ಚಂದ್ರಲೇಔಟ್ ವಿದ್ಯಾಸಾಗರ್ ಪಬ್ಲಿಕ್ ಸ್ಕೂಲ್ ಗಲಾಟೆ: ಶಿಕ್ಷಕಿ ಶಶಿಕಲಾ ಸ್ಪಷ್ಟನೆ

ಬೆಂಗಳೂರು ಫೆಬ್ರವರಿ 13: 'ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲ' ಎನ್ನೋ ಮಾತಿಗೆ ಪೂರಕವಾಗುವಂತೆ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಕಾಲೇಜುಗಳಿಂದ ಪ್ರೌಢಶಾಲೆಗಳಿಗೂ ಹಬ್ಬಿಕೊಂಡಿದೆ. ಕರಾವಳಿಯಲ್ಲಿ ಹುಟ್ಟಿಕೊಂಡ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಸದ್ಯ ಸಿಲಿಕಾನ್ ಸಿಟಿಯಲ್ಲೂ ಹರಡಿಕೊಂಡಿದೆ.

ಚಂದ್ರ ಲೇಔಟ್ ವಿದ್ಯಾಸಾಗರ್ ಪಬ್ಲಿಕ್ ಸ್ಕೂಲ್ ಶಿಕ್ಷಕಿಯು ತರಗತಿಯಲ್ಲಿ ಹಿಜಾಬ್ ಧರಿಸುವಂತಿಲ್ಲ ಎಂದು ಬೋರ್ಡ್ ಮೇಲೆ ಬರೆದಿದ್ದಾರೆಂದು ಪೋಷಕರು ಆರೋಪಿದ್ದಾರೆ. ಸದ್ಯ ಈ ಆರೋಪಕ್ಕೆ ಶಿಕ್ಷಕಿ ಶಶಿಕಲ ಅವರು ಸ್ಪಷ್ಟನೆ ನೀಡಿದ್ದಾರೆ. ಶಾಲೆಯಲ್ಲಿ ಏಳನೇ ತರಗತಿಯಲ್ಲಿ ಪಾಠ ಮಾಡುವಾಗ ಮಕ್ಕಳು ಗಲಾಟೆ ಮಾಡುತ್ತಿದ್ದರು. ಮೂರು ಮಕ್ಕಳಿಗೆ ನಾನು ತಿಳಿ ಹೇಳಿದೆ. ಆದರೂ ಆ ಮೂರು ಮಕ್ಕಳು ಗಲಾಟೆ ಮಾಡುತ್ತಲೇ ಇದ್ದರು. ಹೀಗಾಗಿ ಶಿಕ್ಷಕಿ ಗಲಾಟೆ ಮಾಡಿದ ಮಕ್ಕಳನ್ನು ಕಂಟ್ರೋಲ್ ಮಾಡಲು ಅವರ ಹೆಸರಿನ ಮೊದಲನೇ ಹೆಸರನ್ನು ಬರೆಯುತ್ತಾರೆ. ಇದು ಏನು ಎಂಬ ಪ್ರಶ್ನೆ ಮಾಡುತ್ತಾರೆ. ಈ ವೇಳೆ ಶಿಕ್ಷಕಿ ಇದನ್ನು ಏನಾದರು ಅರ್ಥ ಮಾಡಿಕೊಳ್ಳಿ ಎಂದು ಕೋಪದಿಂದ ಹೇಳುತ್ತಾರೆ. ಈ ವೇಳೆ ಮಕ್ಕಳು ತಮ್ಮ ಇದನ್ನು ತಪ್ಪಾಗಿ ಅರ್ಥೈಸಿ ತಮ್ಮ ಮೇಲೆ ಶಿಕ್ಷಕಿ ಕೆಟ್ಟ ಶಬ್ದ ಬಳಕೆ ಮಾಡಿದ್ದಾರೆಂದು ಪೋಷಕರ ಬಳಿ ದೂರು ನೀಡಿದ್ದಾರೆ. ಬಳಿಕ ಪೋಷಕರು ಶಾಲೆಯ ಬಳಿ ಬಂದು ಗಲಾಟೆ ಮಾಡಿದ್ದಾರೆ ಎಂದು ಶಿಕ್ಷಕಿ ಡಿಡಿಪಿಐ ಮುಂದೆ ಹೇಳಿಕೊಂಡಿದ್ದಾರೆ.

ಬೆಂಗಳೂರಿನ ಶಾಲೆಯಲ್ಲೂ ಹಿಜಾಬ್ ವಿವಾದ: ಶಿಕ್ಷಕಿ ಅಮಾನತು
ಹಿಜಾಬ್ ಧರಿಸದಂತೆ ವಿದ್ಯಾರ್ಥಿಗಳ ಎದುರು ಬೋರ್ಡ್ ಮೇಲೆ ಬರೆದಿದ್ದಾರೆ ಎಂದು ಆರೋಪಿಸಲಾದ ಶಿಕ್ಷಕಿ ಜೊತೆಗೆ ಶಿಕ್ಷಣಾಧಿಕಾರಿ ಬೈಲಾಂಜನಪ್ಪ ಚರ್ಚೆ ನಡೆಸಿದ್ದಾರೆ. "ಶಿಕ್ಷಕಿ ಶಶಿಕಲಾ ಬಳಿ ಘಟನೆ ಕುರಿತು ಮಾಹಿತಿ ಪಡೆದುಕೊಂಡಿದ್ದೇನೆ. ಶಾಲೆಯಲ್ಲಿ ಪಾಠವನ್ನು ಬಿಟ್ಟು ಬೇರೆ ಯಾವ ವಿಷಯದ ಬಗ್ಗೆ ಪ್ರಸ್ತಾಪಿಸಿಲ್ಲ. ಹಿಜಾಬ್ ವಿವಾದದ ಬಗ್ಗೆ ತರಗತಿಯಲ್ಲಿ ಮಾತನಾಡಿಲ್ಲ ಎಂಬುದಾಗಿ ಶಿಕ್ಷಕಿ ತಿಳಿಸಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬೈಲಾಂಜನಪ್ಪ ಸ್ಪಷ್ಟನೆ ನೀಡಿದ್ದಾರೆ. ನಾನು ಇಲ್ಲಿ ಧರ್ಮಕ್ಕೆ ಸಂಬಂಧಿಸಿ ಯಾವುದೇ ಮಾತನ್ನು ಆಡಿಲ್ಲ. ಮಕ್ಕಳ ತಪ್ಪಿ ಗ್ರಹಿಕೆಯಿಂದ ಈ ಗಲಾಟೆ ಮಾಡಿದ್ದಾರೆ ಎಂದು ಶಿಕ್ಷಕಿ ಶಶಿಕಲಾ ಹೇಳಿಕೊಂಡಿದ್ದಾರೆಂದು ತಿಳಿದು ಬಂದಿದೆ.

What I Wrote on the Board Was Different: Teacher Shashikala
ಬೆಂಗಳೂರು ಚಂದ್ರ ಲೇಔಟ್‌ನಲ್ಲಿರುವ ವಿದ್ಯಾಸಾಗರ್ ಪಬ್ಲಿಕ್ ಶಾಲೆಯಲ್ಲಿ ಹಿಜಾಬ್ ಗಲಾಟೆಗೆ ಕಾರಣರಾದರು ಎಂಬ ಆರೋಪದ ಹಿನ್ನೆಲೆ ಶಿಕ್ಷಕಿ ಶಶಿಕಲಾರನ್ನು ಅಮಾನತುಗೊಳಿಸಲಾಗಿದೆ. ಬೋರ್ಡ್ ಮೇಲೆ ಸಾಂಕೇತಿಕ ಬರಹದ ಬಗ್ಗೆ ವಿದ್ಯಾರ್ಥಿಗಳಲ್ಲಿನ ಗೊಂದಲವೇ ಗಲಾಟೆಗೆ ಕಾರಣವಾಗಿದೆ. ಬೋರ್ಡ್ ಮೇಲೆ ಬರೆದ ಬರಹದ ಬಗ್ಗೆ ವಿದ್ಯಾರ್ಥಿಗಳು ಪೋಷಕರಿಗೆ ತಿಳಿಸಿದ್ದು, ಶುಕ್ರವಾರ ಪೋಷಕರ ಆಕ್ರೋಶಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

ರಾಜ್ಯದ ಕಾಲೇಜುಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ಧರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶವನ್ನು ಪ್ರಕಟಿಸಿದೆ. ಫೆಬ್ರವರಿ 10ರಂದು ಮೌಖಿಕವಾಗಿ ಆದೇಶ ನೀಡಿದ್ದ ಹೈಕೋರ್ಟ್ ಪೂರ್ಣಪೀಠವು ಶುಕ್ರವಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. "ನಮ್ಮದು ನಾಗರಿಕ ಸಮಾಜವಾಗಿದ್ದು, ಧರ್ಮ, ಸಂಸ್ಕೃತಿ ಹೆಸರಿನಲ್ಲಿ ಶಾಂತಿ ಮತ್ತು ಸಾಮರಸ್ಯಕ್ಕೆ ಧಕ್ಕೆ ಸರಿಯಲ್ಲ. ಯಾವುದೇ ವ್ಯಕ್ತಿಗಳು ಇಂತಹ ಕೃತ್ಯಗಳನ್ನು ನಡೆಸಲು ಅವಕಾಶವಿರುವುದಿಲ್ಲ. ಪ್ರತಿಭಟನೆಗಳಿಂದ ಶಾಲಾ-ಕಾಲೇಜುಗಳನ್ನು ಬಂದ್ ಮಾಡಬಾರದು. ಶಿಕ್ಷಣ ಸಂಸ್ಥೆಯ ಅನಿರ್ಧಿಷ್ಟ ಬಂದ್ ಸಂತಸದ ಸಂಗತಿಯಲ್ಲ ಎಂದು ಹೈಕೋರ್ಟ್ ತಿಳಿಸಿದೆ.

ಕಾಲೇಜಿನ ತರಗತಿಯೊಳಗೆ ಧರ್ಮದನುಸಾರವಾಗಿ ಸ್ಕಾರ್ಫ್, ಹಿಜಾಬ್, ಶಾಲು ಸೇರಿದಂತೆ ಯಾವುದೇ ಬಾವುಟಗಳನ್ನು ತೆಗೆದುಕೊಂಡು ಹೋಗುವಂತಿಲ್ಲ. ನಾವು ಎಲ್ಲಾ ವಿದ್ಯಾರ್ಥಿಗಳಿಗೂ ನಾವು ನಿರ್ಬಂಧ ಹೇರುತ್ತಿದ್ದೇವೆ. ತುರ್ತು ಅಗತ್ಯತೆ ಆಧಾರದ ಮೇಲೆ ವಿಚಾರಣೆ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳ ಉನ್ನತ ಶಿಕ್ಷಣ ಪ್ರವೇಶಕ್ಕೆ ಈಗಾಗಲೇ ಸಮಯ ನಿಗದಿಯಾಗಿದೆ. ಈ ಹಂತದಲ್ಲಿ ವಿಳಂಬ ಧೋರಣೆ ತೋರಿದರೆ ಶಿಕ್ಷಣಕ್ಕೆ ಧಕ್ಕೆ ಆಗಲಿದೆ. ಕರ್ನಾಟಕದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷ ಇನ್ನೇನೂ ಅಂತ್ಯವಾಗುತ್ತಿದೆ. ಈ ಸಂಬಂಧಪಟ್ಟವರು ಶಾಂತಿ ಮತ್ತು ಸಾಮರಸ್ಯ ಕಾಪಾಡಿಕೊಳ್ಳಬೇಕಿದೆ. ಆದ್ದರಿಂದ ಭವಿಷ್ಯದ ಶಿಕ್ಷಣಕ್ಕೆ ಧಕ್ಕೆ ಆಗದಂತೆ ಕ್ರಮ ತೆಗೆದುಕೊಳ್ಳಬೇಕಿದೆ. ಆದಷ್ಟು ಬೇಗ ಕಾಲೇಜುಗಳನ್ನು ಆರಂಭಿಸಬೇಕು ಎಂದು ಹೈಕೋರ್ಟ್ ತಿಳಿಸಿದೆ.

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಗುರುವಾರ ವಿಚಾರಣೆಯನ್ನು ಆರಂಭಿಸಿರುವ ವಿಸ್ತೃತ ನ್ಯಾಯಪೀಠ, ಹಿಜಾಬ್, ಕೇಸರಿ ಶಾಲು ಸೇರಿದಂತೆ ಯಾವುದೇ ಧರ್ಮವನ್ನು ಸೂಚಿಸುವ ವಸ್ತ್ರವನ್ನು ಧರಿಸಲು ಯಾವ ವಿದ್ಯಾರ್ಥಿ ಮೇಲೂ ಒತ್ತಡ ಹೇರಬಾರದು ಎಂದು ಮೌಖಿಕವಾಗಿ ಹೇಳಿತ್ತು. ಆ ಕುರಿತು ಆದೇಶ ನೀಡುವುದಾಗಿ ಹೇಳಿರುವ ನ್ಯಾಯಪೀಠ ವಿಚಾರಣೆ ಸೋಮವಾರ ಮಧ್ಯಾಹ್ನ 2.30ಕ್ಕೆ ಮುಂದೂಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+