ಫೋನ್ ಟ್ಯಾಪಿಂಗ್ ಹಗರಣದ ಮೂಲ ಪೆನ್‌ಡ್ರೈವ್ ಎಲ್ಲಿದೆ?
ಬೆಂಗಳೂರು, ಅಕ್ಟೋಬರ್ 10: ಫೋನ್ ಟ್ಯಾಪಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಅಲೋಕ್ ಕುಮಾರ್ ಅವರನ್ನು ಇನ್ನೂ ವಿಚಾರಣೆ ನಡೆಸಲಾಗುತ್ತಿದೆ. ಆದರೆ ಫೋನ್ ಟ್ಯಾಪಿಂಗ್ ಹಗರಣದ ಮೂಲ ಪೆನ್‌ಡ್ರೈವ್ ಎಲ್ಲಿದೆ ಎನ್ನುವುದು ಎಲ್ಲರ ಪ್ರಶ್ನೆಯಾಗಿದೆ.
ಪೆನ್‌ಡ್ರೈವ್ ನಲ್ಲಿ ಮೂರು ಆಡಿಯೋ ಕ್ಲಿಪ್‌ನಲ್ಲಿರುವ ನಗರ ಪೊಲೀಸ್ ಆಯುಕ್ತ ಆಯುಕ್ತ ಭಾಸ್ಕರ್ ರಾವ್ ಮತ್ತು ಬ್ರೋಕರ್ ಪರಾಜ್ ಅಹ್ಮದ್ ಎಂಬುವರ ನಡುವೆ ನಡೆದಿರುವ ಸಂಭಾಷಣೆಯನ್ನು ಡೌನ್‌ಲೋಡ್ ಮಾಡಲು ಅಲೋಕ್‌ಕುಮಾರ್ ಹೇಳಿದ್ದಾರೆಂಬ ಮಾತುಗಳು ಕೇಳಿಬಂದಿದ್ದವು.
ಪೊಲೀಸ್ ಮಾಜಿ ಆಯುಕ್ತ ಅಲೋಕ್ ಕುಮಾರ್ ಅವರಿಗೆ ಈ ಬಗ್ಗೆ ಪ್ರಶ್ನಿಸಿದರೆ ನನಗೆ ಯಾವ ಪೆನ್‌ಡ್ರೈವ್ ಬಗ್ಗೆಯೂ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಆದರೆ ಸಿಬಿಐ ಅಧಿಕಾರಿಗಳ ವಿಚಾರಣೆ ವೇಳೆ ಅಲೋಕ್ ಕುಮಾರ್ ತಮಗೆ ಯಾವ ಪೆನ್‌ಡ್ರೈವ್ ಬಗ್ಗೆಯೂ ತಿಳಿದಿಲ್ಲವೆಂದು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಲೋಕ್ ಕುಮಾರ್ ಅವರ ಆದೇಶದಂತೆ ಪೆನ್‌ಡ್ರೈವ್ ನಲ್ಲಿದ್ದ ಆಡಿಯೋ ಫೈಲ್‌ಗಳನ್ನು ಡೌನ್‌ಲೋಡ್ ಮಾಡುವಂತೆ ಹೇಳಿದ್ದರು ಅದರಂತೆ ಡೌನ್‌ಲೋಡ್ ಮಾಡಿದ್ದೆವು ಎಂದು ಸಿಸಿಬಿ ಇಬ್ಬರು ಪೊಲೀಸ್ ಇನ್‌ಸ್ಪೆಕ್ಟರ್ ಮಾಲ್ತೇಶ್ ಮತ್ತು ಮಿರ್ಜಾ ಅಲಿ ಅವರು ಸಿಬಿಐ ಅಧಿಕಾರಿಗಳ ಮುಂದೆ ಒಪ್ಪಿಕೊಂಡಿದ್ದರು.
ಈ ಫೈಲ್‌ಗಳನ್ನು ಕೆಲವು ದೃಶ್ಯ ಮಾಧ್ಯಮ ವ್ಯಕ್ತಿಗಳಿಗೆ ತಮ್ಮ ವಾಟ್ಸಪ್ ಸಂಖ್ಯೆಯಲ್ಲಿ ಇನ್ನೊಬ್ಬ ಐಪಿಎಸ್ ಅಧಿಕಾರಿ ಕಳುಹಿಸಿದ್ದಾರೆ ಎಂದು ವರದಿಯಾಗಿತ್ತು. ಹಾಗಿದ್ದರೂ ಅಲೋಕ್ ಕುಮಾರ್ ತಮ್ಮ ಇದ್ಯಾವುದನ್ನೂ ಒಪ್ಪಕೊಳ್ಳುತ್ತಿಲ್ಲ.
ಸಿಬಿಐ ಈ ಪ್ರಕರಣದಲ್ಲಿ ಸಲ್ಲಿಸಿದ ಡಿಜಿಟಲ್ ಪುರಾವೆಗಳನ್ನು ಪರಿಶೀಲಿಸುತ್ತಿರುವ ನವದೆಹಲಿಯ ಸೆಂಟ್ರಲ್ ಫೊರೆನ್ಸಿಕ್ ಲ್ಯಾಬೊರೆಟರಿ ಶೀಘ್ರದಲ್ಲೇ ತನ್ನ ವರದಿಯನ್ನು ಸಲ್ಲಿಸುವ ಸಾಧ್ಯತೆ ಇದೆ.
ಸಿಬಿಐ ಅಧಿಕಾರಿಗಳು ಬೆಂಗಳೂರಿನ ಕೆಲವು ಮಾಧ್ಯಮದವರನ್ನು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ವಿವಾದಾತ್ಮಕ ಆಡಿಯೋ ಟೇಪ್ ಬಗ್ಗೆ ವಿಚಾರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications