• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಿವಾನಂದ ವೃತ್ತ ಫ್ಲೈಓವರ್ ಕಾಮಗಾರಿ ಮುಕ್ತಾಯ ಯಾವಾಗ?

|

ಬೆಂಗಳೂರು, ಆಗಸ್ಟ್ 22: ಶಿವಾನಂದ ವೃತ್ತ ಮೇಲ್ಸೇತುವೆ ಕಾಮಗಾರಿ 9 ತಿಂಗಳಲ್ಲಿ ಮುಕ್ತಾಯಗೊಳಿಸಲಾಗುವುದು ಎಂದು ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

ನಿಧಾನಗತಿಯಲ್ಲಿ ಕಾಮಗಾರಿ ಸಾಗುತ್ತಿರುವ ದೂರಿನ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಯಾಕೆ ಸಾಧ್ಯವಾಗುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಶಿವಾನಂದ ವೃತ್ತದಲ್ಲಿ ಮತ್ತೆ ರಸ್ತೆ ಬಂದ್:ಸಂಚಾರ ದಟ್ಟಣೆ ಸಾಧ್ಯತೆ

ಈ ಮೊದಲು 326.25ಮೀಟರ್ ಉದ್ದದ ಮೇಲ್ಸೇತುವೆ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿತ್ತು, ಆದರೆ ಕೆಲ ಸ್ಥಳೀಯರು ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯವು ಸಂಚಾರ ದಟ್ಟಣೆ ಕಡಿಮೆ ಮಾಡಲು ಮೇಲ್ಸೇತುವೆ ಅಗತ್ಯವಿದೆ ಎಂದು ಹೇಳಿತ್ತು.

ನ್ಯಾಯಾಲಯವು ಸಂಚಾರ ದಟ್ಟಣೆ ಸಮಸ್ಯೆಗೆ ಮೇಲ್ಸೇತುವೆಯ ಅಗತ್ಯವಿರುವುದಾಗಿ ತಿಳಿಸಿತ್ತು. ಹಾಗಾಗಿ 482 ಮೀಟರ್ ಉದ್ದದ ಮೇಲ್ಸೇತುವೆ ನಿರ್ಮಾಣ ಮಾಡಲಾಗುತ್ತಿದೆ. ಈ ಮಾರ್ಗದಲ್ಲಿ ಒಟ್ಟು 16 ಪಿಲ್ಲರ್‌ಗಳನ್ನು ನಿರ್ಮಿಸುತ್ತಿದ್ದು, 783 ಚ.ಮೀ ವಿಸ್ತೀರ್ಣದ ಜಾಗವನ್ನು ಸ್ವಾಧೀನಕ್ಕೆ ಪಡೆಯಬೇಕಿದೆ.

ಕುಡಿಯುವ ನೀರು, ಒಳಚರಂಡಿ ಕೊಳವೆ ಮಾರ್ಗವು ಹಾದು ಹೋಗಿದ್ದು, ಇವುಗಳ ಬದಲಾವಣೆಗೆ 60 ಕೋಟಿರ ರೂ ವ್ಯಯವಾಗಲಿದೆ. ಇದಕ್ಕೆ ಅನುಮೋದನೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈಗಾಗಲೇ 8 ಪಿಲ್ಲರ್ ಗಳ ನಿರ್ಮಾಣ ಕಾರ್ಯ ಮುಗಿದಿದೆ.

English summary
BBMP Mayor Gangambike Mallikarjun said that Shivananda Circle Flyover Work would be completed in 9 months.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X