ರಾಜ್ಯದ 'ಮಹಾ' ಮಳೆಗೆ ಪಶ್ಚಿಮ ಘಟ್ಟ ಕಾರಣ
ಬೆಂಗಳೂರು, ನ. 15: ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಸಂಭವಿಸುವ ಭಾರೀ ಮಳೆಗೆ ಕರ್ನಾಟಕದ ಹೆಮ್ಮೆಯ ಪಶ್ಚಿಮ ಘಟ್ಟಗಳೇ ಕಾರಣ.
ಹೀಗೆಂದು ಅಭಿಪ್ರಾಯಪಟ್ಟಿದ್ದಾರೆ ಬೆಂಗಳೂರಿನ ಐಐಎಸ್‌ಸಿ ಸಂಸ್ಥೆಯ ಇಬ್ಬರು ಸಂಶೋಧಕರು. ಪಶ್ಚಿಮ ಘಟ್ಟಗಳ ಭಾರೀ ಗುಡ್ಡ ಪ್ರದೇಶಗಳು ಮೋಡಗಳಿಗೆ ತಡೆಯೊಡ್ಡುತ್ತವೆ. ಇದು ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಜೂನ್ ಹಾಗೂ ಜುಲೈ ತಿಂಗಳುಗಳಲ್ಲಿ ಭಾರೀ ಮಳೆಗೆ ಕಾರಣವಾಗುತ್ತಿವೆ. ಆದರೆ, ಈ ಅಂಶವನ್ನು ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆ ನೀಡುವಾಗ ಪರಿಗಣಿಸುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಕಳೆದ 14 ವರ್ಷಗಳ ಮಳೆ ಅಂಕಿ ಅಂಶಗಳನ್ನು ಪರಿಗಣಿಸಿದಾಗ ಇಂಡಿಯನ್ ಇನ್ಸ್‌ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ) ಬೆಂಗಳೂರು ಹಾಗೂ ಇಂಡಿಯನ್ ಇನ್ಸ್‌ಸ್ಟಿಟ್ಯೂಟ್ ಆಫ್ ರಿಮೋಟ್ ಸೆನ್ಸಿಂಗ್, ಡೆಹ್ರಾಡೂನ್ ಸಂಸ್ಥೆಗಳು ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಮೂರು ಭಾರೀ ಮಳೆಯಾಗುವ ಸ್ಥಳಗಳನ್ನು ಗುರುತಿಸಿವೆ. ಆದರೆ, ಕೇರಳ ಹಾಗೂ ತಮಿಳುನಾಡಿನಲ್ಲಿ ಇಂತಹ ಒಂದೂ ಸ್ಥಳ ಕಂಡುಬಂದಿಲ್ಲ. [ಶಿರಸಿ ಸೋಂದಾ ಮಠದಲ್ಲಿ ಕೆರೆ ಸಮ್ಮೇಳನ]
ಗುಡ್ಡ ಪ್ರದೇಶಗಳಿಗೆ ಶಕ್ತಿಯುತ ಗಾಳಿಯು ಅಪ್ಪಳಿಸಿದಾಗ ಮೋಡಗಳು ಪಶ್ಚಿಮ ಘಟ್ಟಗಳಿಗಿಂತ ಮೇಲಕ್ಕೆ ಹೋಗಲು ಆರಂಭಿಸುತ್ತವೆ. ಇದು ಭಾರೀ ಮಳೆ ಬೀಳಲು ಕಾರಣವಾಗುತ್ತವೆ. ಬೇಸಿಗೆಯ ಮಾರ್ಚ್ ಮತ್ತು ಮೇ ತಿಂಗಳುಗಳಲ್ಲಿ ಪಶ್ಚಿಮ ಘಟ್ಟಗಳು ಬಿಸಿಯಾಗುತ್ತವೆ. ಈ ಮೂಲಕ ಸಮುದ್ರ ಪ್ರದೇಶದಿಂದ ತೇವಾಂಶ ಭರಿತ ಗಾಳಿಯನ್ನು ಆಕರ್ಷಿಸುತ್ತವೆ. ಇದು ಜೂನ್ ಹಾಗೂ ಜುಲೈ ತಿಂಗಳಲ್ಲಿ ಭಾರೀ ಮಳೆಯಾಗಲು ಕಾರಣವಾಗುತ್ತವೆ. ಮಳೆಯ ನಂತರ ಉಷ್ಣಾಂಶದ ವ್ಯತ್ಯಾಸವು ಕಡಿಮೆಯಾಗುತ್ತದೆ ಮತ್ತು ದೊಡ್ಡ ಮೋಡದ ರಚನೆಗಳು ಕರಗುತ್ತವೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ











Click it and Unblock the Notifications