ಇಂದಿರಾ ಕ್ಯಾಂಟೀನ್ ಮುಚ್ಚುವ ವಿಚಾರ, ಯಡಿಯೂರಪ್ಪ ಏನು ಹೇಳಿದ್ರು?
ಬೆಂಗಳೂರು, ಆಗಸ್ಟ್ 28: ಇಂದಿರಾ ಕ್ಯಾಂಟೀನಿನಲ್ಲಿ ನಡೆಯುತ್ತಿರುವ ಅಕ್ರಮ, ಆಹಾರದ ಗುಣಮಟ್ಟದ ಬಗ್ಗೆ ವಿಚಾರಣೆ ಮಾಡಲಾಗುತ್ತಿದೆ. ಇಂದಿರಾ ಕ್ಯಾಂಟೀನ್ ಮುಚ್ಚುವ ಪ್ರಸ್ತಾಪವಾಗಲಿ, ಪ್ರಯತ್ನವಾಗಲಿ ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಯಡಿಯೂರಪ್ಪ ಸರ್ಕಾರವು ಇಂದಿರಾ ಕ್ಯಾಂಟೀನ್ ಮುಚ್ಚುವ ಪ್ರಯತ್ನ ಮಾಡುತ್ತಿದೆ ಎನ್ನುವುದೆಲ್ಲಾ ಸುಳ್ಳು ಅಂತಹ ಪ್ರಸ್ತಾಪವೇ ಇಲ್ಲ, ಇಂದಿರಾ ಕ್ಯಾಂಟೀನ್ ಮುಚ್ಚುವ ದುರುದ್ದೇಶ ನಮಗಿಲ್ಲ, ಆದರೆ ಅಲ್ಲಿನ ಅವ್ಯವಸ್ಥೆ ಸರಿಪಡಿಸಬೇಕಿದೆ ಎಂದು ಹೇಳಿದರು.

ಸರ್ಕಾರ ಟೇಕ್ ಆಫ್ ಆಗಿಲ್ಲ ಎಂಬ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ ನೀಡಲು ಯಡಿಯೂರಪ್ಪ ನಿರಾಕರಿಸಿದರು. ಗುರುವಾರ ಕೆಆರ್‌ಎಸ್‌ನ ಕಾವೇರಿಗೆ ಬಾಗಿನ ಅರ್ಪಿಸುತ್ತೇನೆ. ಬಳಿಕ ಕೊಡಗು ಜಿಲ್ಲೆಗೆ ತೆರಳಿ ಪ್ರವಾಹದಿಂದ ತೊಂದರೆಯುಂಟಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದೇನೆ ಎಂದು ತಿಳಿಸಿದರು.
ಇಂದಿರಾ ಕ್ಯಾಂಟೀನ್‌ಗೆ ಅನುದಾನ ಕೊರತೆಯಾಗಿದೆ, ಮುಚ್ಚುವ ಪರಿಸ್ಥಿತಿ ಬಂದಿದೆ ಎಂದು ಬಿಬಿಎಂಪಿ ಆಯುಕ್ತರು ತಿಳಿಸಿದ್ದಾರೆ.
ಯೋಜನೆ ಆರಂಭಿಸಿದ ಕರ್ನಾಟಕ ಸರ್ಕಾರ ಪ್ರತಿ ವರ್ಷ ಕ್ಯಾಂಟೀನ್ ನಿರ್ವಹಣೆಗೆ 100 ಕೋಟಿ ರೂ. ನೀಡಬೇಕಿತ್ತು. ಆದರೆ, ಮೈತ್ರಿ ಸರ್ಕಾರ ಹಣ ನೀಡಿಲ್ಲ, ಬಿಬಿಎಂಪಿ ತನ್ನ ಬಜೆಟ್‌ನಲ್ಲಿಯೂ ಹಣವನ್ನು ಮೀಸಲಾಗಿಟ್ಟಿಲ್ಲ ಎಂದು ಹೇಳಿದ್ದಾರೆ.












Click it and Unblock the Notifications