ಪುಣೆ-ಬೆಂಗಳೂರು ಎಕ್ಸ್‌ಪ್ರೆಸ್‌ ವೇ ನಿರ್ಮಾಣವಾದ್ರೆ ಬೆಂಗಳೂರು ಸೇರಿ ಕರ್ನಾಟಕಕ್ಕೆ ಏನೆಲ್ಲಾ ಹೆಚ್ಚುವರಿ ಲಾಭಗಳಿವೆ ಗೊತ್ತಾ?

Bengaluru-Pune Expressway: ಭಾರತದಲ್ಲಿ ನಿರ್ಮಾಣ ಹಂತದಲ್ಲಿರುವ ಬಹುನಿರೀಕ್ಷಿತ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬೆಂಗಳೂರು-ಪುಣೆ ಎಕ್ಸ್‌ಪ್ರೆಸ್‌ ವೇ ಕೂಡ ಒಂದಾಗಿದೆ. ಈ ಹೆದ್ದಾರಿಯೂ ಕರ್ನಾಟಕದ ಹಲವು ಜಿಲ್ಲೆಗಳ ಮೂಲಕ ಹಾದುಹೋಗಲಿದೆ. ಇನ್ನೂ ಇದರ ಕಾಮಗಾರಿ ಎಲ್ಲಿಗೆ ಬಂದು ತಲುಪಿದೆ? ಇದರಿಂದ ಏನೆಲ್ಲ ಪ್ರಯೋನಗಳಿವೆ ಹಾಗೂ ನಿರ್ಮಾಣ ವೆಚ್ಚ ಎಷ್ಟು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಸಂಪರ್ಕ ಕಲ್ಪಿಸುವ ಪುಣೆ-ಬೆಂಗಳೂರು ಎಕ್ಸ್‌ಪ್ರೆಸ್‌ವೇ ನಿರ್ಮಾಣದ ಮಹತ್ವದ ಮಾಹಿತಿಯೊಂದನ್ನು ಹೊರಹಾಕಿದೆ. ಎಲ್ಲವೂ ಅಂದುಕೊಂಡಂತೆ ಆದರೆ, ಈ ಮಹತ್ವಾಕಾಂಕ್ಷೆಯ ಯೋಜನೆಯ ನಿರ್ಮಾಣ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎನ್ನಲಾಗುತ್ತಿದೆ.

What is More benefits by Bengaluru-Pune Expressway for Karnataka Know details

ಪುಣೆ-ಬೆಂಗಳೂರು ಎಕ್ಸ್‌ಪ್ರೆಸ್‌ವೇ: ಇದು 700 ಕಿಲೋಮೀಟರ್ ಉದ್ದದ ಎಕ್ಸ್‌ಪ್ರೆಸ್‌ವೇ ಆಗಿದ್ದು, ಕರ್ನಾಟಕದ ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಕೊಪ್ಪಳ, ಗದಗ, ಬಾಗಲಕೋಟೆ ಮತ್ತು ಬೆಳಗಾವಿ ಸೇರಿದಂತೆ 9 ಜಿಲ್ಲೆಗಳು ಹಾಗೂ
ಮಹಾರಾಷ್ಟ್ರದ ಮೂರು ಜಿಲ್ಲೆಗಳಾದ ಸಾಂಗ್ಲಿ, ಸತಾರಾ ಮತ್ತು ಪುಣೆ ಮೂಕ ಹಾದುಹೋಗಲಿದೆ.

ಇದು 8 ಪಥಗಳ ಹೆದ್ದಾರಿಯಾಗಲಿದ್ದು, ಅಂದಾಜು ನಿರ್ಮಾಣ ವೆಚ್ಚ ₹50,000 ಕೋಟಿ ರೂಪಾಯಿ ಹೆಚ್ಚು ಎನ್ನುವ ಮಾಹಿತಿ ಇದೆ. ಇದು ನಿರ್ಮಾಣವಾದರೆ ಎರಡು ನಗರಗಳ ಪ್ರಮಾಣ ಸಮಯ ಕಡಿಮೆಯಾಗಲುದೆ. ಎಕ್ಸ್‌ಪ್ರೆಸ್‌ವೇ ಪುಣೆ ಮತ್ತು ಬೆಂಗಳೂರು ನಡುವಿನ ಪ್ರಯಾಣದ ಸಮಯವನ್ನು 15 ಗಂಟೆಗಳಿಂದ ಕೇವಲ 7 ಗಂಟೆಗಳವರೆಗೆ ಕಡಿತಗೊಳಿಸುತ್ತದೆ.

ವಾಹನಗಳಿಗೆ ಗಂಟೆಗೆ ಗರಿಷ್ಠ 120 ಕಿಲೋಮೀಟರ್ ವೇಗದ ಮಿತಿಯನ್ನು ಅಳವಡಿಸಲಾಗಿದೆ. ಇನ್ನು ಎನ್‌ಎಚ್‌ಎಐ ಅಧಿಕಾರಿಗಳು ಪ್ರಸ್ತುತ ಇದರ ವಿಸ್ತೃತ ಯೋಜನಾ ವರದಿ (ಡಿಪಿಆರ್)ಯನ್ನು ಸಿದ್ಧಪಡಿಸುತ್ತಿದ್ದಾರೆ. ಡಿಪಿಆರ್ ಪೂರ್ಣಗೊಂಡ ಬಳಿಕ ಭೂ ಸ್ವಾಧೀನ ಮತ್ತು ಇತರ ಪ್ರಾಥಮಿಕ ಪ್ರಕ್ರಿಯೆಗಳನ್ನು ಪ್ರಾರಂಭ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಕ್ಸ್‌ಪ್ರೆಸ್‌ವೇ ಹಲವು ಫ್ಲೈಓವರ್‌ಗಳು, ಮೇಲ್ಸೇತುವೆಗಳು ಮತ್ತು ಇಂಟರ್‌ಚೇಂಜ್‌ಗಳನ್ನು ಹೊಂದಿದ್ದು, ತಡೆರಹಿತ ಸಂಪರ್ಕವನ್ನು ಹೊಂದಿದೆ. ಈ ಪುಣೆ-ಬೆಂಗಳೂರು ಎಕ್ಸ್‌ಪ್ರೆಸ್‌ವೇ ನಿರ್ಮಾಣವು 2028ಕ್ಕೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ವಾಹನ ಸಂಚಾರಕ್ಕೆ ಮುಕ್ತವಾದರೆ, ಈ ಪ್ರದೇಶದಲ್ಲಿ ಆರ್ಥಿಕ ಅಭಿವೃದ್ಧಿಯನ್ನು ಕಾಣಬಹುದಾಗಿದೆ. ವಿಶೇಷವಾಗಿ ರಿಯಲ್ ಎಸ್ಟೇಟ್ ಅಭಿವೃದ್ಧಿ, ಸುಧಾರಿತ ಸಂಪರ್ಕ ಮತ್ತು ಮೂಲಸೌಕರ್ಯ ಒದಗಿಸಲು ಸಹಕಾರಿಯಾಗಲಿದೆ.

ಯೋಜನೆಯ ಬಗ್ಗೆ ವಿವರವಾದ ಮಾಹಿತಿಯು ಇನ್ನೂ ಬಹಿರಂಗ ಆಗದಿದ್ದರೂ, ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣದ ಜೊತೆಗೆ ಎಕ್ಸ್‌ಪ್ರೆಸ್‌ವೇ ಕರ್ನಾಟಕ ಮತ್ತು ಮಹಾರಾಷ್ಟ್ರದ ರಿಯಲ್ ಎಸ್ಟೇಟ್ ಕ್ಷೇತ್ರದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+