ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಪರಿಚಿತ ಬರುವ ಮುನ್ನ ಮೆಟ್ರೋ ನಿಲ್ದಾಣಕ್ಕೆ ಬಂದಿದ್ದ ಇನ್ನೊಬ್ಬ ವ್ಯಕ್ತಿ ಯಾರು?

|
Google Oneindia Kannada News

ಬೆಂಗಳೂರು, ಮೇ 9: ಮೆಜೆಸ್ಟಿಕ್ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಗಡ್ಡಧಾರಿಯೊಬ್ಬರು ಅನುಮಾನಾಸ್ಪದವಾಗಿ ಓಡಾಡಿದ್ದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಆತ ಉಗ್ರನಿರಬಹುದೇ ಎಂದು ಪೊಲೀಸರು ಶಂಕಿಸಿದ್ದರು. ಆದರೆ ಆತ ಯಾರು ಎನ್ನುವುದು ಈಗ ಬಹಿರಂಗಗೊಂಡಿದೆ.

ಸೋಮವಾರ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣಕ್ಕೆ ಬಂದ ಆತ ಮೆಟ್ರೋ ನಿಲ್ದಾಣ ಪ್ರವೇಶಿಸುವಾಗ ಮೆಟಲ್ ಡಿಟೆಕ್ಟರ್ ವಿಚಿತ್ರವಾಗಿ ಶಬ್ದ ಮಾಡಿತ್ತು. ಬಳಿಕ ಆತನನ್ನು ತಪಾಸಣೆ ಮಾಡಿದಾಗ ಅಂತಹ ಯಾವುದೇ ಅನುಮಾನಾಸ್ಪದ ವಸ್ತುಗಳು ಗೋಚರಿಸಿರಲಿಲ್ಲ ಆದರೂ ಆತನ ಮೆಟ್ರೋ ನಿಲ್ದಾಣದಿಂದ ಹೊರ ನಡೆದಿದ್ದ ಇದು ಎಲ್ಲರಲ್ಲಿ ಅನುಮಾನ ಹುಟ್ಟಿಸಿತ್ತು.ಈಗ ಶಂಕಿತನ ಬಗ್ಗೆ ಸುಳಿವು ಸಿಕ್ಕಿಲ್ಲ, ಆದರೆ ಶಂಕಿತ ಬರುವ ಕೆಲವೇ ನಿಮಿಷಗಳ ಮುನ್ನ ಬಂದಿದ್ದ ಮತ್ತೊಬ್ಬ ಗಡ್ಡಧಾರಿ ಡಿಸಿಪಿ ಕಚೇರಿಗೆ ಬಂದು ಹೇಳಿಕೆ ನೀಡಿದ್ದಾನೆ.

ಡಿಸಿಪಿಗೆ ಕಚೇರಿಗೇ ಬಂದ ಅನುಮಾನಾಸ್ಪದ ವ್ಯಕ್ತಿ

ಡಿಸಿಪಿಗೆ ಕಚೇರಿಗೇ ಬಂದ ಅನುಮಾನಾಸ್ಪದ ವ್ಯಕ್ತಿ

ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಅನುಮಾನಸ್ಪದವಾಗಿ ಬಿಳಿ ಬಣ್ಣದ ಬಟ್ಟೆ ಧರಿಸಿ ಓಡಾಡಿದ್ದ ವ್ಯಕ್ತಿ ಪತ್ತೆಯಾಗಿದ್ದಾರೆ. ಸ್ವತಃ ಅವರೇ ಡಿಸಿಪಿ ಕಚೇರಿಗೆ ಭೇಟಿ ನೀಡಿ ನಿಜ ಘಟನೆಯನ್ನು ವಿವರಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ವಿಡಿಯೋದಲ್ಲಿದ್ದ ವ್ಯಕ್ತಿ ಯಾರು?

ವಿಡಿಯೋದಲ್ಲಿದ್ದ ವ್ಯಕ್ತಿ ಯಾರು?

ವೈರಲ್ ಆದ ವಿಡಿಯೋದಲ್ಲಿರುವ ವ್ಯಕ್ತಿ ರಿಯಾಜ್ ಅಹ್ಮದ್ (70) ಆಗಿದ್ದು ಮೆಜೆಸ್ಟಿಕ್‍ನಲ್ಲಿ ವಾಚ್ ವ್ಯಾಪಾರಿ ಹಾಗೂ ರಿಪೇರಿ ಮಾಡುವ ವ್ಯಕ್ತಿಯಾಗಿದ್ದಾರೆ. ಅವರು ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ರವಿ ಡಿ ಚೆನ್ನಣ್ಣನವರ್ ಅವರ ಕಚೇರಿಗೆ ಹಾಜರಾಗಿ ತನ್ನ ವಿವರವನ್ನು ತಿಳಿಸಿದ್ದಾರೆ.

ನಮ್ಮ ಮೆಟ್ರೋ ನಿಲ್ದಾಣದಲ್ಲಿ ಆಗಿದ್ದೇನು? : ಪೊಲೀಸರ ಸ್ಪಷ್ಟನೆನಮ್ಮ ಮೆಟ್ರೋ ನಿಲ್ದಾಣದಲ್ಲಿ ಆಗಿದ್ದೇನು? : ಪೊಲೀಸರ ಸ್ಪಷ್ಟನೆ

ಆತ ಮೆಜೆಸ್ಟಿಕ್‌ನಲ್ಲಿ ವಾಚ್ ವ್ಯಾಪಾರಿ

ಆತ ಮೆಜೆಸ್ಟಿಕ್‌ನಲ್ಲಿ ವಾಚ್ ವ್ಯಾಪಾರಿ

ನಾನು ನಾಯಂಡಹಳ್ಳಿ ನಿವಾಸಿಯಾಗಿದ್ದು, ಮೆಜೆಸ್ಟಿಕ್‍ನಲ್ಲಿ ವಾಚ್ ರಿಪೇರಿ ಕೆಲಸ ಮಾಡುತ್ತಾ ಜೀವನ ನಡೆಸುತ್ತಿದ್ದೇನೆ. ನಿತ್ಯವೂ ಮೆಟ್ರೋದಲ್ಲಿ ಓಡಾಡುತ್ತೇನೆ ಎಂದು ತಿಳಿಸಿದ್ದಾರೆ.

ಮೆಟ್ರೋ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಓಡಾಟ: ಅಲ್ಲಿ ನಡೆದದ್ದೇನು? ಮೆಟ್ರೋ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಓಡಾಟ: ಅಲ್ಲಿ ನಡೆದದ್ದೇನು?

ಯಾವುದೇ ಉಗ್ರ ಸಂಘಟನೆಗೂ ಸೇರಿಲ್ಲ

ಯಾವುದೇ ಉಗ್ರ ಸಂಘಟನೆಗೂ ಸೇರಿಲ್ಲ

ನಾನು ಯಾವುದೇ ಉಗ್ರ ಸಂಘಟನೆಗೆ ಸೇರಿಲ್ಲ. ಶಂಕಿತ ವ್ಯಕ್ತಿ ಎಂದು ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದರಿಂದ ಜನರು, ನನ್ನ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ನನಗೆ ರಕ್ಷಣೆ ಕೊಡಿ. ಗಡ್ಡದಾರಿಗಳೆಲ್ಲಾ ಉಗ್ರರಾ? ಗಡ್ಡ ಬಿಡುವುದೇ ತಪ್ಪೇ ಎಂದು ಪ್ರಶ್ನೆ ಮಾಡಿದ್ದಾರೆ. ಎನ್ನುವ ಮಾಹಿತಿ ಲಭ್ಯವಾಗಿದೆ.

ಇಲ್ಲಿಯವರೆಗೂ ಕಪ್ಪು ಬಣ್ಣದ ಜುಬ್ಬಾ ಧರಿಸಿರುವ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಡಿಜಿ ಐಜಿಪಿ ನೀಲಮಣಿ ರಾಜು ಅವರು, ಅದಷ್ಟು ಬೇಗ ಈ ಶಂಕಿತ ವ್ಯಕ್ತಿಯನ್ನು ಪತ್ತೆ ಹಚ್ಚುವಂತೆ ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಲಾಗಿದೆ.

ನಮ್ಮ ಮೆಟ್ರೋ ನಿಲ್ದಾಣದಲ್ಲಿ ಪಿಸ್ತೂಲ್ ಹಿಡಿದ ವ್ಯಕ್ತಿ ಪತ್ತೆ?ನಮ್ಮ ಮೆಟ್ರೋ ನಿಲ್ದಾಣದಲ್ಲಿ ಪಿಸ್ತೂಲ್ ಹಿಡಿದ ವ್ಯಕ್ತಿ ಪತ್ತೆ?

English summary
A suspicious person triggers many confusions around silicon city Who seen at Majestic metro station.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X