ಬೆಂಗಳೂರು ಕಸದ ಸಮಸ್ಯೆ: ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು ?

ಬೆಂಗಳೂರಿನಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ಕಸದ ಸಮಸ್ಯೆ ವಿಪರೀತವಾಗಿದೆ. ಅದರಲ್ಲೂ ಬೆಂಗಳೂರಿನ ಹಲವು ಭಾಗಗಳಲ್ಲಿ ಕಸ ಸಂಗ್ರಹದಲ್ಲಿ ಭಾರೀ ವ್ಯತ್ಯಾಸವಾಗುತ್ತಿದೆ. ಹಸಿಕಸ ಹಾಗೂ ಒಣಕಸ ಸಂಗ್ರಹ ಮಾಡುವ ಬದಲು ಕೆಲವು ಭಾಗದಲ್ಲಿ ಮಿಶ್ರ ಕಸ ಸಂಗ್ರಹ ಮಾಡಲಾಗುತ್ತಿದೆ. ಅಲ್ಲದೇ ಬೆಂಗಳೂರಿನ ವಿವಿಧ ಭಾಗದಲ್ಲಿ ಬ್ಲಾಕ್‌ಸ್ಪಾಟ್ ಹೆಚ್ಚಳವಾಗಿದೆ.

ವಿಧಾನ ಪರಿಷತ್ತು ಅಧಿವೇಶನದ ಕಾರ್ಯಕಲಾಪದಲ್ಲಿ ಬೆಂಗಳೂರಿನ ಕಸ ವಿಲೇವಾರಿಗೆ ಸಂಬಂಧಿಸಿದ ಪ್ರಶ್ನೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಉತ್ತರ ನೀಡಿದ್ದಾರೆ.

What D K Shivakumar Said on Bengaluru s Mounting Garbage Problem

ಬೆಂಗಳೂರಿನಲ್ಲಿ ಮೊದಲಿನಿಂದಲೂ ಕಸದ ಸಮಸ್ಯೆ ವಿಪರೀತವಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕಸದ ಸಮಸ್ಯೆ ಹೆಚ್ಚಾಗುತ್ತಿದೆ. ಇದೀಗ ಈ ವಿಚಾರವಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಾತನಾಡಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಬೆಂಗಳೂರಿನಲ್ಲಿ ಕಸ ವಿಲೇವಾರಿ ವಿಚಾರದಲ್ಲಿ ಲೋಪವೆಸಗುತ್ತಿದೆ. ಬೆಂಗಳೂರಿನಲ್ಲಿ ಕಸದ ಸಮಸ್ಯೆ ಪರಿಹಾರವಾಗಬೇಕು ಎಂದು ಬೆಂಗಳೂರಿಗರು ಮೊದಲಿನಿಂದಲೂ ಆಗ್ರಹಿಸುತ್ತಿದ್ದಾರೆ. ಇನ್ನು ಬೆಂಗಳೂರಿನಲ್ಲಿ ಕಸದ ಸಮಸ್ಯೆ ಪರಿಹಾರಕ್ಕೆ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿರುವುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು ಕಸ ವಿಲೇವಾರಿಗೆ 33 ಪ್ಯಾಕೇಜ್‌ಗಳಾಗಿ ಟೆಂಡರ್

ಬೆಂಗಳೂರು ನಗರದ ಕಸ ವಿಲೇವಾರಿಗೆ 28 ವಿಧಾನಸಭಾ ಕ್ಷೇತ್ರಗಳಲ್ಲಿ 33 ಪ್ಯಾಕೇಜ್‌ಗಳಾಗಿ ವಿಂಗಡಿಸಿ ಟೆಂಡರ್ ಕರೆಯಲಾಗಿದೆ. ಬೆಂಗಳೂರಿನ ಕಸದ ಸಮಸ್ಯೆ ನಿವಾರಿಸಲು ದೆಹಲಿ, ಹೈದರಾಬಾದ್, ಚೆನ್ನೈ ನಗರಗಳಿಗೆ ಹೋಗಿ ಕಸ ವಿಲೇವಾರಿ ಮಾದರಿಯನ್ನು ನೋಡಿಕೊಂಡು ಬಂದಿದ್ದೇನೆ. ಕಸ ವಿಲೇವಾರಿಗೆ ನೈಸ್ ಸಂಸ್ಥೆಗೆ ಸೇರಿದ ಜಾಗವನ್ನು ಪಡೆಯಲಾಗಿದೆ. ದೊಡ್ಡಬಳ್ಳಾಪುರ ಬಳಿಯ ಜಾಗಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಬಾಕಿಯಿತ್ತು. ಕ್ಯಾಬಿನೆಟ್ ಅನುಮತಿ ಪಡೆದು ಮುಂದುವರಿದಿದ್ದೇವೆ. ಕಸ ವಿಲೇವಾರಿಗೆಂದು ಆಧುನಿಕ ತಂತ್ರಜ್ಞಾನದ ಬಗ್ಗೆ ಅಧ್ಯಯನ ಮಾಡಲಾಗುತ್ತಿದೆ. ಇದನ್ನು ಗುತ್ತಿಗೆ ಆಧಾರದ ಮೇಲೆ ನಿರ್ವಹಣೆ ಮಾಡಬೇಕು ಎನ್ನುವ ಆಲೋಚನೆಯಿದೆ.

35,000 ಸಾವಿರ ಜನರಿಂದ ಕಾಂಪೋಸ್ಟ್‌

ಇನ್ನು ಬೆಂಗಳೂರಿನಲ್ಲಿ ಕಸದ ಸಮಸ್ಯೆ ಗಂಭೀರವಾಗಿದೆ ಎಂದು ಹೇಳುತ್ತಿರುವಾಗಲೇ ಬೆಂಗಳೂರಿನ ಬರೋಬ್ಬರಿ 35,000 ಸಾವಿರ ಜನ ತಮ್ಮ ಮನೆ ಅಥವಾ ಅಂಗಡಿ ಮತ್ತು ಅಪಾರ್ಟ್‌ಮೆಂಟ್‌ಗಳಲ್ಲಿ ಉತ್ಪತ್ತಿಯಾಗುವ ಹಸಿಕಸವನ್ನು ತಾವೇ ಕಾಂಪೋಸ್ಟ್‌ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ. ನಗರದಲ್ಲಿ 35,000 ಸಾವಿರ ಜನರು ಕಸವನ್ನು ತಾವೇ ವಿಲೇವಾರಿ ಮಾಡಿಕೊಳ್ಳುವುದಾಗಿ ಸ್ವಯಂ ಘೋಷಣೆ ಮಾಡಿದ್ದಾರೆ. ಕಟ್ಟಡ ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಸುರಿಯುವವರನ್ನು ಗುರುತಿಸಿ ಪ್ರಕರಣ ದಾಖಲಿಸಬೇಕು ಎಂದು ಪೊಲೀಸರಿಗೆ ಸೂಚಿಸಿದ್ದೇನೆ. ಇದರ ಬಗ್ಗೆಯೂ ಟೆಂಡರ್ ಕರೆಯಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+