ಕುತೂಹಲಕರ; 'ಪಾಕಿಸ್ತಾನ್ ಜಿಂದಾಬಾದ್' ಎಂದಿದ್ದ ಅಮೂಲ್ಯಳ ಕನಸೇನಾಗಿತ್ತು?
ಬೆಂಗಳೂರು, ಫೆಬ್ರವರಿ 24: ಬೆಂಗಳೂರಿನಲ್ಲಿ ಪಾಕ್ ಪರ ಘೋಷಣೆ ಕೂಗಿ ದೇಶದ್ರೋಹ ಪ್ರಕರಣದಡಿ ಬಂಧನಕ್ಕೊಳಗಾಗಿರುವ ಅಮೂಲ್ಯ ಲಿಯೋನಾಳ ಬಗ್ಗೆ ಸ್ವಾರಸ್ಯಕರ ಸಂಗತಿಗಳು ಬೆಳಕಿಗೆ ಬಂದಿವೆ.
ಕಳೆದ ಗುರುವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಿಂದೂ ಮುಸ್ಲಿಂ ಸಿಖ್ ಇಸಾಯಿ ಫೌಂಡೇಶನ್ ಆಯೋಜಿಸಿದ್ದ ಸಿಎಎ ವಿರೋಧಿ ಸಮಾವೇಶದಲ್ಲಿ ಮೈಕ್ ತೆಗೆದುಕೊಂಡು ಭಾಷಣ ಮಾಡುವ ವೇಳೆ ಚಿಕ್ಕಮಗಳೂರು ಮೂಲದ ಕಾಲೇಜು ವಿದ್ಯಾರ್ಥಿನಿ ಅಮೂಲ್ಯ ಲಿಯೋನಾ, 'ಪಾಕಿಸ್ತಾನ್ ಜಿಂದಾಬಾದ್' ಎಂದು ಘೋಷಣೆ ಕೂಗಿದ್ದಳು.
ಅಮೂಲ್ಯ ಹೇಳಿಕೆಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಮೋದಿ, ಅಮಿತ್ ಷಾ, ಬಿಜೆಪಿ, ಆರ್‌ಎಸ್‌ಎಸ್ ಕಡು ವಿರೋಧಿಯಾಗಿದ್ದ ಲಿಯೋನಾ, ಇತ್ತೀಚೆಗೆ ಹತ್ಯೆಯಾದ ಲೇಖಕಿ ಗೌರಿ ಲಂಕೇಶ ರೀತಿ ತಾನೂ ಕೂಡ ಹೆಸರು ಮಾಡಬೇಕು, ಅದೇ ರೀತಿಯಲ್ಲಿ ಬೆಳೆಯಬೇಕು ಎಂದು ಕನಸು ಕಂಡಿದ್ದಳು ಎಂದು ತಿಳಿದು ಬಂದಿದೆ.

ಪ್ರತಿಭಟನೆಗಳನ್ನು ನಡೆಸಲು ಪ್ರಾರಂಭಿಸಿದ್ದಳು
ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೊಳಿಸಿದ ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶಾದ್ಯಂತ ತೀವ್ರ ಹೋರಾಟಗಳು ಪ್ರಾರಂಭವಾಗಿದ್ದವು. ಕರ್ನಾಟಕದಲ್ಲೂ ಅನೇಕ ಹೋರಾಟಗಳು ನಡೆದವು. ಮೊದಲಿನಿಂದಲೂ ಎಡಪಂಥೀಯ ಸಂಘಟನೆಗಳ ಮುಖಂಡರ ಜೊತೆ ಸಂಪರ್ಕ ಇರಿಸಿಕೊಂಡಿದ್ದ ಅಮೂಲ್ಯ ಸಿಎಎ ವಿರೋಧಿ ಹೋರಾಟದಲ್ಲಿ ತಾನೊಬ್ಬಳೇ ಕೆಲ ಹುಡುಗರ ಗುಂಪು ಕಟ್ಟಿಕೊಂಡು ಪ್ರತಿಭಟನೆಗಳನ್ನು ನಡೆಸಲು ಪ್ರಾರಂಭಿಸಿದ್ದಳು. ಸಿಎಎ ವಿರೋಧಿ ಹೋರಾಟದಲ್ಲಿ ಸ್ವಯಂಪ್ರೇರಿತವಾಗಿ ಹೋಗಿ ಪಾಲ್ಗೊಂಡು ಮೈಕ್ ಹಿಡಿದು ಭಾಷಣ ಮಾಡುತ್ತಿದ್ದಳು ಎಂದು ಅವಳ ಸ್ನೇಹಿತರ ವಿಚಾರಣೆಯಲ್ಲಿ ಗೊತ್ತಾಗಿದೆ.

ಗೌರಿಯಂತೆ ತಾನೂ ಬೆಳೆಯುತ್ತೇನೆ
ಗೌರಿ ಲಂಕೇಶ್ ಹತ್ಯೆಯಾದಾಗಲೂ ಅಮೂಲ್ಯ ಹೋರಾಟಗಳಲ್ಲಿ ಪಾಲ್ಗೊಳ್ಳುತ್ತಿದ್ದಳು. ನಂತರ ಗೌರಿಯಂತೆ ತಾನೂ ಬೆಳೆಯುತ್ತೇನೆ. ನಾನೂ ಹೆಸರು ಮಾಡಬೇಕು ಎಂದು ಅವಳ ಸ್ನೇಹಿತರ ಬಳಿ ಹೇಳಿಕೊಳ್ಳುತ್ತಿದ್ದಳಂತೆ ಎಂಬುದಾಗಿ ಅವಳ ಸ್ನೇಹಿತರೇ ಪೊಲೀಸ್ ವಿಚಾರಣೆಯಲ್ಲಿ ತಿಳಿಸಿರುವುದಾಗಿ ವರದಿಯಾಗಿದೆ.

24 ಭಾಷಣಗಳು ಪ್ರಚೋಧನಕಾರಿ
ಅಮೂಲ್ಯ ಬಿಜೆಪಿ, ಆರ್‌ಎಸ್‌ಎಸ್, ಅಮಿತ್ ಷಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿರೋಧಿಸಿ ಸಭೆ ಸಮಾರಂಭಗಳಲ್ಲಿ ಇದುವರೆಗೂ 77 ಭಾಷಣಗಳನ್ನು ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಅದರಲ್ಲಿ 24 ಭಾಷಣಗಳು ಪ್ರಚೋಧನಕಾರಿ ಆಗಿಯೇ ಇವೆ ಎಂದು ತಿಳಿದು ಬಂದಿದೆ. ಅಮೂಲ್ಯ ಸಭೆ ಸಮಾರಂಭಗಳಲ್ಲಿ ಮಾಡಿದ ಭಾಷಣಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಇಂದು ಪೊಲೀಸ್ ಕಸ್ಟಡಿಗೆ
ಉಪ್ಪಾರಪೇಟೆ ಪೊಲೀಸರಿಂದ ಬಂಧನಕ್ಕೆ ಒಳಗಾಗಿ ಪರಪ್ಪನ ಅಗ್ರಹಾರದಲ್ಲಿರುವ ಅಮೂಲ್ಯಳನ್ನು ಸೋಮವಾರ ಪೊಲೀಸರು ವಶಕ್ಕೆ ತೆಗೆದುಕೊಳ್ಳಲಿದ್ದಾರೆ. ಈ ಕುರಿತು ಅಮೂಲ್ಯಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ. ಅಮೂಲ್ಯಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಲಿದ್ದಾರೆ. ಅಲ್ಲದೇ ಇತ್ತ ಪೊಲೀಸರು ಸಮಾವೇಶ ಆಯೋಜಿಸಿದ್ದ ಸಂಘಟಕರ ಬಗ್ಗೆಯೂ ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ.
-
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ












Click it and Unblock the Notifications