ಬಿಬಿಎಂಪಿ ಚುನಾವಣೆ ಗೆಲ್ಲಲು ಬಿ.ವೈ ವಿಜಯೇಂದ್ರ ಮಾಸ್ಟರ್ ಪ್ಲಾನ್ !
ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ)ಯ ಚುನಾವಣೆಯ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಬಿಜೆಪಿಗೆ ಬೆಸ್ಟ್ ಟಿಪ್ಸ್ ನೀಡಿದ್ದಾರೆ. ಇದೀಗ ಬಿಬಿಎಂಪಿ ಚುನಾವಣೆಯ ಬಗ್ಗೆ ವಿಜಯೇಂದ್ರ ಮಾತನಾಡಿದ್ದು, ಚುನಾವಣೆ ವಿಳಂಬ ಹಾಗೂ ಸದಸ್ಯತ್ವ ಅಭಿಯಾನ ಹಿನ್ನಡೆಗೆ ಕಾರಣವೇನು ಎಂದು ಹೇಳಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು ಎನ್ನುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು.
ಬೆಂಗಳೂರು ನಗರದಲ್ಲಿ ಬಿಜೆಪಿ ಸದಸ್ಯತ್ವ ಹಿನ್ನಡೆಯಾಗುವುದಕ್ಕೆ ಇಲ್ಲಿನ ಬಿಜೆಪಿ ಶಾಸಕರೇ ಕಾರಣ. ಸಕಾಲದಲ್ಲಿ ಬಿಬಿಎಂಪಿ ಚುನಾವಣೆ ನಡೆಸಿದ್ದರೆ, ಈ ಪರಿಸ್ಥಿತಿ ಬರುತ್ತಿರಲಿಲ್ಲ. ಮುಂದೆ ಬಿಬಿಎಂಪಿ ಚುನಾವಣೆ ಗೆಲ್ಲಲು ಸದಸ್ಯತ್ವ ಸಂಖ್ಯೆ ಹೆಚ್ಚು ಮಾಡಿ ಎಂದು ಬಿಜೆಪಿ ಕಾರ್ಯಕರ್ತರಿಗೆ ಹೇಳಿದ್ದಾರೆ. ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ದೇಶ ಒಂದು ಚುನಾವಣೆ ಮಸೂದೆ ಜಾರಿಗೆ ಮುಂದಡಿ ಇಟ್ಟಿದ್ದಾರೆ. ಇದರಿಂದ ರಾಜಕೀಯದಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶ ಸಿಗಲಿದೆ. ಬೆಂಗಳೂರಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಬಿಜೆಪಿ ಸದಸ್ಯತ್ವ ನಡೆದಿಲ್ಲ. ಸದಸ್ಯತ್ವ ಅಭಿಯಾನ ಮಂದಗತಿಯಲ್ಲಿ ಸಾಗುತ್ತಿರುವುದಕ್ಕೆ ನಗರ ಬಿಜೆಪಿ ಶಾಸಕರೇ ಕಾರಣ. ಬಿಬಿಎಂಪಿ ಚುನಾವಣೆ ಕಾಲಮಿತಿಯಲ್ಲಿ ನಡೆದಿದ್ದರೆ, ಈ ಪರಿಸ್ಥಿತಿ ಎದುರಾಗುತ್ತಿರಲಿಲ್ಲ ಎಂದಿದ್ದಾರೆ.

ಈಗ ಜಾತಿಯ ಮೇಲೆ ರಾಜಕೀಯ
ಈಗ ರಾಜಕೀಯದಲ್ಲಿ ಜಾತಿ ಯಾವ ರೀತಿ ಕೆಲಸ ಮಾಡುತ್ತಿದೆ ಎನ್ನುವ ಬಗ್ಗೆಯೂ ವಿಜಯೇಂದ್ರ ಮಾತನಾಡಿದ್ದಾರೆ. ಹಿಂದೆ ಕಾರ್ಯಕರ್ತರು ಮತ್ತು ಮುಖಂಡರ ನಡುವೆ ಜಾತಿ ಎನ್ನುವುದು ಇರುತ್ತಿರಲಿಲ್ಲ. ಎಲ್ಲರು ಒಂದೇ ಎನ್ನುವಂತಿತ್ತು. ಆದರೆ, ಇಂದು ಜಾತಿಯ ಮೇಲೆ ರಾಜಕೀಯ ನಡೆಯುತ್ತಿದೆ. ಇನ್ನು ಕರ್ನಾಟಕದಲ್ಲಿ ಎರಡು ಬಾರಿ ಆಡಳಿತ ನಡೆಸಿದ್ದೇವೆ. ನಮ್ಮ ಬಿಜೆಪಿ ಸರ್ಕಾರವಿದ್ದಾಗ ಬೆಂಗಳೂರು ನಗರ ಅಭಿವೃದ್ದಿಗೆ ಸಾಕಷ್ಟು ಕೊಡುಗೆ ನೀಡಿದೆ. ಈಗ ಕೆಲವು ಕಾರ್ಯಕರ್ತರ ಹಾಗೂ ಮುಖಂಡರ ನಡುವೆ ಉತ್ತಮ ಒಡನಾಟವಿಲ್ಲದೆ ಇರುವುದು. ಸ್ವಹಿತಾಸಕ್ತಿ ನಾನು, ನನ್ನ ಸಂಬಂಧಿಕರು ಮಾತ್ರ ರಾಜಕೀಯ ಅಧಿಕಾರ ಅನುಭವಿಸಬೇಕು ಎನ್ನುವ ದುರಾಸೆಯಿಂದ ಕಾರ್ಯಕರ್ತರ ನಿರಾಸಕ್ತಿ ತೊರಿಸುತ್ತಿದ್ದಾರೆ. ಮುಖಂಡರು ಎಷ್ಟು ಗೌರವ ಕೊಡುತ್ತೇವೋ ಅಷ್ಟೆ ಗೌರವ ಕಾರ್ಯಕರ್ತರಿಗೂ ಕೊಡಬೇಕು ಎಂದು ವಿಜಯೇಂದ್ರ ಹೇಳಿದ್ದಾರೆ.
ನಾಲ್ಕು ವರ್ಷವಾದರೂ ನಡೆದಿಲ್ಲ ಬಿಬಿಎಂಪಿ ಚುನಾವಣೆ
ಬಿಬಿಎಂಪಿ ಚುನಾಯಿತರ ಅಧಿಕಾರ ಅವಧಿ ಮುಗಿದು ನಾಲ್ಕು ವರ್ಷವಾದರೂ ಚುನಾವಣೆ ಆಗಿಲ್ಲ. ಬಿಬಿಎಂಪಿಯ ಚುನಾವಣೆಯನ್ನು ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳು ನಿರಂತರವಾಗಿ ಮುಂದೂಡಿಕೊಂಡು ಬರುತ್ತಲ್ಲೇ ಇವೆ. ಈ ಹಿಂದೆ ಬಿಜೆಪಿ ಅವಧಿಯಲ್ಲಿ ವಿವಿಧ ಕಾರಣಕ್ಕೆ ಬಿಬಿಎಂಪಿ ಚುನಾವಣೆ ಮುಂದಕ್ಕೆ ಹೋಗಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಇನ್ನೇನು ಚುನಾವಣೆ ನಡೆದೇ ಬಿಡಲಿದೆ ಎಂದು ಹೇಳಲಾಗುತ್ತಿದ್ದರೂ, ಇಲ್ಲಿಯವರೆಗೆ ಬಿಬಿಎಂಪಿ ಚುನಾವಣೆಗೆ ಮುಹೂರ್ತ ಕೂಡಿ ಬಂದಿಲ್ಲ. ಬಿಜೆಪಿ ಅವಧಿಯಲ್ಲಿ ಬಿಬಿಎಂಪಿ ಚುನಾವಣೆಯನ್ನು ನಡೆಸುವಂತೆ ಬಿಬಿಎಂಪಿಯ ಅಂದಿನ ಕಾಂಗ್ರೆಸ್ ಪಾಲಿಕೆಯ ಸದಸ್ಯರು ಕೋರ್ಟ್ ಮೊರೆ ಹೋಗಿದ್ದರು. ಹೀಗಾಗಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಚುನಾವಣೆ ವಿಳಂಬವಾಗುವುದಿಲ್ಲ ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ವರ್ಷ ಸಮೀಪಿಸುತ್ತಿದ್ದರೂ ಚುನಾವಣೆ ನಡೆದಿಲ್ಲ.












Click it and Unblock the Notifications