ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಾಜಿ ಲೋಕಾಯುಕ್ತ ವೈ. ಭಾಸ್ಕರ್ ರಾವ್ ಲಂಚ ಕೇಸ್ ಏನಾಯ್ತು?

|
Google Oneindia Kannada News

ಬೆಂಗಳೂರು, ಆಗಸ್ಟ್ 10: ಕರ್ನಾಟಕದಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ಹುಟ್ಟುಹಾಕಿದ್ದೆ ಭ್ರಷ್ಟಾಚಾರಕ್ಕೆ ಕಡಿವಾಣನ್ನು ಹಾಕಬೇಕು ಅನ್ನೋ ಕಾರಣಕ್ಕೆ, ಆದರೆ ಬೇಲಿಯೇ ಎದ್ದು ಹೊಲ ಮೇಯ್ದಂತೆ ಲೋಕಾಯುಕ್ತ ಸಂಸ್ಥೆಯಲ್ಲೇ ನಡೆದ ಭ್ರಷ್ಟಾಚರ ಪ್ರಕರಣ ಸಂಸ್ಥೆಯ ಹೆಸರನ್ನೇ ಹಾಳು ಮಾಡಿತ್ತು. ಮಾಜಿ ಲೋಕಾಯುಕ್ತ ವೈ. ಭಾಸ್ಕರ್ ರಾವ್ ಹಾಗೂ‌ ಪುತ್ರ ಲಂಚ ಪಡೆದ ಆರೋಪ ಪ್ರಕರಣ ಮಹತ್ವದ ಹಂತದಲ್ಲಿದೆ.

ಕರ್ನಾಟಕ ಲೋಕಾಯುಕ್ತ ಇತಿಹಾಸದಲ್ಲಿ ಕಪ್ಪು ಚುಕ್ಕೆಯಾಗಿ ಪರಿಣಮಿಸಿದ್ದು ಮಾಜಿ ಲೋಕಾಯುಕ್ತ ವೈ. ಭಾಸ್ಕರ್ ರಾವ್ ಹಾಗೂ‌ ಪುತ್ರನ ಲಂಚ ಪಡೆದ ಆರೋಪ ಪ್ರಕರಣ. ಈ ಪ್ರಕರಣ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಹಂತ ಮಹತ್ವದ ಘಟ್ಟಕ್ಕೆ ತಲುಪಿದ್ದು ದೂರುದಾರ ಹಾಗೂ ಪೊಲೀಸ್ ಅಧಿಕಾರಿಗಳ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ.

ಆಧಾರರಹಿತ ದೂರು; ಕ್ರಮಕ್ಕೆ ಮುಂದಾದ ಲೋಕಾಯುಕ್ತಆಧಾರರಹಿತ ದೂರು; ಕ್ರಮಕ್ಕೆ ಮುಂದಾದ ಲೋಕಾಯುಕ್ತ

ಮಾಜಿ ಲೋಕಾಯುಕ್ತ ಹಾಗೂ ಆತನ ಪುತ್ರ ಅಶ್ವಿನ್ ರಾವ್ ಹಾಗೂ ಆತನ ಸಹಚರರು 2015ರ ಮೇ 5ರಂದು ದೂರುದಾರನಾಗಿರುವ ಬೆಂಗಳೂರು‌ ನಗರ ಜಿಲ್ಲಾ ಪಂಚಾಯತ್ ಎಕ್ಸಿಕ್ಯೂಟಿವ್ ಎಂಜಿನಿಯರ್ ಎಂ. ಎನ್. ಕೃಷ್ಣಮೂರ್ತಿಗೆ ಧಮ್ಕಿ ಹಾಕಿ 1 ಕೋಟಿ ರೂಪಾಯಿ ಲಂಚ ಕೇಳಿದ ಆರೋಪ ಸಂಬಂಧ ನೀಡಿದ ದೂರು ನೀಡಿದ ಮೇರೆಗೆ ಲೋಕಾಯುಕ್ತದ ಅಂದಿನ ಎಸ್ಪಿಯಾಗಿದ್ದ ಸೋನಿಯಾ ನಾರಂಗ್ ಪ್ರಾಥಮಿಕ ತನಿಖೆ ನಡೆಸಿದ್ದರು.

 ತನಿಖೆಯ ಬಳಿಕ ನ್ಯಾಯಾಲಯಕ್ಕೆ ಚಾರ್ಜ್ ಶೀಟ್

ತನಿಖೆಯ ಬಳಿಕ ನ್ಯಾಯಾಲಯಕ್ಕೆ ಚಾರ್ಜ್ ಶೀಟ್

ಲಂಚ ಪ್ರಕರಣದ ಗಂಭೀರತೆ ಅರಿತ ರಾಜ್ಯ ಸರ್ಕಾರ ಐಪಿಎಸ್ ಅಧಿಕಾರಿ ಕಮಲ್ ಪಂತ್ ನೇತೃತ್ವದಲ್ಲಿ ಎಸ್ಐಟಿ ತಂಡ ರಚಿಸಿತ್ತು. ತನಿಖೆ ನಡೆಸಿ ನ್ಯಾಯಾಲಯಕ್ಕೆ 1200ಕ್ಕೂ ಹೆಚ್ಚು ಪುಟಗಳ ಚಾರ್ಜ್ ಶೀಟ್ ಸಲ್ಲಿಸಿತ್ತು. ಪ್ರಕರಣದಲ್ಲಿ ಅಂದಿನ‌ ಲೋಕಾಯುಕ್ತ ವೈ. ಭಾಸ್ಕರ್ ರಾವ್ ಪುತ್ರ ಅಶ್ವಿನಿ ರಾವ್, ಲೋಕಾಯುಕ್ತ ಕಚೇರಿಯಲ್ಲಿ ಪಿಆರ್ ಓ ಆಗಿದ್ದ ಸೈಯ್ಯದ್ ರಿಯಾಜ್, ಅಶೋಕ್ ಕುಮಾರ್, ನರಸಿಂಹರಾವ್, ವಿ. ಭಾಸ್ಕರ್ ಹಾಗೂ ಶಂಕರ್ ಗೌಡ ಸೇರಿದಂತೆ ಇನ್ನಿತರರ ಹೆಸರುಗಳನ್ನು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿತ್ತು. ದೂರುದಾರ ಎಂ. ಎನ್. ಕೃಷ್ಣಮೂರ್ತಿ ನೀಡಿದ ದೂರಿನ ಮೇರೆಗೆ ತನಿಖೆ ನಡೆಸಿ ಎಸ್ಐಟಿ ಚಾರ್ಜ್ ಶೀಟ್ ಸಲ್ಲಿಸಿದ್ದ ಲೋಕಾ ವಿಶೇಷ ನ್ಯಾಯಾಲಯದ‌ ಮುಂದೆ ತಮ್ಮ ಹೇಳಿಕೆ ನೀಡಿದ್ದಾರೆ.

 ಅಸಲಿಗೆ ಬ್ಲಾಕ್ ಮೇಲ್ ಮಾಡಿದ್ದು ಎನ್.ಅಶೋಕ್‌ ಕುಮಾರ್

ಅಸಲಿಗೆ ಬ್ಲಾಕ್ ಮೇಲ್ ಮಾಡಿದ್ದು ಎನ್.ಅಶೋಕ್‌ ಕುಮಾರ್

ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ನ ಕಾರ್ಯಪಾಲಕ ಅಭಿಯಂತರರಾಗಿ 2015ರಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗ ಎಂ. ಎಸ್. ಬಿಲ್ಡಿಂಗ್ ನಲ್ಲಿ ಎರಡನೇ ಮಹಡಿಯಲ್ಲಿರುವ ಸಭಾಂಗಣಕ್ಕೆ ಕರೆಯಿಸಿಕೊಂಡು ಲೋಕಾಯುಕ್ತ ಜಂಟಿ ಆಯುಕ್ತ ಕೃಷ್ಣಾರಾವ್ ಎಂಬುವರು ನಿನ್ನ ವಿರುದ್ಧ ಭ್ರಷ್ಟಾಚಾರ ಎಸಗಿರುವ ದೂರುಗಳು ಬಂದಿವೆ. 1 ಕೋಟಿ ರೂಪಾಯಿ ಹಣ ನೀಡಬೇಕು. ಇಲ್ಲದಿದ್ದರೆ ಲೋಕಾಯುಕ್ತ ಪೊಲೀಸರಿಂದ ಮನೆ ಮೇಲೆ ದಾಳಿ ಮಾಡಿಸುವುದಾಗಿ ಬ್ಲ್ಯಾಕ್ ಮೇಲ್ ಮಾಡಿದ್ದರು‌. ಈ ಸಂಬಂಧ ಲೋಕಾಯುಕ್ತಕ್ಕೆ ಜೂನ್ ನಲ್ಲಿ ದೂರು ನೀಡಿದ್ದೆ. ಪೊಲೀಸರು ತನಿಖೆ ನಡೆಸುವಾಗ ಆತನ ಭಾವಚಿತ್ರ ತೋರಿಸಿದಾಗ ಈತನೇ ಲಂಚಕ್ಕೆ ಬೇಡಿಕೆಯಿಟ್ಟಿರುವುದಾಗಿ ಖಚಿತಪಡಿಸಿದ್ದೆ. ಲೋಕಾಯುಕ್ತ ಜಂಟಿ ಆಯುಕ್ತರೆಂದು ಕೃಷ್ಣರಾವ್ ಹೆಸರಿನಲ್ಲಿ ಎನ್. ಅಶೋಕ್‌ ಕುಮಾರ್ ಎಂಬಾತ ಬ್ಲ್ಯಾಕ್ ಮೇಲ್ ಮಾಡಿರುವುದು ತನಿಖೆ ವೇಳೆ ದೃಢಗೊಂಡಿತ್ತು ಎಂದು ಕೋರ್ಟ್ ಮುಂದೆ ಕಳೆದ ವಾರ ಮೂರ್ತಿ ಹೇಳಿಕೆ ನೀಡಿದ್ದಾರೆ.

 ಕೇಂದ್ರ ಸೇವೆಯಿಂದ ಬಂದು ಹೇಳಿಕೆ ನೀಡಿದ ನಾರಂಗ್

ಕೇಂದ್ರ ಸೇವೆಯಿಂದ ಬಂದು ಹೇಳಿಕೆ ನೀಡಿದ ನಾರಂಗ್

ಲಂಚ‌ ಪ್ರಕರಣ ಬೆಳಕಿಗೆ ಬಂದಾಗ ಲೋಕಾಯುಕ್ತದಲ್ಲಿ ಎಸ್ಪಿಯಾಗಿದ್ದ ಮಹಿಳಾ ಐಪಿಎಸ್ ಅಧಿಕಾರಿಯಾಗಿದ್ದ ಸೋನಿಯಾ ನಾರಂಗ್ ಕಳೆದ‌ ಶನಿವಾರ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಹೇಳಿಕೆ ನೀಡಿದ್ದಾರೆ.‌ ಪ್ರಸ್ತುತ ಕೇಂದ್ರ ಸೇವೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 1 ಕೋಟಿ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟ ಸಂಬಂಧ 2015ರ ಜೂನ್ ನಲ್ಲಿ ಕೃಷ್ಣಮೂರ್ತಿ ಎಂಬುವರು ಲೋಕಾಯುಕ್ತ ಜಂಟಿ ಆಯುಕ್ತ ಕೃಷ್ಣರಾವ್ ಎಂಬುವರು ನನಗೆ 1 ಕೋಟಿ ರೂಪಾಯಿ ನೀಡುವಂತೆ‌ ಅವಾಚ್ಯ ಶಬ್ಧಗಳಿಂದ ನಿಂದಿಸಿ ಧಮ್ಕಿ ಹಾಕಿದ್ದಾರೆ ಎಂದು ನನ್ನ ಬಳಿ ಮೌಖಿಕವಾಗಿ ಕೃಷ್ಣಮೂರ್ತಿ ದೂರು ನೀಡಿದ್ದರು. ಲಿಖಿತವಾಗಿ ಬರೆದು ದೂರು ನೀಡುವಂತೆ ಹೇಳಿದ್ದೆ. ಕುಟುಂಬ ಸದಸ್ಯರೊಂದಿಗೆ ಮಾತನಾಡಿ‌ ನಿರ್ಧರಿಸುವೆ ಎಂದು ಹೇಳಿ‌ ನಿರ್ಗಮಿಸಿದ್ದರು. ಕೆಲ ದಿನಗಳ ಬಳಿಕ ಕಚೇರಿಗೆ ಬಂದು ಲಿಖಿತವಾಗಿ ದೂರು ನೀಡಿದ ಮೇರೆಗೆ ಆರೋಪಿತರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದೇವು ಎಂದು ಕೋರ್ಟ್ ಮುಂದೆ ಹೇಳಿಕೆ ನೀಡಿದ್ದಾರೆ.

 ಕೋರ್ಟ್‌ ವಿಚಾರಣೆಯೂ ಮುಂದುವರೆದಿದೆ

ಕೋರ್ಟ್‌ ವಿಚಾರಣೆಯೂ ಮುಂದುವರೆದಿದೆ

ಇದೇ ವೇಳೆ‌ ಅಂದು ಕರ್ತವ್ಯದಲ್ಲಿದ್ದ ಡಿವೈಎಸ್ಪಿ ಹಾಗೂ ಇನ್‌ಸ್ಪೆಕ್ಟರ್ ಗಳ ಹೇಳಿಕೆಯನ್ನು ಕೋರ್ಟ್ ದಾಖಲಿಸಿಕೊಂಡಿದೆ. ಮುಂದಿನ‌ ದಿನಗಳಲ್ಲಿ ಎಸ್ಐಟಿ ಮುಖ್ಯಸ್ಥ ಕಮಲ್ ಪಂತ್ ಸೇರಿದಂತೆ ಹಿರಿಯ ಅಧಿಕಾರಿಗಳನ್ನು ಕೋರ್ಟ್ ಮುಂದೆ ಹಾಜರಾಗಿ‌ ಹೇಳಿಕೆ ನೀಡುವ ಸಾಧ್ಯತೆಯಿದೆ.

English summary
Lokayukta was created in Karnataka for the purpose of curbing corruption, but the corruption case within Lokayukta ruined the name of the organization. The bribery case of former Lokayukta Y. Bhaskar Rao and his son is at a critical stage, know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X