ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಷ್ಟ್ರ ರಾಜಕಾರಣ ಪ್ರವೇಶಿಸುವ ಬಗ್ಗೆ ಆರ್ ಅಶೋಕ್ ಹೇಳಿದ್ದೇನು?

|
Google Oneindia Kannada News

Recommended Video

ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸುವ ಬಗ್ಗೆ ಆರ್ ಅಶೋಕ್ ಹೇಳಿದ್ದು ಹೀಗೆ | Oneindia Kannada

ಬೆಂಗಳೂರು, ನವೆಂಬರ್ 15: 'ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ನನಗೆ ಬೆಂಗಳೂರು ಬಿಜೆಪಿಯನ್ನು ಮುನ್ನಡೆಸುವುದೇ ಇಷ್ಟ' ಎಂದು ಮಾಜಿ ಉಪಮುಖ್ಯಮಂತ್ರಿ ಆರ್ ಅಶೋಕ್ ಹೇಳಿದ್ದಾರೆ.

ಕೇಂದ್ರ ಸಚಿವ ಅನಂತ್ ಕುಮಾರ್ ಅವರ ನಿಧನದ ನಂತರ ಬೆಂಗಳೂರು ದಕ್ಷಿಣಕ್ಕೆ ಉತ್ತರಾಧಿಕಾರಿ ಯಾರು ಎಂಬ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಅವರು ಉತ್ತರಿಸುತ್ತಿದ್ದರು. ಬೆಂಗಳೂರು ದಕ್ಷಿಣದಿಂದ ಲೋಕಸಭೆಗೆ ಬಿಜೆಪಿ ಅಭ್ಯರ್ಥಿಯಾಗಿ ಆರ್ ಅಶೋಕ್ ಅವರ ಹೆಸರೂ ಸಾಮಾಜಿಕ ಮಾಧ್ಯಮಗಳಲ್ಲಿ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಅವರು ಪ್ರತಿಕ್ರಿಯೆ ನೀಡಿದರು.

ಬೆಂಗಳೂರು ದಕ್ಷಿಣಕ್ಕೆ ತೇಜಸ್ವಿನಿ ಅನಂತ್ ಕುಮಾರ್ ಬಿಜೆಪಿ ಅಭ್ಯರ್ಥಿ?!ಬೆಂಗಳೂರು ದಕ್ಷಿಣಕ್ಕೆ ತೇಜಸ್ವಿನಿ ಅನಂತ್ ಕುಮಾರ್ ಬಿಜೆಪಿ ಅಭ್ಯರ್ಥಿ?!

"ಅನಂತ್ ಕುಮಾರ್ ಒಬ್ಬ ವಿಶಿಷ್ಟ ವ್ಯಕ್ತಿ. ಅವರ ಮಾರ್ಗದರ್ಶನದಿಂದ ನಾನು ಹಲವು ವಿಷಯಗಳನ್ನು ಕಲಿತೆ. ಆದರೆ ಅವರ ನಿಧನದಿಂದ ನನಗೆ ಅನಾಥಭಾವ ಕಾಡುತ್ತಿದೆ. 2006 ರಲ್ಲಿ ಕುಮಾರಸ್ವಾಮಿ ಅವರ ಸಂಪುಟದಲ್ಲಿ ಆರೋಗ್ಯ ಖಾತೆಯನ್ನು ನಿರ್ವಹಿಸಲು ಒಪ್ಪಿಕೊಳ್ಳುವಂತೆ ಹೇಳಿದ್ದು ಅನಂತ್ ಕುಮಾರ್ ಅವರೇ. ಅವರ ಮಾತಿಗೆ ಬೆಲೆ ನೀಡಿ ನಾನು ಈ ಖಾತೆಯನ್ನು ನಿರ್ವಹಿಸಿದೆ. ಅನಂತ್ ಕುಮಾರ್ ಮತ್ತು ನನ್ನ ನಡುವೆ ಉತ್ತಮ ಬಾಂಧವ್ಯವಿತ್ತು. ಅದನ್ನು ಮುರಿಯಲು ಹಲವರು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ" ಎಂದು ಅಶೋಕ್ ಭಾವುಕರಾಗಿ ನುಡಿದರು.

What is R Ashoks opinion to enter national politics?

ಅನಂತ್ ಕುಮಾರ್ ಇಲ್ಲದ ಬೆಂಗಳೂರು ದಕ್ಷಿಣಕ್ಕೆ ಉತ್ತರಾಧಿಕಾರಿ ಯಾರು?ಅನಂತ್ ಕುಮಾರ್ ಇಲ್ಲದ ಬೆಂಗಳೂರು ದಕ್ಷಿಣಕ್ಕೆ ಉತ್ತರಾಧಿಕಾರಿ ಯಾರು?

"ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ನಾನು ಪಕ್ಷದ ಮುಖಂಡರಾದ ಸುಬ್ಬಣ್ಣ, ವಿ.ಸೋಮಣ್ಣ ಮತ್ತು ಅರವಿಂದ್ ಲಿಂಬಾವಳಿ ಅವರ ಮಾರ್ಗದರ್ಶನದಲ್ಲಿ ಬೆಂಗಳೂರು ಬಿಜೆಪಿಯನ್ನೇ ಮುನ್ನಡೆಸಲು ಇಷ್ಟಪಡುತ್ತೇನೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲೂ ಬಿಜೆಪಿ ಗೆಲುವಿಗೆ ಶ್ರಮಿಸುತ್ತೇನೆ" ಎಂದರು.

English summary
Karnataka BJP leader and former deputy chief minister R Ashok told, he was not interested in national politics.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X