ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜನರಿಗೆ ಐಎಂಎ ಠೇವಣಿ ಯಾವಾಗ ವಾಪಸ್ ಕೊಡ್ತೀರಿ?: ಹೈಕೋರ್ಟ್

|
Google Oneindia Kannada News

ಬೆಂಗಳೂರು,ಜನವರಿ 19: ಐಎಂಎ ಹಗರಣ ಹಿನ್ನೆಲೆಯಲ್ಲಿ ಠೇವಣಿ ಹಿಂದಿರುಗಿಸಲು ಕೋರಿ ಸುಮಾರು 65 ಸಾವಿರ ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಸರ್ಕಾರ ಹೈಕೋರ್ಟ್‌ಗೆ ಮಾಹಿತಿಯನ್ನು ನೀಡಿದೆ.

ಐಎಂಎ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಇಮ್ರಾನ್ ಪಾಷಾ ಸೇರಿದಂತೆ ಹಲವರು ಸಲ್ಲಿಸಿದ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಐಎಂಎ ಹಗರಣ: ರೋಷನ್ ಬೇಗ್‌ಗೆ ಜಾಮೀನು ಮಂಜೂರುಐಎಂಎ ಹಗರಣ: ರೋಷನ್ ಬೇಗ್‌ಗೆ ಜಾಮೀನು ಮಂಜೂರು

ಈ ವೇಳೆ ಸರ್ಕಾರಿ ವಕೀಲರು ಪ್ರಮಾಣಪತ್ರ ಸಲ್ಲಿಸಿ, 2021ರ ಜನವರಿ 3ರವರೆಗೂ ಠೇವಣಿ ಹಿಂದಿರುಗಿಸಲು ಕೋರಿ 65 ಸಾವಿರ ಅರ್ಜಿಗಳು ಠೇವಣಿದಾರರಿಂದ ಸಲ್ಲಿಕೆಯಾಗಿದೆ.

When Did People Get An IMA Deposit Karnataka Highcourt Questions Government

ಅಷ್ಟೂ ಅರ್ಜಿಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಜರುಗಿಸಲು ಹೆಚ್ಚಿನ ಕಾಲಾವಕಾಶ ಬೇಕಿದೆ ಎಂದು ತಿಳಿಸಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ ಸಾಧ್ಯವಾದಷ್ಟು ಬೇಗ ಠೇವಣಿದಾರರಿಗೆ ಹಣ ಹಿಂದಿರುಗಿಸಬೇಕು.

ಹೀಗಾಗಿ, ಎಷ್ಟು ಸಮಯದೊಳಗೆ ಅರ್ಜಿಗಳ ಪರಿಶೀಲನಾ ಕಾರ್ಯ ಪೂರ್ಣಗೊಳಿಸಲಾಗುತ್ತದೆ ಎಂಬ ಬಗ್ಗೆ ಮುಂದಿನ ವಿಚಾರಣೆ ವೇಳೆನ್ಯಾಯಾಲಯಕ್ಕೆ ಮಾಹಿತಿ ನೀಡಬೇಕು ಎಂದು ಸರ್ಕಾರಕ್ಕೆ ಸೂಚಿಸಲಾಗಿದೆ.

Recommended Video

ಇದನ್ನ ನಾವು ಒಪ್ಪಲ್ಲ ಯಡಿಯೂರಪ್ಪ & ದಿನೇಶ್ ಗುಂಡು ರಾವ್ ಟ್ವೀಟ್ !! | Oneindia Kannada

ಹಾಗೆಯೇ ಪ್ರಕರಣ ಕುರಿತು ತನಿಖೆಯ ಪ್ರಗತಿ ವರದಿಯನ್ನು ಸಲ್ಲಿಸುವಂತೆ ಸಿಬಿಐಗೆ ನಿರ್ದೇಶಿಸಿ ವಿಚಾರಣೆಯನ್ನು ಫೆ.10ಕ್ಕೆ ಮುಂದೂಡಲಾಯಿತು.

English summary
The government has informed the High Court that over 65,000 applications have been filed seeking the return of deposit in the wake of the IMA scam.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X