Bengaluru Metro: ಹೋಸಕೋಟೆ, ನೆಲಮಂಗಲ ಹಾಗೂ ಬಿಡದಿವರೆಗೆ ಮೆಟ್ರೋ ವಿಸ್ತರಣೆಯಿಂದ ಏನೆಲ್ಲಾ ಪ್ರಯೋಜನೆಗಳಿವೆ?
Bengaluru Metro Expansion: ನಮ್ಮ ಮಟ್ರೋ ಬೆಂಗೂರಿನ ಜೀವನಾರಿ ಸಾರಿಗೆಗಳಲ್ಲಿ ಒಂದಾಗಿದೆ. ನಗರದ ಬಹುತೇಕ ಮಂದಿ ಟ್ರಾಫಿಕ್ ಜಂಜಾಟದಿಂದ ತಪ್ಪಿಸಿಕೊಳ್ಳಲು ಮೆಟ್ರೋವನ್ನೇ ಅವಲಂಬಿಸಿದ್ದಾರೆ. ಮತ್ತೆ ಇದೀಗ ಪ್ರಯಾಣಿಕರ ಬೇಡಿಕೆ ಮೇರೆಗೆ ಇದರ ಜಾಲ ವಿಸ್ತರಣೆಯಾಗುತ್ತಲೇ ಇದೆ. ಇನ್ನೂ ಇತ್ತೀಚೆಗಷ್ಟೇ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದಂತೆ ಹೋಸಕೋಟೆ, ನೆಲಮಂಗಲ ಹಾಗೂ ಬಿಡದಿವರೆಗೆ ಮೆಟ್ರೋ ವಿಸ್ತರಣೆಯಾದರೆ ಏನೆಲ್ಲ ಪ್ರಯೋಜನೆಗಳಾಗಲಿವೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ದಿನದಿಂದ ದಿನಕ್ಕೆ ಮೆಟ್ರೋ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಮತ್ತೊಂದೆಡೆ ಮೆಟ್ರೋ ವಿಸ್ತರಣೆತ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪೂರಕವೆಂಬಂತೆ ಇತ್ತೀಚೆಗಷ್ಟೇ ಬೆಂಗಳೂರು ಮೆಟ್ರೋ ಸೇವೆಯನ್ನು ಮತ್ತಷ್ಟು ವಿಸ್ತರಣೆ ಮಾಡುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ ಮಾಡಿದ್ದರು. ಪೂರ್ವದಲ್ಲಿ ಹೊಸಕೋಟೆ, ಪಶ್ಚಿಮದಲ್ಲಿ ನೆಲಮಂಗಲ ಮತ್ತು ನಗರದ ನೈಋತ್ಯದ ಬಿಡದಿಯವರೆಗೆ ವಿಸ್ತರಣೆ ಮಾಡಲು ರಾಜ್ಯದ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದ್ದರು.

ಬೆಂಗಳೂರು ಮೆಟ್ರೋ ವಿಸ್ತರಣೆ: ಬೆಂಗಳೂರು ಮೆಟ್ರೋವನ್ನು ಹೊಸಕೋಟೆ, ನೆಲಮಂಗಲ ಮತ್ತು ಬಿಡದಿವರೆಗೆ ವಿಸ್ತರಿಸುವ ಯೋಜನೆಯನ್ನು ಕರ್ನಾಟಕ ಸರ್ಕಾರ ಬಹಿರಂಗಪಡಿಸಿದೆ. ಈ ಮಹಾತ್ವಾಕಾಂಕ್ಷೆಯ ಯೋಜನೆಯು ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ಬೆಂಗಳೂರಿನ ಹೊರವಲಯಕ್ಕೆ ಸಂಪರ್ಕ ಸಾಧಿಸುವ ಗುರಿಯನ್ನು ಹೊಂದಿದೆ.
ಟ್ರಾಫಿಕ್ ಸಮಸ್ಯೆಗಳ ನಿವಾರಣೆ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹಳೆ ಮದ್ರಾಸ್ ರಸ್ತೆಯಲ್ಲಿ ಟ್ರಾಫಿಕ್ ಸಮಸ್ಯೆಗಳ ಇರುವ ಬಗ್ಗೆ ಒಪ್ಪಿಕೊಂಡಿದ್ದಾರೆ. ಅಲ್ಲದೆ ಇದಕ್ಕೆ ಸರ್ಕಾರದಿಂದ ಪರಿಹಾರ ಕಂಡುಕೊಳ್ಳುವುದಾಗಿಯೂ ಹೇಳಿದ್ದಾರೆ. ಹೆಚ್ಚುತ್ತಿರುವ ಪ್ರಯಾಣಿಕರ ಬೇಡಿಕೆಗಳ ಅನುಸಾರವಾಗಿ ಹೊಸಕೋಟೆಗೆ ಮೆಟ್ರೋ ಸೇವೆಯನ್ನು ವಿಸ್ತರಿಸುವ ಬಗ್ಗೆ ಸಮೀಕ್ಷೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಹಳೆ ಮದ್ರಾಸ್ ರಸ್ತೆಯಲ್ಲಿ ಕೆಆರ್ ಪುರಂನಿಂದ ಹೊಸಕೋಟೆವರೆಗೆ ತೀವ್ರ ಸಂಚಾರ ದಟ್ಟಣೆ ಕುರಿತು ಕರ್ನಾಟಕ ವಿಧಾನಸಭೆಯಲ್ಲಿ ಶರತ್ ಬಚ್ಚೇಗೌಡ ಅವರು ಇತ್ತೀಚೆಗಷ್ಟೇ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರಿಸಿದ್ದು, ಈ ವೇಳೆ ಅವರು ಸರ್ಕಾರದ ಚಿಂತನೆ ಬಗ್ಗೆ ಪ್ರಕಟ ಮಾಡಿದರು. ಟ್ರಾಫಿಕ್ ಸಮಸ್ಯೆಗಳ ಬಗ್ಗೆ ನಾನು ಕೂಡ ಆಲೋಚನೆ ಮಾಡಿದ್ದೇನೆ. ಆದ್ದರಿಂದ ಈ ಬಗ್ಗೆ ಚಿಂತನೆ ನಡೆಸಿ ವಿವರವಾದ ಸಮೀಕ್ಷೆಯೊಂದನ್ನು ಮಾಡುತ್ತಿದ್ದೇನೆ. ಸರ್ಕಾರ ಮತ್ತು ನಮ್ಮ ಮೆಟ್ರೋ ಶಾಸಕರ ಮನವಿಯನ್ನು ಸಹಾನುಭೂತಿಯಿಂದ ಪರಿಗಣಿಸುತ್ತದೆ ಎಂದು ಉತ್ತರಿದ್ದರು.
ದೈನಂದಿನ ಪ್ರಯಾಣಿಕರ ಸವಾಲುಗಳು: ಕೋಲಾರದಿಂದ ಪ್ರತಿನಿತ್ಯ ಸುಮಾರು 10,000 ಜನರು ಕೆಲಸಕ್ಕಾಗಿ ಬೆಂಗಳೂರಿಗೆ ಪ್ರಯಾಣಿಸುತ್ತಾರೆ. ಆದ್ದರಿಂದ ಹೊಸಕೋಟೆ, ನೆಲಮಂಗಲ ಮತ್ತು ಬಿಡದಿಗೆ ಮೆಟ್ರೋ ವಿಸ್ತರಣೆ ಆದರೆ ಈ ಸವಾಲುಗಳನ್ನು ನಿವಾರಿಸುತ್ತದೆ. ಅಲ್ಲದೆ, ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತದೆ ಮತ್ತು ಸ್ಥಳೀಯ ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸಿದಂತಾಗಲಿದೆ.
ಹಂತ 3ಎ ಯೋಜನೆಗಳು: ಮೆಟ್ರೋ ಜಾಲವನ್ನು ವಿಸ್ತರಿಸುವ ಕಾರ್ಯಸಾಧ್ಯತೆಯ ಸಮೀಕ್ಷೆಯು ಹಂತ 3ಎ ವಿಸ್ತರಣೆಯ ಭಾಗವಾಗಿದೆ. 2030ರ ವೇಳಗೆ ಪೂರ್ಣಗೊಳ್ಳಲು ಗುರಿ ಹೊಂದಿರುವ ಈ ಹಂತವು 28 ಹೊಸ ನಿಲ್ದಾಣಗಳನ್ನು ಒಳಗೊಂಡಿದೆ. ಹಬ್ಬಾಳದಿಂದ ಸರ್ಜಾಪುರಕ್ಕೆ ಸಂಪರ್ಕ ಕಲ್ಪಿಸಲಿದ್ದು, ಇದರಿಂದ ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಬರಲಿದೆ.
ಮೆಟ್ರೋ ಹಂತಗಳು ಮತ್ತು ಅಭಿವೃದ್ಧಿ ಕಾರ್ಯಗಳು: ಬೆಂಗಳೂರು ಮೆಟ್ರೋ ಹಂತ 1 ಮತ್ತು 2ರಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದು ಪ್ರಮುಖ ಕಾರಿಡಾರ್‌ಗಳನ್ನು ಒಳಗೊಂಡಿದೆ. ಹಂತ 3ಎ ಉತ್ತರ-ಆಗ್ನೇಯ ಕಾರಿಡಾರ್ ಅನ್ನು ಪರಿಚಯಿಸಲಿದ್ದು, ಇದು ಎತ್ತರದ ಮತ್ತು ಸುರಂಗ ಮಾರ್ಗಗಳಲ್ಲಿ ನಿಲ್ದಾಣಗಳನ್ನು ಒಳಗೊಂಡಿದೆ. ಇದರ ಸಂಪರ್ಕವನ್ನು ಹೆಚ್ಚಾಗುತ್ತಿರುವ ಪ್ರಯಾಣಿಕೆ ಸಂಖ್ಯೆಗೆ ಅನುಗುಣವಾಗಿ ವಿಸ್ತರಣೆಯಾಗುತ್ತಿದೆ.
ಮೆಟ್ರೋ ವಿಸ್ತರಣೆಯ ಪ್ರಯೋಜನೆಗಳು: ಹೊಸಕೋಟೆ, ನೆಲಮಂಗಲ ಮತ್ತು ಬಿಡದಿ ಪ್ರಮುಖ ಉಪನಗರ ಕೇಂದ್ರಗಳಾಗಿವೆ. ಈ ಪ್ರದೇಶಗಳಿಗೆ ಮೆಟ್ರೋ ವಿಸ್ತರಣೆಯಾದರೆ, ಪ್ರತಿನಿತ್ಯ ಈ ಮಾರ್ಗದಲ್ಲಿ ಪ್ರಯಾಣಿಕರ ಪ್ರಯಾಣವನ್ನು ಸುಗಮಗೊಳಿಸಿದಂತಾಗಲಿದೆ. ಅಲ್ಲದೆ ನಗರದ ಸಂಚಾರ ದಟ್ಟಣೆಯನ್ನು ಕೂಡ ಕಡಿಮೆ ಮಾಡುತ್ತದೆ.
ಗ್ರೀನ್ ಮೊಬಿಲಿಟಿ ಮತ್ತು ಸಂಪರ್ಕ: ಬಿಎಂಆರ್‌ಸಿಎಲ್ ಮೆಟ್ರೋ ನಿಲ್ದಾಣ ಪ್ರದೇಶದಲ್ಲಿ ಇವಿ ಬ್ಯಾಟರಿ-ಸ್ಟಾಪಿಂಗ್ ಸ್ಟೇಷನ್‌ಗಳನ್ನು ಪರಿಚಯಿಸಲು ಮುಂದಾಗಿದೆ. ಇನ್ನು ಮೆಟ್ರೋ ನಿಲ್ದಾಣಗದ ಅಭಿವೃದ್ಧಿ ಮತ್ತು ಮೇಲ್ಸೇತುವೆ ನಿರ್ಮಾಣಕ್ಕೆ ಖಾಸಗಿ ಸಂಸ್ಥೆಗಳ ಕೊಡುಗೆ ಪ್ರಮುಖ ಪಾತ್ರವಹಿಸುತ್ತಿವೆ ಎಂದು ಹೇಳಲಾಗುತ್ತಿದೆ.












Click it and Unblock the Notifications