ಅಸ್ತಿತ್ವ ಉಳಿಸಿಕೊಳ್ಳಲು ಜೆಡಿಎಸ್‌ನಿಂದ "ಸಿದ್ಧಾಂತ" ಅಸ್ತ್ರ, ಏನದು ?

Nikhil Gowda: ಜೆಡಿಎಸ್ ಪಕ್ಷವು ತನ್ನ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಇದೀಗ ಹೊಸ ಅಸ್ತ್ರವೊಂದನ್ನು ಪ್ರಯೋಗಿಸಿದೆ. ಬಿಜೆಪಿಯೊಂದಿಗೆ ಲೋಕಸಭೆ ಚುನಾವಣಾ ಪೂರ್ವದಲ್ಲಿ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ ಪಕ್ಷವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಕಾರಣಕ್ಕಾಗಿಯೇ ನಿರ್ದಿಷ್ಟ ಸಮುದಾಯದ ನಾಯಕರು ಹಾಗೂ ಮತದಾರರ ವಿಶ್ವಾಸವನ್ನು ಕಳೆದುಕೊಂಡಿದೆ. ಇದೇ ಕಾರಣಕ್ಕೆ ಮುಸ್ಲಿಂ ಸಮುದಾಯದ ಹಲವು ನಾಯಕರು ಜೆಡಿಎಸ್‌ ತೊರೆದಿದ್ದಾರೆ. ಇದೀಗ ಆ ವಿಶ್ವಾಸವನ್ನು ಮರಳಿ ಪಡೆಯುವ ಉದ್ದೇಶದಿಂದ ಜೆಡಿಎಸ್‌ ಸಿದ್ಧಾಂತದ ಅಸ್ತ್ರವನ್ನು ಪ್ರಯೋಗಿಸಿದೆ.

ಸಿದ್ಧಾಂತ ಮಾರಾಟ ಮಾಡಿಲ್ಲ ಎಂದಿದ್ದೇಕೆ ನಿಖಿಲ್

ನಾವು ( ಜೆಡಿಎಸ್) ಬಿಜೆಪಿಯೊಂದಿಗೆ ರಾಜಕೀಯವಾಗಿ ಕೈ ಜೋಡಿಸಿದ್ದೇವೆ ನಿಜ. ಆದರೆ, ಬಿಜೆಪಿಯೊಂದಿಗೆ ಕೈ ಜೋಡಿಸಿದ ಮಾತ್ರಕ್ಕೆ ನಾವು ನಮ್ಮ ಸಿದ್ಧಾಂತಗಳನ್ನೂ ಮಾರಾಟ ಮಾಡಿಕೊಂಡಿದ್ದೇವೆ ಎಂದು ಅರ್ಥವಲ್ಲ ಎಂದು ಜೆಡಿಎಸ್‌ನ ರಾಜ್ಯ ಯುವ ಘಟಕದ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಈ ಮೂಲಕ ಬಿಜೆಪಿಯೊಂದಿಗೆ ಇದ್ದರೂ, ಜೆಡಿಎಸ್‌ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳುವ ಮಾರ್ಗಗಳನ್ನು ಜಾಣ್ಮೆಯಿಂದ ಇರಿಸುತ್ತಿದೆ. ಈ ಹಿಂದೆ ಅಲ್ಪಸಂಖ್ಯಾತ ನಾಯಕರು ಜೆಡಿಎಸ್‌ನಿಂದ ವಿಮುಖರದಗುತ್ತಿದ್ದ ಸಂದರ್ಭದಲ್ಲಿ ಜೆಡಿಎಸ್‌ನ ನಾಯಕರು ಅಷ್ಟು ಗಂಭೀರವಾಗಿ ಪರಿಗಣಿಸಿರಲಿಲ್ಲ. ಇದೀಗ ನಿಖಿಲ್ ಕುಮಾರಸ್ವಾಮಿ ಅವರು, ನಾವು ಎಲ್ಲಾ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸುತ್ತೇವೆ. ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ಸಮದಾಯಗಳ ಜನರ ಏಳಿಗೆಗಾಗಿ ನಾವು ಶ್ರಮಿಸುತ್ತಿದ್ದೇವೆ ಎಂದಿದ್ದಾರೆ.

What is the ideological weapon from JDS to survive

ಚನ್ನಪಟ್ಟಣ ಗೆಲುವಿಗಾಗಿ ರಣತಂತ್ರ

ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್‌ ಈ ಸಿದ್ಧಾಂತ ಅಸ್ತ್ರವನ್ನು ಬಿಟ್ಟಿದೆ ಎನ್ನಲಾಗುತ್ತಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರವು ಈ ಬಾರಿ ಜೆಡಿಎಸ್‌ ಹಾಗೂ ಡಿ.ಕೆ ಶಿವಕುಮಾರ್‌ ಸಹೋದರರ ನಡುವೆ ನೇರ ಸ್ಪರ್ಧೆಗೆ ಕಾರಣವಾಗಿದೆ. ಈ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಮೂಲಕ ಜೆಡಿಎಸ್‌ ಗರ್ವಭಂಗ ಮಾಡಬೇಕು ಎಂದು ಡಿಕೆ ಬ್ರದರ್ಸ್‌ ರಣತಂತ್ರ ರೂಪಿಸುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಡಿ.ಕೆ ಸುರೇಶ್‌ ಅವರು ಡಾ. ಮಂಜುನಾಥ್‌ ಅವರ ವಿರುದ್ಧ ಹೀನಾಯ ಸೋಲು ಅನುಭವಿಸಿದ್ದರು. ಇನ್ನು ಚನ್ನಪಟ್ಟಣ ಕ್ಷೇತ್ರದಲ್ಲಿ ತನ್ನ ಹಿಡಿತವನ್ನು ಸ್ಥಾಪಿಸಬೇಕು ಹಾಗೂ ನಿಖಿಲ್‌ ಕುಮಾರಸ್ವಾಮಿಗೆ ರಾಜಕೀಯ ಭವಿಷ್ಯ ರೂಪಿಸಬೇಕು ಎನ್ನುವ ಉದ್ದೇಶದಿಂದ ಕೇಂದ್ರ ಭಾರೀ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು ಶ್ರಮಿಸುತ್ತಿದ್ದಾರೆ ಎನ್ನಲಾಗಿದೆ.

ಇನ್ನು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮುಸ್ಲಿಂ ಮತದಾರರು ಅಂದಾಜು 45,000 ಸಾವಿರಕ್ಕೂ ಹೆಚ್ಚಿದ್ದಾರೆ. ಈ ಪ್ರಮಾಣವು ಸರಾಸರಿ ಮತದಾರರ ಸಂಖ್ಯೆಯು ಶೇ 20% ಹೆಚ್ಚಿದೆ. ಹೀಗಾಗಿ, ಜೆಡಿಎಸ್ ಇದೀಗ ಹೊಸ ಅಸ್ತ್ರವನ್ನು ಪ್ರಯೋಗಿಸುತ್ತಿದೆ ಎಂದು ವಿಶ್ಲೇಷಿಸಲಾಗತ್ತಿದೆ. ಬಿಜೆಪಿಯೊಂದಿಗೆ ಜೆಡಿಎಸ್‌ ಮೈತ್ರಿ ಮಾಡಿಕೊಂಡ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಹಲವು ನಾಯಕರು ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದಂತೆ ವಿವಿಧ ಪಕ್ಷಗಳನ್ನು ಸೇರಿದ್ದರು.

ಇನ್ನು ಕೆಲವರು ರಾಜಕೀಯವಾಗಿ ತಟಸ್ಥರಾಗಿದ್ದರು. ಮುಸ್ಲಿಂ ಸಮುದಾಯದ ಪ್ರಮುಖ ಮುಖಂಡ ಹಾಗು ನಾಯಕರಾದ ಸಿ.ಎಂ ಇಬ್ರಾಹಿಂ ಅವರು ಸಹ ಜೆಡಿಎಸ್ ತೊರೆದಿದ್ದರು. ಈ ಎಲ್ಲ ಬೆಳವಣಿಗೆಗಳಿಂದಾಗಿ ಜೆಡಿಎಸ್‌ ನಿಂದ ಅಲ್ಪಸಂಖ್ಯಾತರ ಅಂತರ ಕಾಪಾಡಿಕೊಂಡಿದ್ದರು. ಇದೀಗ ಜೆಡಿಎಸ್‌ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಹಾಗೂ ಚನ್ನಪಟ್ಟಣದ ಉಪಚುನಾವಣೆಯನ್ನು ಗೆಲ್ಲಲು ಹೊಸ ತಂತ್ರ ಹಾಗೂ ಹಳೆಯ ಆತ್ಮೀಯರನ್ನು ತನ್ನತ್ತ ಸೆಳೆಯಲು ಮುಂದಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+