ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಎಂ ಪರಿಹಾರ ನಿಧಿಯಲ್ಲಿ ನಯಾ ಪೈಸೆ ಖರ್ಚು ಮಾಡಿಲ್ಲ: WPI

|
Google Oneindia Kannada News

ಬೆಂಗಳೂರು, ಜೂನ್ 30: ಮಹಾ ಮಾರಿ ಕೊರೊನಾ ಸೋಂಕು ನಿಯಂತ್ರಣ ದೃಷ್ಟಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿ ಕೋವಿಡ್-19 ಖಾತೆಗೆ ಮಾರ್ಚ್ ರಿಂದ ಜೂನ್ 18ರ ವರೆಗೆ ಒಟ್ಟು 290,98,14,057 ಕೋಟಿ ರೂ.ಗಳನ್ನು ಸಾರ್ವಜನಿಕರು ಮತ್ತು ಸಂಘ-ಸಂಸ್ಥೆಗಳು ದೇಣಿಗೆ ನೀಡಿದ್ದು, ಆ ಮೊತ್ತದಲ್ಲಿ ಒಂದು ರೂಪಾಯಿಯನ್ನು ಕೂಡಾ ಈವರೆಗೆ ಸೋಂಕು ತಡೆಗಟ್ಟಲು ಖರ್ಚು ಮಾಡಿಲ್ಲ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ಆರೋಪ ಮಾಡಿದೆ.

Recommended Video

Siddaramaiah questioned to CM BSY |ಸರಕಾರದ ಮುಂದೆ ಸಿದ್ದರಾಮಯ್ಯ ಇಟ್ಟ ಹೊಸ ಡಿಮಾಂಡ್ | Oneindia Kannada

ಈ ಅಂಶ ಮಾಹಿತಿ ಹಕ್ಕು ಕಾಯ್ದೆಯಿಂದ ಬಹಿರಂಗವಾಗಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯಧ್ಯಕ್ಷರು ತಾಹೀರ್ ಹುಸೇನ್ ತಿಳಿಸಿದ್ದಾರೆ. ಕೋವಿಡ್-19 ನಿಯಂತ್ರಣ ಮತ್ತು ನಿರ್ವಹಣೆಗೆ ಈವರೆಗೆ ಖರ್ಚಾಗಿರುವ ಹಣವೆಷ್ಟು, ಅದರಲ್ಲಿ ರಾಜ್ಯ ಸರ್ಕಾರ ಎಷ್ಟು ಖರ್ಚು ಮಾಡಿದೆ.‌ ಕೇಂದ್ರ ಸರ್ಕಾರದಿಂದ ಎಷ್ಟು ಹಣ ಬಂದಿದೆ ಎಂಬ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಶ್ವೇತ ಪತ್ರ ಹೊರಡಿಸಬೇಕೆಂದು ತಾಹೀರ್ ಹುಸೇನ್ ಆಗ್ರಹಿಸಿದ್ದಾರೆ.

ಕೋವಿಡ್ - 19 ನಿರ್ವಹಣೆ: ಸರಕಾರದ ಮುಂದೆ ಸಿದ್ದರಾಮಯ್ಯ ಇಟ್ಟ ಹೊಸ ಡಿಮಾಂಡ್ಕೋವಿಡ್ - 19 ನಿರ್ವಹಣೆ: ಸರಕಾರದ ಮುಂದೆ ಸಿದ್ದರಾಮಯ್ಯ ಇಟ್ಟ ಹೊಸ ಡಿಮಾಂಡ್

ಈ ಕುರಿತು ಮಾಹಿತಿ ಕೋರಿ ಆರ್.ಟಿ.ಐ ಅಡಿ ಮಾಹಿತಿ ಕೋರಿ ಖುದ್ದು ತಾಹಿರ್ ಹುಸೇನ್ ಸಲ್ಲಿಸಿದ್ದ ಅರ್ಜಿಗೆ ಮುಖ್ಯಮಂತ್ರಿ ಸಚಿವಾಲಯದಿಂದ ವಿವರ ನೀಡಿದ್ದು, ಕೊರೊನಾ ಸೋಂಕು ನಿಯಂತ್ರಣಕ್ಕೆ ಸರಕಾರದ ವಿವಿಧ ಇಲಾಖೆಗಳಲ್ಲಿ ಲಭ್ಯವಿರುವ ಅನುದಾನದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದ ಚಿಕಿತ್ಸೆ/ ರೋಗ ಹರಡುವುದನ್ನು ತಪ್ಪಿಸಲು ವೆಚ್ಚ ಭರಿಸುತ್ತಿದ್ದು, ಸಿಎಂ ಪರಿಹಾರ ನಿಧಿ ಖಾತೆಯಲ್ಲಿರುವ ಹಣವನ್ನು ಅವಶ್ಯಕ ತುರ್ತು ಸೇವೆಗಳಿಗೆ ಉಪಯೋಗಿಸುವ ಸಲುವಾಗಿ 'ಆಪತ್ ನಿಧಿಯಾಗಿ ಕಾಯ್ದಿರಿಸಲಾಗಿದೆ' ಎಂದು ಸ್ಪಷನೆ ನೀಡಲಾಗಿದೆ.

AAP Alleged That State Government Did Not Use CM Relief Fund For Covid 19

ಮುಖ್ಯಮಂತ್ರಿ ಸಚಿವಾಲಯದ ಈ ಮಾಹಿತಿ ನಿಜಕ್ಕೂ ದಂಗು ಬಡಿಸಿದೆ. "ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ತುರ್ತು ಅಗತ್ಯಗಳಿಗಾಗಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿದ ಸರಕಾರ ಆ ಮೊತ್ತದಲ್ಲಿ ಒಂದು ನಯಾ ಪೈಸೆಯನ್ನು ಘೋಷಿತ ಉದ್ದೇಶಕ್ಕೆ ವೆಚ್ಚ ಮಾಡದೆ 'ಆಪತ್ ನಿಧಿಯಾಗಿ' ಕಾಯ್ದಿರಿಸಲಾಗಿದೆ ಎಂದು ಹೇಳಿರುವುದು ಜನಸಾಮಾನ್ಯರಿಗೆ ವಂಚನೆ ಮಾಡಿದಂತಾಗಿದೆ" ಎಂದು ತಾಹಿರ್ ಹುಸೇನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಹರಡುತ್ತಿದೆ. ಸೋಂಕಿನಿಂದ ಇನ್ನೂ ಅನೇಕ ಜನರು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಬಹಳ ಮುಖ್ಯವಾಗಿ ವಲಸೆ ಕಾರ್ಮಿಕರು ಸೇರಿದಂತೆ ಬಡ ಕೂಲಿಗಳ ಗೋಳಿನ ಕತೆಗಳು ಒಂದೆರಡಲ್ಲ. ಹೀಗಿರುವಾಗ ಜನರ ಸಂಕಷ್ಟಕ್ಕೆ ಹಣ ಸಂಗ್ರಹಿಸಿ ಖಾತೆಯಲ್ಲಿ ಉಳಿಸಿಕೊಂಡರೆ ಏನು ಪ್ರಯೋಜನ. ಈ ಹಣವನ್ನು ಯಾವಾಗ ಬಳಕೆ ಮಾಡುವುದು' ಎಂದು ಅವರು ಪ್ರಶ್ನಿಸಿದ್ದಾರೆ.

ಸೋಂಕು ತಡೆಗಟ್ಟಲು ತುರ್ತು ಅಗತ್ಯಕ್ಕೆ ಸಿಎಂ ಪರಿಹಾರ ನಿಧಿಗೆ ಸಾರ್ವಜನಿಕರಿಂದ ನೆರವು ಕೋರಿದ್ದು, ಸರಕಾರ ತುರ್ತು ಅವಶ್ಯಕತೆಗೆ ಮೊತ್ತವನ್ನು ಬಳಕೆ ಮಾಡದೆ, ಈ ಸಂದರ್ಭ ಮುಗಿದ ಬಳಿಕ ಆ ಮೊತ್ತವನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡುವುದು ಅರ್ಥಹೀನ. ಸಂಗ್ರಹಿಸಿರುವ ಅನುದಾನವನ್ನು ಸಮಯಕ್ಕೆ ಸರಿಯಾಗಿ, ಸಮಪರ್ಕ ರೀತಿಯಲ್ಲಿ ಬಳಕೆ ಮಾಡದಿದ್ದರೆ ಕೋರ್ಟ್ ಮೆಟ್ಟಿಲೇರುವ ಮೂಲಕ ಮತ್ತೊಂದು ಹಂತದ ಹೋರಾಟ ಮಾಡುವುದು ಅನಿವಾರ್ಯವಾಗಲಿದೆ' ಎಂದು ತಾಹೀರ್ ಹುಸೇನ್ ಎಚ್ಚರಿಕೆ ನೀಡಿದ್ದಾರೆ.

English summary
Welfare Party of India alleged that the state government did not use chief minister's relief fund for covid 19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X