ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಜೆಟ್ : ಬಿಬಿಎಂಪಿ ವ್ಯಾಪ್ತಿಯಲ್ಲಿ ಏನೇನು ಅಭಿವೃದ್ಧಿ?

|
Google Oneindia Kannada News

ಬೆಂಗಳೂರು, ಫೆಬ್ರವರಿ 16 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2018-19ನೇ ಸಾಲಿನ ಬಜೆಟ್ ಘೋಷಣೆ ಮಾಡಿದ್ದಾರೆ. ಅದರಲ್ಲಿ ಬಿಬಿಎಂಪಿ ವ್ಯಾಪ್ತಿಗೆ ಬರುವ ಕೆಲವು ಯೋಜನೆಗೆ ಹಣವನ್ನು ಮೀಸಲಿಡಲಾಗಿದೆ.

ರಾಜ್ಯ ಬಜೆಟ್: ಬೆಂಗಳೂರಿಗೆ ದೊರೆತಿದ್ದೇನು? ಇಲಾಖೆವಾರು ಮಾಹಿತಿ ರಾಜ್ಯ ಬಜೆಟ್: ಬೆಂಗಳೂರಿಗೆ ದೊರೆತಿದ್ದೇನು? ಇಲಾಖೆವಾರು ಮಾಹಿತಿ

ಬೆಂಗಳೂರು ಸಮಗ್ರ ಅಭಿವೃದ್ಧಿಗೆ 2, 500 ಕೋಟಿ ಹಣ ಮೀಡಲಿಡಲಾಗಿದೆ. 150 ಕಿ.ಮೀ ಉದ್ದದ ವ್ಯಾಪ್ತಿಯಲ್ಲಿ ಅರ್ಟೀರಿಯಲ್ ಮತ್ತು ಸಬ್ ಅರ್ಟೀರಿಯಲ್ ರಸ್ತೆಗಳ ವೈಟ್ ರಸ್ತೆಗಳಿಗೆ ವೈಟ್ ಟಾಪಿಂಗ್ ಮಾಡಲಾಗುತ್ತದೆ. ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಸಿಗ್ನಲ್ ಮುಕ್ತ ಕಾರಿಡಾರ್ ಕಾಮಗಾರಿಗೆ ಸಂಬಂಧಿಸಿದಂತೆ ಒಡಂಬಡಿಕೆ ಮಾಡಿಕೊಳ್ಳಲಾಗುತ್ತದೆ.

What is there for BBMP in the Budget

ಬಿಬಿಎಂಪಿ ಈ ಬಜೆಟ್ ನಲ್ಲಿ ಗಳಿಸಿದ್ದೇನು?
1) ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ 2,500 ಕೋಟಿ ರೂಗಳ ವೆಚ್ಚದಲ್ಲಿ ಕೈಗೊಳ್ಳಲಾಗುವ ಕ್ರಿಯಾ ಯೋಜನೆಗಳಿಗೆ ಸಂಬಂಧಿಸಿದ ಪೂರ್ವ ಸಿದ್ಧತಾ ಕಾರ್ಯಗಳು
2) 150 ಕಿ.ಮೀ ಉದ್ದ ಅರ್ಟೀರಿಯಲ್ ಮತ್ತು ಸಬ್ ಅರ್ಟೀರಿಯಲ್ ರಸ್ತೆಗಳ ವೈಟ್ ಟಾಪಿಂಗ್ ಕಾಮಗಾರಿ
3) ಪಾಲಿಕೆ ವತಿಯಿಂದ 40 ಕೆರೆಗಳ ಅಭಿವೃದ್ಧಿ
4) ಪಾಲಿಕೆ ವ್ಯಾಪ್ತಿಯ 100 ಕಿ.ಮೀ ಉದ್ದದ ಪ್ರಮುಖ ರಸ್ತೆಗಳ ಸಮಗ್ರ ಅಭಿವೃದ್ಧಿ
5) ನಗರದ ವಾಹನ ದಟ್ಟಣೆ ಕಡಿಮೆಗೊಳಿಸಲು ಪ್ರಮುಖ ಎಂಟು ಜಂಕ್ಷನ್ ಗಳಲ್ಲಿ ಗ್ರೇಡ್ ಸಪರೇಟರ್ ನಿರ್ಮಾಣ
6) 150 ಕಿ.ಮೀ ಬೃಹತ್ ನೀರುಗಾಲುವೆ ಅಭಿವೃದ್ಧಿ
7) 250 ಕಿ.ಮೀ ಉದ್ದದ ವಿವಿಧ ರಸ್ತೆಗಳ ಪಾದಚಾರಿ ಮಾರ್ಗಗಳ ಅಭಿವೃದ್ಧಿ
8) ಪಾಲಿಕೆ ವ್ಯಾಪ್ತಿಗೆ ಸೇರ್ಪಡೆ ಮಾಡಿರುವ 110 ಹಳ್ಳಿಗಳ ರಸ್ತೆಗಳ ಅಭಿವೃದ್ಧಿ
9) ಐಟಿಪಿಎಲ್ ಗೆ ಪರ್ಯಾಯ ಸಂಪರ್ಕ ಕಲ್ಪಿಸುವ 14 ರಸ್ತೆಗಳ ಅಭಿವೃದ್ಧಿ
10) ಹಳೆ ವಿಮಾನ ನಿಲ್ದಾಣ ರಸ್ತೆಗಳಲ್ಲಿ ಸಿಗ್ನಲ್ ಮುಕ್ತ ಕಾರಿಡಾರ್ ಕಾಮಗಾರಿಗೆ ಸಂಬಂಧಿಸಿದಂತೆ ಒಡಂಬಡಿಕೆಯ ಪ್ರಕಾರ ಎಚ್ ಎಎಲ್ ಸಂಸ್ಥೆಯವರು ನೀಡಿರುವ ಸ್ವತ್ತಿಗೆ ಬದಲಾಗಿ ಎನ್ಎಎಲ್ ವಿಂಡ್ ಟನ್ ರಸ್ತೆ ನಿರ್ಮಾಣ

English summary
In the view of election Siddaramaiah announces many schemes for Bengaluru. He allocates nearly 2,500 crore special project for city.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X