• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸಂಪುಟ ವಿಸ್ತರಣೆ ಯಾವಾಗ? ಸಿದ್ದರಾಮಯ್ಯ ಅವರದ್ದು ಒಂದೇ ಉತ್ತರ

|

ಬೆಂಗಳೂರು, ಜೂನ್ 6: ಸಂಪುಟ ವಿಸ್ತರಣೆ ಬಗ್ಗೆ ನನ್ಯಾಕ್ರೀ ಕೇಳ್ತೀರಾ ಮುಖ್ಯಮಂತ್ರಿಗಳನ್ನು ಕೇಳಿ ಎಂದು ಕಡ್ಡಿ ತುಂಡು ಮಾಡಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಯಾವಾಗ ಆಗುತ್ತೆ ಎಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಸಿದ್ದರಾಮಯ್ಯ ಒಂದೇ ಒಂದು ಉತ್ತರ ನೀಡಿ ಹೊರಟೇ ಬಿಟ್ಟಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿಗಳನ್ನು ಕೇಳಬೇಕು ಎಂದಿದ್ದಾರೆ.

ಸಂಪುಟ ವಿಸ್ತರಣೆ : ಕಾಂಗ್ರೆಸ್‌ಗೆ ಷರತ್ತು ಹಾಕಿದ ದೇವೇಗೌಡರು!

ಈಗಾಗಲೇ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಇದ್ದ ಮುಸುಕಿನ ಗುದ್ದಾಟ ಕೆಲವೊಮ್ಮೆ ಬೀದಿಗೂ ಬರುತ್ತಿದೆ. ಹೀಗಿರುವಾಗ ಸಿದ್ದರಾಮಯ್ಯ ಏನೋ ಒಂದು ಉತ್ತರ ನೀಡಿ ಸಿಕ್ಕಿಹಾಕಿಕೊಳ್ಳುವ ಬದಲು ತನಗೂ ಅದಕ್ಕೂ ಸಂಬಂಧವಿಲ್ಲ ಎಂಬುದನ್ನೇ ಮುಖ್ಯವಾಗಿಸಿಕೊಂಡು ಸುಲಭವಾಗಿ ಮಾಧ್ಯಮದವರ ಪ್ರಶ್ನೆಗಳಿಂದ ನುಣುಚಿಕೊಂಡಿದ್ದಾರೆ.

ಕಾಂಗ್ರೆಸ್ ಶಾಸಕರು ಬಂಡಾಯ ಏಳುವ ಹಿಂದೆ ಸಿದ್ದರಾಮಯ್ಯ ಅವರ ಕೈವಾಡವೂ ಇದೆ ಎಂದು ಕೆಲವರು ಅನುಮಾನ ವ್ಯಕ್ತಪಡಿಸಿದ್ದಾರೆ.ಒಟ್ಟಿನಲ್ಲಿ ಸರ್ಕಾರಕ್ಕೂ ತನಗೂ ಸಂಬಂಧವಿಲ್ಲ ಎನ್ನುವ ರೀತಿಯಲ್ಲಿ ಹಾರಿಕೆ ಉತ್ತರವನ್ನು ಸಿದ್ದರಾಮಯ್ಯ ನೀಡಿರುವುದಂತೂ ಸತ್ಯ.

English summary
Former chief minister Siddaramaiah ansewers to the question of When will cabinet expansion takes place, He says Ask the chief minister .
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X