ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಫೋನ್ ಟ್ಯಾಪಿಂಗ್ ಹಗರಣದ ಮೂಲ ಪೆನ್‌ಡ್ರೈವ್ ಎಲ್ಲಿದೆ?

|
Google Oneindia Kannada News

ಬೆಂಗಳೂರು, ಅಕ್ಟೋಬರ್ 10: ಫೋನ್ ಟ್ಯಾಪಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಅಲೋಕ್ ಕುಮಾರ್ ಅವರನ್ನು ಇನ್ನೂ ವಿಚಾರಣೆ ನಡೆಸಲಾಗುತ್ತಿದೆ. ಆದರೆ ಫೋನ್ ಟ್ಯಾಪಿಂಗ್ ಹಗರಣದ ಮೂಲ ಪೆನ್‌ಡ್ರೈವ್ ಎಲ್ಲಿದೆ ಎನ್ನುವುದು ಎಲ್ಲರ ಪ್ರಶ್ನೆಯಾಗಿದೆ.

ಪೆನ್‌ಡ್ರೈವ್ ನಲ್ಲಿ ಮೂರು ಆಡಿಯೋ ಕ್ಲಿಪ್‌ನಲ್ಲಿರುವ ನಗರ ಪೊಲೀಸ್ ಆಯುಕ್ತ ಆಯುಕ್ತ ಭಾಸ್ಕರ್ ರಾವ್ ಮತ್ತು ಬ್ರೋಕರ್ ಪರಾಜ್ ಅಹ್ಮದ್ ಎಂಬುವರ ನಡುವೆ ನಡೆದಿರುವ ಸಂಭಾಷಣೆಯನ್ನು ಡೌನ್‌ಲೋಡ್ ಮಾಡಲು ಅಲೋಕ್‌ಕುಮಾರ್ ಹೇಳಿದ್ದಾರೆಂಬ ಮಾತುಗಳು ಕೇಳಿಬಂದಿದ್ದವು.

ಫೋನ್ ಟ್ಯಾಪಿಂಗ್: ಎಡಿಜಿಪಿ ಅಲೋಕ್ ಕುಮಾರ್ ವರ್ಗಾವಣೆಫೋನ್ ಟ್ಯಾಪಿಂಗ್: ಎಡಿಜಿಪಿ ಅಲೋಕ್ ಕುಮಾರ್ ವರ್ಗಾವಣೆ

ಪೊಲೀಸ್ ಮಾಜಿ ಆಯುಕ್ತ ಅಲೋಕ್ ಕುಮಾರ್ ಅವರಿಗೆ ಈ ಬಗ್ಗೆ ಪ್ರಶ್ನಿಸಿದರೆ ನನಗೆ ಯಾವ ಪೆನ್‌ಡ್ರೈವ್ ಬಗ್ಗೆಯೂ ಗೊತ್ತಿಲ್ಲ ಎಂದು ಹೇಳಿದ್ದಾರೆ.

Where Is The Phone Tapping Scandal Pendrive?

ಆದರೆ ಸಿಬಿಐ ಅಧಿಕಾರಿಗಳ ವಿಚಾರಣೆ ವೇಳೆ ಅಲೋಕ್ ಕುಮಾರ್ ತಮಗೆ ಯಾವ ಪೆನ್‌ಡ್ರೈವ್ ಬಗ್ಗೆಯೂ ತಿಳಿದಿಲ್ಲವೆಂದು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಲೋಕ್ ಕುಮಾರ್ ಅವರ ಆದೇಶದಂತೆ ಪೆನ್‌ಡ್ರೈವ್ ನಲ್ಲಿದ್ದ ಆಡಿಯೋ ಫೈಲ್‌ಗಳನ್ನು ಡೌನ್‌ಲೋಡ್ ಮಾಡುವಂತೆ ಹೇಳಿದ್ದರು ಅದರಂತೆ ಡೌನ್‌ಲೋಡ್ ಮಾಡಿದ್ದೆವು ಎಂದು ಸಿಸಿಬಿ ಇಬ್ಬರು ಪೊಲೀಸ್ ಇನ್‌ಸ್ಪೆಕ್ಟರ್ ಮಾಲ್ತೇಶ್ ಮತ್ತು ಮಿರ್ಜಾ ಅಲಿ ಅವರು ಸಿಬಿಐ ಅಧಿಕಾರಿಗಳ ಮುಂದೆ ಒಪ್ಪಿಕೊಂಡಿದ್ದರು.

ಈ ಫೈಲ್‌ಗಳನ್ನು ಕೆಲವು ದೃಶ್ಯ ಮಾಧ್ಯಮ ವ್ಯಕ್ತಿಗಳಿಗೆ ತಮ್ಮ ವಾಟ್ಸಪ್ ಸಂಖ್ಯೆಯಲ್ಲಿ ಇನ್ನೊಬ್ಬ ಐಪಿಎಸ್ ಅಧಿಕಾರಿ ಕಳುಹಿಸಿದ್ದಾರೆ ಎಂದು ವರದಿಯಾಗಿತ್ತು. ಹಾಗಿದ್ದರೂ ಅಲೋಕ್ ಕುಮಾರ್ ತಮ್ಮ ಇದ್ಯಾವುದನ್ನೂ ಒಪ್ಪಕೊಳ್ಳುತ್ತಿಲ್ಲ.

ಸಿಬಿಐ ಈ ಪ್ರಕರಣದಲ್ಲಿ ಸಲ್ಲಿಸಿದ ಡಿಜಿಟಲ್ ಪುರಾವೆಗಳನ್ನು ಪರಿಶೀಲಿಸುತ್ತಿರುವ ನವದೆಹಲಿಯ ಸೆಂಟ್ರಲ್ ಫೊರೆನ್ಸಿಕ್ ಲ್ಯಾಬೊರೆಟರಿ ಶೀಘ್ರದಲ್ಲೇ ತನ್ನ ವರದಿಯನ್ನು ಸಲ್ಲಿಸುವ ಸಾಧ್ಯತೆ ಇದೆ.

ಸಿಬಿಐ ಅಧಿಕಾರಿಗಳು ಬೆಂಗಳೂರಿನ ಕೆಲವು ಮಾಧ್ಯಮದವರನ್ನು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ವಿವಾದಾತ್ಮಕ ಆಡಿಯೋ ಟೇಪ್ ಬಗ್ಗೆ ವಿಚಾರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

English summary
Where is the pen drive which exposed the illegal phone tapping scandal? Who asked the CCB cops to download the audio files?
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X