ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿದಂಬರ ರಹಸ್ಯ ಬೇಧಿಸುವರ್ಯಾರು? ಚಿದಂಬರಂ ಎಲ್ಲಿದ್ದೀರಪ್ಪಾ?: ಮಾಳವಿಕಾ ಪ್ರಶ್ನೆ

|
Google Oneindia Kannada News

Recommended Video

ರಾಜ್ಯದಲ್ಲಿ ಇರೋದು ಸಮ್ಮಿಶ್ರ ಸರ್ಕಾರ ಅಲ್ಲ..! ಚೌ ಚೌ ಬಾತ್ ಸರ್ಕಾರ..! | Oneindia Kannada

ಬೆಂಗಳೂರು, ಆಗಸ್ಟ್ 21: ಐಎನ್‍ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರು ಬಂಧನ ಭೀತಿಯಿಂದ ಕಾಣೆಯಾಗಿದ್ದಾರೆ. ಈ ಕುರಿತು ಬಿಜೆಪಿ ವಕ್ತಾರೆ ಮಾಳವಿಕಾ ಅವಿನಾಶ್ ಟ್ವೀಟ್ ಮಾಡಿದ್ದಾರೆ.

ಚಿದಂಬರ ರಹಸ್ಯವನ್ನು ಬೇಧಿಸುವವರಾರು ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ, ನಿಖಿಲ್ ಎಲ್ಲಿದ್ದೀಯಪ್ಪಾ ಎಂದು ಕೇಳಿದಂತೆ ಹ್ಯಾಶ್ ಟ್ಯಾಗ್ ಹಾಕಿ 'ಚಿದಂಬರಂ ಎಲ್ಲಿದ್ದೀರಪ್ಪ' ಎಂದು ಪ್ರಶ್ನಿಸಿದ್ದಾರೆ.

Live Updates ಅರ್ಜಿ ವಿಚಾರಣೆ ಸಾಧ್ಯವಿಲ್ಲ ಎಂದ ಸುಪ್ರೀಂ: ಚಿದಂಬರಂಗೆ ಬಂಧನ ಭೀತಿLive Updates ಅರ್ಜಿ ವಿಚಾರಣೆ ಸಾಧ್ಯವಿಲ್ಲ ಎಂದ ಸುಪ್ರೀಂ: ಚಿದಂಬರಂಗೆ ಬಂಧನ ಭೀತಿ

ಈ ಚಿದಂಬರಂ ಎಲ್ಲಿದ್ದಿಯಪ್ಪಾ ಎನ್ನುವ ರೀತಿಯಲ್ಲೇ ನಿಖಿಲ್ ಎಲ್ಲಿದ್ದಿಯಪ್ಪಾ ಎನ್ನುವ ಘೋಷಣೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಷ್ ವಿರುದ್ಧ ಸ್ಪರ್ಧಿಸಿದ್ದರು.

Who Will Crack The Chidambara Rahasyam

ಆಗ ಕುಮಾರಸ್ವಾಮಿ ಅಥವಾ ನಿಖಿಲ್ ಅವರ ಪ್ರತಿ ವಿಷಯಕ್ಕೂ ನಿಖಿಲ್ ಎಲ್ಲಿದ್ದೀಯಪ್ಪಾ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡುತ್ತಿದ್ದರು.

ಮಂಗಳವಾರದಿಂದಲೂ ಸಹ ಚಿದಂಬರಂ ಅವರು ತಮ್ಮ ಮನೆಗೆ ಆಗಮಿಸಿಲ್ಲ. ಹೀಗಾಗಿ ಇಡಿ ಹಾಗೂ ಸಿಬಿಐ ಅದಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಚಿದಂಬರಂ ಕಾಣೆಯಾಗಿದ್ದನ್ನು ಸಹ ಇದೀಗ ಅದೇ ಧಾಟಿಯಲ್ಲಿ ಟ್ರೋಲ್ ಮಾಡಲಾಗುತ್ತಿದೆ.

ಐಎನ್ಎಕ್ಸ್ ಮೀಡಿಯಾ ಕೇಸ್: ಪಿ ಚಿದಂಬರಂ ಭ್ರಷ್ಟಾಚಾರದ ಹೆಜ್ಜೆಗಳುಐಎನ್ಎಕ್ಸ್ ಮೀಡಿಯಾ ಕೇಸ್: ಪಿ ಚಿದಂಬರಂ ಭ್ರಷ್ಟಾಚಾರದ ಹೆಜ್ಜೆಗಳು

ನೋಟಿಸಿನಲ್ಲಿ 2 ಗಂಟೆಯ ಒಳಗಡೆ ವಿಚಾರಣೆಗೆ ಹಾಜರಾಗಬೇಕೆಂದು ತಿಳಿಸಿದ್ದನ್ನು ಪ್ರಶ್ನೆ ಮಾಡಿರುವ ಚಿದಂಬರಂ ಪರ ವಕೀಲ ಅರ್ಶದೀಪ್ ಸಿಂಗ್ ಖುರಾನ, ನನ್ನ ಕಕ್ಷಿದಾರರು 2 ಗಂಟೆಯ ಒಳಗಡೆ ವಿಚಾರಣೆ ಹಾಜರಾಗಬೇಕೆಂದು ನೋಟಿಸಿನಲ್ಲಿ ಉಲ್ಲೇಖಿಸಿದ್ದೀರಿ. 2 ಗಂಟೆಯ ಒಳಗಡೆ ವಿಚಾರಣೆಗೆ ಹಾಜರಾಗಬೇಕೆಂದು ಕಾನೂನಿನ ಯಾವ ನಿಬಂಧನೆ ಅಡಿ ಇದೆ ಎಂದು ಪ್ರಶ್ನೆ ಮಾಡಿದ್ದರು.

ದೆಹಲಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಸಹ ಬಂಧನದಿಂದ ರಕ್ಷಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ತಿಳಿಸಿದೆ.

ಸಿಬಿಐ ಅಧಿಕಾರಿಗಳು ಮಂಗಳವಾರ ಮಧ್ಯ ರಾತ್ರಿಯೇ ನೋಟಿಸ್ ನೀಡಿದ್ದು, ಇದೀಗ ಜಾರಿ ನಿರ್ದೇಶನಾಲಯ ಲುಕೌಟ್ ನೋಟಿಸ್ ಜಾರಿ ಮಾಡಿದೆ. ಮಾತ್ರವಲ್ಲದೆ ಸಿಬಿಐ ಅಧಿಕಾರಿಗಳು ಸಹ ಚಿದಂಬರಂ ಅವರ ಮನೆಗೆ ಮೂರು ಬಾರಿ ಭೇಟಿ ನೀಡಿದ್ದಾರೆ. ಆದರೆ ಚಿದಂಬರಂ ಅವರು ಮನೆಯಲ್ಲಿರಲಿಲ್ಲ, ಎಲ್ಲಿ ಹೋಗಿದ್ದಾರೆ ಎಂಬುದು ತಿಳಿದಿಲ್ಲ.

English summary
Malavika Avinash Tweeted that Who Will Crack The Chidambara Rahasyam, Chorus in the background Chidambaram Yelliddirappa?.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X