ಬೈಕ್ ಕಳ್ಳರ ಬಂಧನ: ಹತ್ತು ಲಕ್ಷ ಮೌಲ್ಯದ ಬೈಕ್‌ಗಳು ವಶ!
ಬೆಂಗಳೂರು, ಮೇ.24 : ಬೆಂಗಳೂರಿನಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಅಂತರರಾಜ್ಯ ಬೈಕ್ ಕಳ್ಳರನ್ನ ಭಾರತೀನಗರ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶ ಮೂಲದ ಲಕ್ಷ್ಮೀಪತಿ ಎಂಬುವವರನ್ನ ಬಂಧಿಸಿರುವ ಪೊಲೀಸರು ಆರೋಪಿಯಿಂದ ನಾಲ್ಕು ಲಕ್ಷ ಮೌಲ್ಯದ ಬೈಕ್ ಗಳನ್ನ ವಶಪಡಿಸಿಕೊಳ್ಳಲಾಗಿದೆ.
ಆಡುಗೋಡಿ, ಭಾರತೀನಗರ ಸುತ್ತಮುತ್ತ ಬೈಕ್ ಕದಿದ್ದ್ ಆರೋಪಿ, ಈ ಬಗ್ಗೆ ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಾಗಿ ಬಲೆಬೀಸಿದ್ದ ಜ್ಞಾನಭಾರತಿ ಪೊಲೀಸರು 4 ಲಕ್ಷ ಮೌಲ್ಯದ ಬೈಕ್ ಸಮೇತ ಆರೋಪಿಯನ್ನು ಬಂಧಿಸುವಲ್ಲಿ ಬಸವೇಶ್ವರ ನಗರ ಪೊಲೀಸ್ ಠಾಣೆಯ ಕೃಷ್ಣಮೂರ್ತಿ ಎಂ.ಎಲ್ ಅಂಡ್ ಟೀಮ್ ಯಶಸ್ವಿಯಾಗಿದ್ದಾರೆ.
ಕಳೆದ ಏಪ್ರಿಲ್ 13 ರಂದು ಸಂಜೆ 7:30 ಗಂಟೆ ಸಮಯದಲ್ಲಿ ಮನೆಮುಂದೆ ರಸ್ತೆಯಲ್ಲಿ ನಿಲ್ಲಿಸಿದ್ದ ಕೆಟಿಎಂ ಡ್ಯೂಕ್ 200 ಎಬಿಎಸ್ ಬೈಕ್ ಬೆಳಗ್ಗೆ ಎದ್ದು ನೋಡಿದಾಗ ಕಳ್ಳತನವಾಗಿರುತ್ತದೆ. ಕೂಡಲೇ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು.

ಒಂದೂವರೆ ತಿಂಗಳು ನಂತರ ಆಂಧ್ರ ಮೂಲದ ಲಕ್ಷ್ಮೀಪತಿ ಎಂಬುವನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಆಡುಗೋಡಿ, ಭಾರತೀನಗರ ಸುತ್ತಮುತ್ತ ಬೈಕ್ ಕದಿದ್ದ್ ಆರೋಪಿ, ಜ್ಞಾನಭಾರತೀನಗರ ಠಾಣೆ ವ್ಯಾಪ್ತಿಯಲ್ಲೂ ತನ್ನ ಕೈಚಳಕ ತೋರಲು ಹೋಗಿ ಪೊಲೀಸರ ಅತಿಥಿಯಾಗಿದ್ದಾನೆ.
6.5 ಲಕ್ಷದ ಬೈಕ್ಗಳ ಕಳ್ಳತನ
ಸುಬ್ರಮಣ್ಯಪುರ, ಚಂದ್ರಾಲೇಔಟ್, ಬಂಡೆಪಾಳ್ಯ, ಬ್ಯಾಟರಾಯನಪುರ ಸೇರಿ ನಗರದ ಹಲವೆಡೆ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಯುಸೂಫ್ ಮತ್ತು ಫರ್ಧೀನ್ ಖಾನ್ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಂದ 6 ಲಕ್ಷದ 50 ಸಾವಿರ ಮೌಲ್ಯದ 8 ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ.

ಬೆಂಗಳೂರಿನಲ್ಲಿ ಇತ್ತೀಚೆಗೆ ಬೈಕ್ ಕಳ್ಳರ ಹಾವಳಿ ಹೆಚ್ಚಾಗಿದ್ದು, ಬೈಕ್ ಕಳೆದುಕೊಂಡು ಠಾಣೆ ಮೆಟ್ಟಿಲೇರುವವರ ಸಂಖ್ಯೆ ಹೆಚ್ಚಾಗಿದೆ. ಮನೆಮುಮದೆ ನಿಲ್ಲಿಸಿದ ಬೈಕ್ ಗಳನ್ನೇ ಎಸ್ಕೇಪ್ ಮಾಡುತ್ತಿದ್ದ ಚಾಲಾಕಿ ಬೈಕ್ ಖದೀಮರ ಎಡೆಮುರಿ ಕಟ್ಟಲು ಬೆಂಗಳೂರು ನಗರ ಪೊಲಿಸರು ಇದೀಗ ಬಲೆ ಬೀಸಿದ್ದಾರೆ.
Recommended Video
ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಒಟ್ಟು 10 ಲಕ್ಷದ 50 ಸಾವಿರದ ಮೌಲ್ಯದ ಕಳ್ಳತನ ಬೈಕ್‌ಗಳನ್ನು ಆರೋಪಿಗಳಿಂದ ವಶಕ್ಕೆ ಪಡೆಯಲಾಗಿದೆ. ಸದ್ಯ ಮೂವರು ಆರೋಪಿಗಳನ್ನ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದು, ನಗರ ವಿವಿಧ ಭಾಗಗಳಲ್ಲಿ ಬೈಕ್ ಕಳ್ಳತನವಾಗಿರುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಪಶ್ಚಿಮ ವಿಭಾಗದಲ್ಲಿ ಈ ಖದೀಮರ ಕೈಚಳಕ ತೋರಿದ್ದು, ಬೆಂಗಳೂರಿನ ಹಲವು ಭಾಗಗಳಲ್ಲಿ ಕಳ್ಳತನ ಮಾಡಿರುವ ಬಗ್ಗೆ ಹೆಚ್ಚಿನ ತನಿಖೆ ನಡೆಸಬೇಕಿದೆ.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications