ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗಮನಿಸಿ: ಜ.22ರಿಂದ ನಮ್ಮ ಮೆಟ್ರೋ ರೈಲು ಸಂಚಾರ ಸಮಯದಲ್ಲಿ ಬದಲಾವಣೆ

|
Google Oneindia Kannada News

ಬೆಂಗಳೂರು, ಜನವರಿ 21: ರಾಜ್ಯದಲ್ಲಿ ವೀಕೆಂಡ್​ ಕರ್ಫ್ಯೂ ರದ್ದುಗೊಳಿಸಿದ ಹಿನ್ನೆಲೆ ಬೆಂಗಳೂರಿನ ನಮ್ಮ ಮೆಟ್ರೋ ರೈಲು ಸಂಚಾರ ನಾಳೆಯಿಂದ (ಜನವರಿ 22) ಯಥಾಸ್ಥಿತಿಯಲ್ಲಿರಲಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ವಾರಾಂತ್ಯದ ಕರ್ಫ್ಯೂ ವಿಧಿಸಿದ್ದ ಹಿನ್ನೆಲೆಯಲ್ಲಿ ಹಾಗೂ ಸಂಚಾರ ನಿರ್ಬಂಧಗಳ ಪರಿಣಾಮ ನಮ್ಮ ಮೆಟ್ರೋ ರೈಲುಗಳ ಕಾರ್ಯಾಚರಣೆಯನ್ನು ಕಡಿಮೆ ಆವರ್ತನದೊಂದಿಗೆ ಕಾರ್ಯನಿರ್ವಹಿಸಲಾಗಿತ್ತು.

ರಾಜ್ಯ ಸರ್ಕಾರವು ವಾರಾಂತ್ಯದ ಕರ್ಫ್ಯೂ ವಾಪಸ್ ಪಡೆದಿರುವದರಿಂದ ದಿನಾಂಕ ಜ.22ರಿಂದ ವಾರದ ಎಲ್ಲಾ ದಿನಗಳಲ್ಲಿ ಭಾನುವಾರ ಹೊರತುಪಡಿಸಿ ಮೆಟ್ರೋ ರೈಲುಗಳ ಸೇವೆಯು ಬೆಳಗ್ಗೆ 5 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಹಾಗೂ ಭಾನುವಾರದಂದು ಬೆಳಗ್ಗೆ 7 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಲಭ್ಯವಿರುತ್ತದೆ.

Weekrnd Curfew Withdraws: Namma Metro Train Services as Usual From 5 am to 11 pm From Jan 22

ಆ ಪ್ರಕಾರ ಪ್ರತಿ ಐದು ನಿಮಿಷಕ್ಕೆ ಒಂದರಂತೆ ಮೆಟ್ರೋ ರೈಲು ಸಂಚಾರ ಮಾಡಲಿದೆ. ವೀಕೆಂಡ್ ಕರ್ಫ್ಯೂ ವೇಳೆ 30 ನಿಮಿಷಗಳಿಗೆ ಒಂದು ಮೆಟ್ರೋ ರೈಲು ಕಾರ್ಯಾಚರಣೆಯಾಗುತ್ತಿತ್ತು. ಸದ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ರದ್ದು ಮಾಡಿದ ಹಿನ್ನಲೆ ಮೊದಲಿನ ಫ್ರೀಕ್ವೆನ್ಸಿಯಲ್ಲೇ ಮೆಟ್ರೋ ರೈಲುಗಳ ಕಾರ್ಯಾಚರಣೆ ನಡೆಯಲಿದೆ ಎಂದು ಮೆಟ್ರೋ ನಿಗಮದ ಎಂಡಿ ಅಂಜುಂ ಪರ್ವೇಜ್ ಮಾಹಿತಿ ನೀಡಿದ್ದಾರೆ.

ವೀಕೆಂಡ್ ಕರ್ಫ್ಯೂ​ ವೇಳೆ ನಮ್ಮ ಮೆಟ್ರೋದಲ್ಲಿ ಶೇಕಡಾ 50ರಷ್ಟು ಮಾತ್ರ ಪ್ರಯಾಣಿಕರಿಗೆ ಅವಕಾಶ ಇತ್ತು. ವೀಕೆಂಡ್ ಕರ್ಫ್ಯೂ​ ವೇಳೆ ನಮ್ಮ ಮೆಟ್ರೋ ಸಂಚಾರಕ್ಕೆ ಅಡ್ಡಿಯಿರಲಿಲ್ಲ. ಶನಿವಾರ ಮತ್ತು ಭಾನುವಾರ ಎಂದಿನಂತೆ ನಮ್ಮ ಮೆಟ್ರೋ ರೈಲು ಸಂಚರಿಸುತ್ತಿತ್ತು.

ನಮ್ಮ ಮೆಟ್ರೋ ಹಸಿರು, ನೇರಳೆ ಮಾರ್ಗದಲ್ಲಿ ಯಾವುದೇ ಬದಲಾವಣೆ ಇರಲಿಲ್ಲ. ಆದರೆ ನಮ್ಮ ಮೆಟ್ರೋದಲ್ಲಿ ಶೇಕಡಾ 50ರಷ್ಟು ಪ್ರಯಾಣಿಕರಿಗೆ ಅವಕಾಶ ಇತ್ತು. ಮೆಟ್ರೋ ರೈಲಿನಲ್ಲಿ 1800-1900 ಜನ ಪ್ರಯಾಣಿಸುತ್ತಿದ್ದರು.

ಕೋವಿಡ್​ ಹೆಚ್ಚಳ ಹಿನ್ನೆಲೆ 800-900 ಜನ ಪ್ರಯಾಣಕ್ಕೆ ಅವಕಾಶ ನೀಡಲಾಗಿತ್ತು. ಕೊರೊನಾ ನಿಯಮ ಪಾಲಿಸಿ ಮೆಟ್ರೋ ರೈಲು ಓಡಿಸಲು ನಿರ್ಧಾರ ಮಾಡಿದ್ದೇವೆ. ನಮ್ಮ ಮೆಟ್ರೋ ಸಂಚಾರದ ಅವಧಿ ಕಡಿತಗೊಳಿಸಿ ಮೆಟ್ರೋ ಕಾರ್ಯಾಚರಣೆ ನಡೆಸಲಿದೆ. ವೀಕೆಂಡ್ ಕರ್ಫ್ಯೂ ವೇಳೆ 30 ನಿಮಿಷಕ್ಕೊಂದು ಮೆಟ್ರೋ ಸಂಚಾರ ಮಾಡುತ್ತಿತ್ತು.

Weekrnd Curfew Withdraws: Namma Metro Train Services as Usual From 5 am to 11 pm From Jan 22

ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ರದ್ದಾಗಿದೆ

ಕರ್ನಾಟಕದಲ್ಲಿ ನಾಳೆಯಿಂದಲೇ (ಜ.21) ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ರದ್ದಾಗಿದೆ. ಯಾವುದೇ ಶಾಸಕರು ಅಥವಾ ಸಚಿವರ ಒತ್ತಡಕ್ಕೆ ಮಣಿದು ಕರ್ಫ್ಯೂ ರದ್ದುಪಡಿಸುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿಲ್ಲ. ತಜ್ಞರ ಅಭಿಪ್ರಾಯದಂತೆ ವೀಕೆಂಡ್ ಕರ್ಫ್ಯೂ ರದ್ದುಪಡಿಸಲಾಗಿದೆ ಎಂದು ಸಚಿವ ಆರ್. ಅಶೋಕ್ ತಿಳಿಸಿದರು.

ರಾಜ್ಯದಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 7ರವರೆಗೆ ರಾತ್ರಿ ಕರ್ಫ್ಯೂ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ. ಆಸ್ಪತ್ರೆಗೆ ಸೇರುವವರ ಸಂಖ್ಯೆ ಹೆಚ್ಚಾದರೆ ವೀಕೆಂಡ್ ಕರ್ಫ್ಯೂ ಜಾರಿಮಾಡುವುದು ಅನಿವಾರ್ಯವಾಗುತ್ತದೆ. ವೀಕೆಂಡ್ ಕರ್ಫ್ಯೂ ಹೊರತುಪಡಿಸಿ ಉಳಿದೆಲ್ಲ ಕೊವಿಡ್ ನಿಯಮಗಳು ಎಂದಿನಂತೆ ಮುಂದುವರಿಯಲಿವೆ ಎಂದರು.

ಆಸ್ಪತ್ರೆಗೆ ಸೇರುವವರ ಸಂಖ್ಯೆ ಕಡಿಮೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದರಿಂದ ವೀಕೆಂಡ್ ಕರ್ಫ್ಯೂ ರದ್ದುಪಡಿಸಲಾಗಿದೆ. ಕೊರೊನಾ 3ನೇ ಅಲೆಯಲ್ಲಿ ಆಸ್ಪತ್ರೆಗೆ ಸೇರುವವರ ಸಂಖ್ಯೆ ಶೇ.5ರಷ್ಟು ಮಾತ್ರ ಇದೆ. ಎಲ್ಲ ತಜ್ಞರ ಒಟ್ಟು ಅಭಿಪ್ರಾಯ ಪಡೆದೇ ನಿಯಮಗಳನ್ನು ರೂಪಿಸಲಲಾಗಿದೆ. ವೀಕೆಂಡ್ ಕರ್ಫ್ಯೂ ರದ್ದು ಪಡಿಸುವಾಗಲೂ ಅವರ ಅಭಿಪ್ರಾಯಗಳನ್ನು ಪಡೆದುಕೊಳ್ಳಲಾಗಿದೆ. ಪಾರ್ಟಿ, ಬಾರ್‌ಗಳಲ್ಲಿ ಚಟುವಟಿಕೆ ನಿಯಂತ್ರಿಸುವ ಉದ್ದೇಶದಿಂದ ರಾಜ್ಯದಲ್ಲಿ ನೈಟ್ ಕರ್ಫ್ಯೂ ಮುಂದುವರಿಯಲಿದೆ ಎಂದು ಅವರು ತಿಳಿಸಿದರು.

ಹೋಟೆಲ್, ಬಾರ್, ಪಬ್ ಓಪನ್; ಮದ್ಯಪ್ರಿಯರಿಗೆ ಗುಡ್ ನ್ಯೂಸ್
ರಾಜ್ಯದಲ್ಲಿ ವಾರಾಂತ್ಯ ಕರ್ಫ್ಯೂ ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದ್ದು, ವಾರಾಂತ್ಯ ದಿನಗಳಾದ ಶನಿವಾರ ಮತ್ತು ಭಾನುವಾರ ಸಹ ರಾತ್ರಿ 10 ಗಂಟೆಯವರೆಗೆ ಹೋಟೆಲ್, ಬಾರ್ & ರೆಸ್ಟೋರೆಂಟ್ ಮತ್ತು ಪಬ್ ತೆರೆಯಲು ಅನುಮತಿ ನೀಡಲಾಗಿದೆ. ಈ ವೇಳೆ ಕೊರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದೆ.

Recommended Video

Virat Kohli ಬ್ಯಾಟಿಂಗ್ ಮುಗಿಸಿ Dance ಮಾಡಿಕೊಂಡು ಕೂತಿದ್ರಾ | Oneindia Kannada

ಇದರಿಂದ ಮದ್ಯಪ್ರಿಯರು, ವೀಕೆಂಡ್ ಪಾರ್ಟಿ ಪ್ರಿಯರಿಗೆ ಖುಷಿಯಾಗಿದ್ದಾರೆ. ಇನ್ನು ಹೋಟೆಲ್ ಮತ್ತು ಬಾರ್ & ರೆಸ್ಟೋರೆಂಟ್ ಮಾಲೀಕರಿಗೆ ನಿಟ್ಟುಸಿರು ಬಿಟ್ಟಂತಾಗಿದೆ. ವಾರಾಂತ್ಯದಲ್ಲಿಯೇ ಉತ್ತಮ ವ್ಯಾಪಾರವಾಗಲಿದ್ದು, ವಾರಾಂತ್ಯ ಕರ್ಫ್ಯೂ ರದ್ದುಗೊಳಿಸಿರುವುದು ಉದ್ದಿಮೆದಾರರಿಗೆ ಬಿಗ್ ರಿಲೀಫ್ ದೊರೆತಂತಾಗಿದೆ.

English summary
Bengaluru Namma Metro trains are available from 5 am to 11 pm and on Sundays from 7 am to 11 pm, BMRCL Said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X