ಬಿಬಿಎಂಪಿ ಮೇಯರ್ ಚುನಾವಣೆ ಯಾವಾಗ? ಇಲ್ಲಿದೆ ಮಾಹಿತಿ
ಬೆಂಗಳೂರು, ಸೆಪ್ಟೆಂಬರ್ 13: ಬಿಬಿಎಂಪಿ ಮೇಯರ್ ಮತ್ತು ಉಪಮೇಯರ್ ಚನಾವಣೆ ಸೆಪ್ಟೆಂಬರ್ 27 ಕ್ಕೆ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಬಿಬಿಎಂಪಿ ಹಾಲಿ ಮೇಯರ್ ಹಾಗೂ ಉಪ ಮೇಯರ್ ಅಧಿಕಾರ ಅವಧಿ ಮುಗಿಯುತ್ತಾ ಬಂದಿದ್ದು ಸೆಪ್ಟೆಂಬರ್ ಅಂತ್ಯಕ್ಕೆ ಚುನಾವಣೆ ನಡೆಸಲು ಎಲ್ಲಾ ಸಿದ್ಧತೆ ಮಾಡಿಕೊಂಡಿದೆ.
ಸೆ.27ಕ್ಕೆ ಚುನಾವಣೆ ನಿಗದಿಯಾಗುವ ಸಾಧ್ಯತೆ ಇದೆ. ಹಾಲಿ ಮೇಯರ್ ಗಂಗಾಂಬಿಕೆ ಹಾಗೂ ಉಪಮೇಯರ್ ಭದ್ರೇಗೌಡ ಅವರ ಅಧಿಕಾರಾವಧಿ ಸೆಪ್ಟೆಂಬರ್ 28ಕ್ಕೆ ಮುಗಿಯಲಿದೆ.

ಹಾಗಾಗಿ ಬಿಬಿಎಂಪಿ ಅಧಿಕಾರಿಗಳು ನೂತನ ಮೇಯರ್ ಮತ್ತು ಉಪ ಮೇಯರ್ ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.
ಈಗಾಗಲೇ ಚುನಾವಣೆಗೆ ಮತದಾರ ಪಟ್ಟಿಯನ್ನೂ ಸಿದ್ಧಗೊಳಿಸಲಾಗಿದೆ. ಆ ಪ್ರಕಾರ, ಈ ಬಾರಿಯ ಚುನಾವಣೆಗೆ ಒಟ್ಟು 257 ಮತದಾರರಿದ್ದು, 128 ಮತಗಳ ಮ್ಯಾಜಿಕ್ ನಂಬರ್ ಬರಬೇಕಾಗಿದೆ.
ಸರ್ಕಾರ ಬದಲಾಗಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದರಿಂದ ಈ ಬಾರಿ ಬಿಜೆಪಿ ಪಾಲಿಕೆ ಅಧಿಕಾರ ಹಿಡಿಯಲು ಸರ್ವ ಪ್ರಯತ್ನ ನಡೆಸುತ್ತಿದೆ. ಏಳು ಜನ ಪಕ್ಷೇತರ ಸದಸ್ಯರ ಪೈಕಿ ಕನಿಷ್ಠ ನಾಲ್ವರು ಸದಸ್ಯರ ಬೆಂಬಲ ಅಗತ್ಯವಾಗಿದೆ. ಬಿಇಜೆಪಿ ಅಧಿಕಾರ ಹಿಡಿಯುವುದು ಬಹುತೇಕ ಖಚಿತ ಎನ್ನುವ ಮಾತುಗಳು ಕೇಳಿಬರುತ್ತಿವೆ.












Click it and Unblock the Notifications