ಐದು ವರ್ಷಗಳಲ್ಲಿ ಕಳಪೆ ಸಾಧನೆ ಮಾಡಿದ ಕರ್ನಾಟಕ ಸಂಸದರು: ಸ್ಫೋಟಕ ಅದ್ಯಯನ ಹೇಳೋದೇನು?

ಬೆಂಗಳೂರು, ಏಪ್ರಿಲ್‌, 20: ಈಗಾಗಲೇ ನಿನ್ನೆ (ಏಪ್ರಿಲ್‌ 19) ದೇಶದ ಹಲವೆಡೆ ಲೋಕಸಭೆ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದೆ. ಇನ್ನು ಕರ್ನಾಕದಲ್ಲಿ ಏಪ್ರಿಲ್‌ 26 ಹಾಗೂ ಮೇ 7ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿರುವಾಗಲೇ ರಾಜ್ಯದ ಎಲ್ಲ 28 ಸಂಸದರ ಕಾರ್ಯವೈಖರಿ ಬಗ್ಗೆ ವಿಶ್ಲೇಷಣೆ ಮಾಡಲಾಗಿದೆ. ಈ ಪೈಕಿ ಬಹುತೇಕ ಮಂದಿ ತಮ್ಮ ಅಧಿಕಾರಾವಧಿಯ 5 ವರ್ಷಗಳಲ್ಲಿ ಕಳಪೆ ಸಾಧನೆ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸಂಸತ್ತಿನಲ್ಲಿ ಅವರ ಹಾಜರಾತಿ, ಕೇಳಿದ ಪ್ರಶ್ನೆಗಳು, ಪ್ರಮುಖ ಚರ್ಚೆಗಳಲ್ಲಿ ಭಾಗವಹಿಸುವಿಕೆ ಮತ್ತು ಅವರ ಕ್ಷೇತ್ರಗಳಲ್ಲಿನ ಕಾರ್ಯಕ್ಷಮತೆಯನ್ನು ಸಮೀಕ್ಷೆ ಪರಿಗಣಿಸಿದೆ.

What is Karnataka MPs achievements in Five Years

ಎಲ್ಲ ಸಂಸದರ ಸರಾಸರಿ ಹಾಜರಾತಿ ಶೇಕಡಾ 71ರಷ್ಟಿದೆ ಎಂದು ಸಮೀಕ್ಷೆ ಬಹಿರಂಗಪಡಿಸಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಬೆಂಗಳೂರು ಉತ್ತರ ಸಂಸದ ಸದಾನಂದಗೌಡ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಹಾಗೂ ಧಾರವಾಡ ಸಂಸದ ಪ್ರಲ್ಹಾದ್‌ ಜೋಶಿ ಮತ್ತು ವಿಜಯಪುರ ಸಂಸದ ರಮೇಶ್‌ ಜಿಗಜಿಣಗಿ ಅವರು ಸದನದಲ್ಲಿ ಅಧ್ಯಕ್ಷರಿಗೆ ಕೃತಜ್ಞತೆ ಸಲ್ಲಿಸಿದ್ದು ಬಿಟ್ಟರೆ ಪ್ರಶ್ಯನ್ನೇ ಮಾಡಿಲ್ಲ ಎನ್ನುವ ಮಾಹಿತಿ ಬಹಿರಂಗವಾಗಿದೆ.

ಅನಂತ್‌ಕುಮಾರ್ ಹೆಗಡೆ, ಡಿ.ವಿ.ಸದಾನಂದಗೌಡ, ಪ್ರಹ್ಲಾದ್‌ ಜೋಶಿ, ರಮೇಶ್ ಜಿಗಜಿಣಗಿ, ಶ್ರೀನಿವಾಸ ಪ್ರಸಾದ್ ಮತ್ತು ಬಚ್ಚೇಗೌಡ ಚರ್ಚೆಯಲ್ಲಿ ಭಾಗವಹಿಸಲಿಲ್ಲ ಎಂದು ವಿಶ್ಲೇಷಣೆ ಹೇಳಿದೆ. ಇನ್ನು ಮಂಗಳಾ ಅಂಗಡಿ (ಬೆಳಗಾವಿ ಸಂಸದೆ) ಅವರು ಒಂದು ಚರ್ಚೆಯಲ್ಲಿ ಭಾಗವಹಿಸಿದ್ದು, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಹೆಚ್ಚಿನ ವಿಮಾನಗಳನ್ನು ಕೋರಿದರು ಎಂದು ತಿಳಿಸಿದೆ.

ಎಆರ್ ವಾಸವಿ ಮತ್ತು ಜಾನಕಿ ನಾಯರ್ ಅವರು ಈ ವಿಶ್ಲೇಷಣೆಯನ್ನು ನಡೆಸಿದ್ದು, ಶುಕ್ರವಾರ (ಏಪ್ರಿಲ್‌ 19) ನಾಗರಿಕ ಸಮಾಜದ ಗುಂಪು ಸಂವಿಧಾನದ ಅಡಿಯಲ್ಲಿ ಆಯೋಜಿಸಿದ್ದ ಸಂವಾದದಲ್ಲಿ ಇದನ್ನು ಬಿಡುಗಡೆಗೊಳಿಸಲಾಗಿದ್ದು, ಡಿ.ಕೆ.ಸುರೇಶ್ (ಬೆಂಗಳೂರು ಗ್ರಾಮಾಂತರ) ಮತ್ತು ಪ್ರಲ್ಹಾದ್ ಜೋಶಿ ಅವರು ಕೋವಿಡ್ ಸಮಯದಲ್ಲಿ ಜನರಿಗೆ ಸಾಕಷ್ಟು ಬೆಂಬಲ ನೀಡಿದ್ದಾರೆ ಎಂದು ಅವರು ತಮ್ಮ ವರದಿಯಲ್ಲಿ ಉಲ್ಲೇಖಿಸಿದ್ದಾರೆ.

11 ಸಂಸದರು ಸಭೆಗಳಿಗೆ ಹಾಜರಾಗುವ ಮೂಲಕ ಸೀಮಿತ ಬೆಂಬಲವನ್ನು ನೀಡಿದರು. 15 ಮಂದಿಯನ್ನು ಕಳಪೆ ಎಂದು ಪರಿಗಣಿಸಿದರೆ, ಇಬ್ಬರು ಅಂದರೆ ತೇಜಸ್ವಿ ಸೂರ್ಯ (ಬೆಂಗಳೂರು ದಕ್ಷಿಣ) ಮತ್ತು ಶ್ರೀನಿವಾಸ ಪ್ರಸಾದ್ ನಕಾರಾತ್ಮಕ ಪಾತ್ರವನ್ನು ನಿರ್ವಹಿಸಿದ್ದಾರೆ ಎಂದು ಅವರ ವಿಶ್ಲೇಷಣೆ ಹೇಳಿದೆ. ವಾಸವಿ ಮತ್ತು ಜಾನಕಿ ಅವರು, ರಾಜ್ಯಕ್ಕೆ ಜಿಎಸ್‌ಟಿ ಕೊಡುಗೆಗಳು ಮತ್ತು ಹಂಚಿಕೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸುರೇಶ್ ಮತ್ತು ಸದಾನಂದ ಗೌಡ ಅವರು ರಾಜ್ಯದಲ್ಲಿ ಜನೌಷಧಿ ಕೇಂದ್ರಗಳನ್ನು ಉತ್ತೇಜಿಸಲು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಪರಿಗಣಿಸಲಾಗಿದೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+