ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಐಪಿಎಲ್ ಪಂದ್ಯ , ಕೆಎಸ್‍ಸಿಎ ಸ್ಟೇಡಿಯಂ ಸುತ್ತ ವಾಹನ ನಿಲುಗಡೆಗೆ ನಿರ್ಬಂಧ

|
Google Oneindia Kannada News

ಬೆಂಗಳೂರು, ಮಾರ್ಚ್ 27: ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮಾ.28ರಂದು ಐಪಿಲ್ ಪಂದ್ಯ ನಡೆಯಲಿದ್ದು ಕ್ರೀಡಾಂಗಣದ ಸುತ್ತಮುತ್ತ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಆರ್‍ಸಿಬಿ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಐಪಿಎಲ್, ಟಿ-20 ಕ್ರಿಕೆಟ್ ಪಂದ್ಯ ನಡೆಯಲಿದ್ದು, ಈ ಕ್ರಿಕೆಟ್ ಪಂದ್ಯದ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ವಾಹನಗಳಲ್ಲಿ ಬರುವುದರಿಂದ ವಾಹನ ಸಂಚಾರ ನಿಷೇಧಿಸಲಾಗುತ್ತಿದೆ.

ಐಪಿಎಲ್ ಪಂದ್ಯ: ನಮ್ಮ ಮೆಟ್ರೋ ಅವಧಿ ತಡರಾತ್ರಿ 1 ಗಂಟೆವರೆಗೆ ವಿಸ್ತರಣೆಐಪಿಎಲ್ ಪಂದ್ಯ: ನಮ್ಮ ಮೆಟ್ರೋ ಅವಧಿ ತಡರಾತ್ರಿ 1 ಗಂಟೆವರೆಗೆ ವಿಸ್ತರಣೆ

ಮಾರ್ಚ್ 28ರಂದು ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 11.30ರವರೆಗೆ ವಾಹನಗಳನ್ನು ಕ್ವೀನ್ಸ್ ರಸ್ತೆಯಲ್ಲಿ, ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ರಸ್ತೆಯ ಎರಡೂ ಕಡೆ, ಎಂ.ಜಿ.ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ, ಲಿಂಕ್ ರಸ್ತೆಯಲ್ಲಿ ಎಂ.ಜಿ.ರಸ್ತೆಯಿಂದ ಕಬ್ಬನ್ ರಸ್ತೆವರೆಗೆ ಮತ್ತು ರಾಜಭವನ ರಸ್ತೆ, ಟಿ.ಚೌಡಯ್ಯ ರಸ್ತೆ ಮತ್ತು ರೇಸ್‍ಕೋರ್ಸ್ ರಸ್ತೆಗಳಲ್ಲಿ ಹಾಗೂ ಸೆಂಟ್ರಲ್ ಸ್ಟ್ರೀಟ್ ರಸ್ತೆಯಲ್ಲಿ ರಸ್ತೆಯ ಎರಡೂ ಕಡೆ ನಿಷೇಧಿಸಲಾಗಿದೆ.

Where do I park my bike near chinnaswamy stadium at the time of IPL

ಅಂದು ಸಂಜೆ 5 ಗಂಟೆಯಿಂದ ರಾತ್ರಿ 11.30ರವರೆಗೆ ಆಟೋ ರಿಕ್ಷಾ ವಾಹನಗಳ ಸಂಚಾರವನ್ನು ಕ್ವೀನ್ಸ್ ರಸ್ತೆ, ಟ್ರಾಫಿಕ್ ಹೆಡ್‍ಕ್ವಾರ್ಟರ್ ಜಂಕ್ಷನ್‍ನಿಂದ ಕ್ವೀನ್ಸ್ ವೃತ್ತದವರೆಗೆ, ಕಬ್ಬನ್ ರಸ್ತೆ, ಬಿ.ಆರ್.ವಿ.ಜಂಕ್ಷನ್‍ನಿಂದ ಸಿ.ಟಿ.ಓ. ವೃತ್ತದವರೆಗೆ ಮತ್ತು ಎ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ನಿಷೇಧಿಸಲಾಗಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ನಿಲುಗಡೆಗೆ ವ್ಯವಸ್ಥೆ: ಕೆ.ಎಸ್.ಸಿ.ಎ ಸದಸ್ಯರ ವಾಹನಗಳನ್ನು ಬೌರಿಂಗ್ ಇನ್ಸ್ಟಿಟ್ಯೂಟ್ ಮತ್ತು ಸೆಂಟ್ ಜೋಸೆಫ್ (ಯುರೋಪಿಯನ್) ಬಾಲಕರ ಶಾಲೆ ಮೈದಾನ (ಮ್ಯೂಸಿಯಂ ರಸ್ತೆ) ಇಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.

ಐಪಿಎಲ್ ಟೂರ್ನಿಯಲ್ಲಿ ಆಟವಾಡಿ, ಆಕರ್ಷಕ ಬಹುಮಾನ ಗೆಲ್ಲಿರಿ

ಪಂದ್ಯ ವೀಕ್ಷಣೆ ಮಾಡಲು ಬರುವ ಸಾರ್ವಜನಿಕರ ವಾಹನಗಳನ್ನು ಸೆಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನ ಮತ್ತು ಯುಬಿ ಸಿಟಿ ನಿಲುಗಡೆ ಸ್ಥಳದಲ್ಲಿ ಶಿವಾಜಿನಗರ ಬಸ್ ನಿಲ್ದಾಣದ 1ನೇ ಮಹಡಿಯಲ್ಲಿ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.

English summary
During IPL Parking arrangements are made for fans at different locations in close vicinity. Common parking space are St. Joseph's School, Shivajinagara bus stand, UB City etc,. Checkout their website for parking information.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X