ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ತಟ್ಟದ ಕೊರೊನಾ ಸೋಂಕು

|
Google Oneindia Kannada News

ಬೆಂಗಳೂರು, ಏಪ್ರಿಲ್ 3: ಬೆಂಗಳೂರು ನಗರದಲ್ಲಿ ಕೊರೊನಾ ಸೋಂಕು (ಕೋವಿಡ್ 19) ಹೆಚ್ಚು ಹರಡಿದೆ. 27 ಜನರಿಗೆ ಸೋಂಕು ತಗುಲಿದೆ. ಆದರೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್ 19 ಪಾಸಿಟಿವ್ ಪ್ರಕರಣಗಳು ಕಂಡು ಬಂದಿಲ್ಲ.

ಕೊರೋನಾ ವೈರಸ್ ಸೋಂಕು ತಡೆಯಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಎಲ್ಲಾ ಹಂತಗಳಲ್ಲಿ ಪರಿಣಾಮಕಾರಿ ನಿಯಂತ್ರಣ ವಿಧಾನಗಳನ್ನು ಅನುಸರಿಸಲಾಗುತ್ತಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

ಲಾಕ್ ಡೌನ್; ಏಪ್ರಿಲ್ 14 ರವರೆಗೆ ಉಚಿತ ಹಾಲು ವಿತರಣೆಲಾಕ್ ಡೌನ್; ಏಪ್ರಿಲ್ 14 ರವರೆಗೆ ಉಚಿತ ಹಾಲು ವಿತರಣೆ

ಜಿಲ್ಲೆಯಲ್ಲಿ ಏಪ್ರಿಲ್ 3 ರವರೆಗೆ ಒಟ್ಟು 194 ಜನರನ್ನು ಅವಲೋಕನ ಮಾಡಲಾಗಿರುತ್ತದೆ. 186 ಜನ 14 ದಿನಗಳ ಗೃಹ ಕ್ವಾರೇಂಟೈನ್ ತಪಾಸಣೆ ಪಡೆಯುತ್ತಿದ್ದಾರೆ. 8 ಜನ 14 ದಿನಗಳ ಕ್ವಾರೆಂಟೈನ್ ತಪಾಸಣೆಯನ್ನು ಆಸ್ಪತ್ರೆಯಲ್ಲಿ ಪಡೆಯುತ್ತಿರುತ್ತಾರೆ. 55 ಜನರು 14 ದಿನಗಳ ಗೃಹ ಕ್ವಾರೇಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.

What is The Covid19 Sitution Bengaluru Rural District

ಪ್ರಸ್ತುತ 139 ಜನರು ಅವಲೋಕನದಲ್ಲಿ ಇರುತ್ತಾರೆ. ಜಿಲ್ಲೆಯಲ್ಲಿ 3 ಪ್ರಕರಣಗಳನ್ನು ಮಾದರಿ ಪರೀಕ್ಷೆಗೆ ಒಳಪಡಿಸಲಾಗಿದ್ದು ಮೂರು ಪ್ರಕರಣಗಳು ನೆಗೆಟಿವ್ ಆಗಿ ವರದಿಯಾಗಿವೆ. ಪಾಸಿಟಿವ್ ಪ್ರಕರಣಗಳು ಯಾವುದು ಕಂಡುಬಂದಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.

English summary
What is The Covid19 Sitution Bengaluru Rural District. there is no covid19 positive cases in Bengaluru Rural District.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X