ನ್ಯೂಸ್
ರಾಜ್ಯದಲ್ಲಿ ವಾರಾಂತ್ಯ ಕರ್ಫ್ಯೂ ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದ್ದು, ವಾರಾಂತ್ಯ ದಿನಗಳಾದ ಶನಿವಾರ ಮತ್ತು ಭಾನುವಾರ ಸಹ ರಾತ್ರಿ 10 ಗಂಟೆಯವರೆಗೆ ಹೋಟೆಲ್, ಬಾರ್ & ರೆಸ್ಟೋರೆಂಟ್ ಮತ್ತು ಪಬ್ ತೆರೆಯಲು ಅನುಮತಿ ನೀಡಲಾಗಿದೆ. ಈ ವೇಳೆ ಕೊರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದೆ.
Recommended Video
ಇದರಿಂದ ಮದ್ಯಪ್ರಿಯರು, ವೀಕೆಂಡ್ ಪಾರ್ಟಿ ಪ್ರಿಯರಿಗೆ ಖುಷಿಯಾಗಿದ್ದಾರೆ. ಇನ್ನು ಹೋಟೆಲ್ ಮತ್ತು ಬಾರ್ & ರೆಸ್ಟೋರೆಂಟ್ ಮಾಲೀಕರಿಗೆ ನಿಟ್ಟುಸಿರು ಬಿಟ್ಟಂತಾಗಿದೆ. ವಾರಾಂತ್ಯದಲ್ಲಿಯೇ ಉತ್ತಮ ವ್ಯಾಪಾರವಾಗಲಿದ್ದು, ವಾರಾಂತ್ಯ ಕರ್ಫ್ಯೂ ರದ್ದುಗೊಳಿಸಿರುವುದು ಉದ್ದಿಮೆದಾರರಿಗೆ ಬಿಗ್ ರಿಲೀಫ್ ದೊರೆತಂತಾಗಿದೆ.
-
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Namma Metro: ಏರ್ಪೋರ್ಟ್ ಮೆಟ್ರೋ ನೀಲಿ ಮಾರ್ಗಕ್ಕೆ ಬರಲಿವೆ 2 ಡ್ರವರ್ಲೆಸ್ ರೈಲು -
IPL 2026: ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್ ಟಿಕೆಟ್ ಇದ್ದರೆ 'ನಮ್ಮ ಮೆಟ್ರೋ' ಪ್ರಯಾಣ ಉಚಿತ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications