ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಚಿತ್ರಣ : ಬಿಜೆಪಿಗೆ ಹ್ಯಾಟ್ರಿಕ್ ಗೆಲುವಿನ ಉತ್ಸಾಹ!
ಬೆಂಗಳೂರು, ಏಪ್ರಿಲ್ 03 : ದೇಶದ ಬೇರೆ-ಬೇರೆ ರಾಜ್ಯಗಳಿಂದ ಬಂದಿರುವ ಜನರು ನೆಲೆಸಿರುವ ಲೋಕಸಭಾ ಕ್ಷೇತ್ರ ಬೆಂಗಳೂರು ಸೆಂಟ್ರಲ್. ಬಿಜೆಪಿ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಗೆಲುವಿನ ಉತ್ಸಾಹದಲ್ಲಿದೆ. ನಟ ಪ್ರಕಾಶ್ ರಾಜ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ಕ್ಷೆತ್ರದ ಚುನಾವಣೆ ಕುತೂಹಲಕ್ಕೆ ಕಾರಣವಾಗಿದೆ.
2008ರಲ್ಲಿ ಕ್ಷೇತ್ರ ಪುನರ್ ವಿಂಗಡನೆಯಾದ ಬಳಿಕ ರಚನೆಯಾದ ಕ್ಷೇತ್ರ ಬೆಂಗಳೂರು ಸೆಂಟ್ರಲ್. 2009 ಮತ್ತು 2014ರ ಚುನಾವಣೆಯಲ್ಲಿ ಬಿಜೆಪಿಯ ಪಿ.ಸಿ.ಮೋಹನ್ ಅವರು ಗೆಲುವು ಸಾಧಿಸಿದ್ದಾರೆ. 2019ರ ಚುನಾವಣೆಗೂ ಅವರೇ ಅಭ್ಯರ್ಥಿ.
ವಿವಿಧ ರಾಜ್ಯಗಳ ಜನರು ಬಂದು ನೆಲೆಸಿರುವ ಕ್ಷೇತ್ರವಿದು. ಆದ್ದರಿಂದ, ಇಲ್ಲಿ ಜಾತಿ ರಾಜಕಾರಣ ಮಾಡುವುದು ಕಷ್ಟ. ಈ ಕ್ಷೇತ್ರದಲ್ಲಿ ಅಲ್ಪ ಸಂಖ್ಯಾತ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕ್ರಿಶ್ಚಿಯನ್ನರು, ಮಾರ್ವಾಡಿಗಳು, ಜೈನರು ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.
ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಪರಿಚಯ ಓದಿ
ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿ ರಿಜ್ವಾನ್ ಅರ್ಷದ್ ಅವರು ಕಣದಲ್ಲಿದ್ದಾರೆ. ನಟ, ನಿರ್ಮಾಪಕ ಪ್ರಕಾಶ್ ರಾಜ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಏಪ್ರಿಲ್ 18ರಂದು ಮತದಾನ ನಡೆಯಲಿದ್ದು, ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ.

ಬೆಂಗಳೂರು ಸೆಂಟ್ರಲ್ ಕ್ಷೇತ್ರ
ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ 21,23,572 ಮತದಾರರು ಇದ್ದಾರೆ. ಇವರಲ್ಲಿ 5 ಲಕ್ಷದಷ್ಟು ಮತದಾರರು ಮಹಾದೇವಪುರ ವಿಧಾನಸಭಾ ಕ್ಷೇತ್ರದಲ್ಲಿದ್ದಾರೆ. ಕ್ಷೇತ್ರದಲ್ಲಿ ಯಾವುದೇ ಅಭ್ಯರ್ಥಿ ಗೆಲುವು ಸಾಧಿಸಲು ಈ ಕ್ಷೇತ್ರ ನಿರ್ಣಾಯಕ ಪಾತ್ರ ವಹಿಸಲಿದೆ. ಕ್ಷೇತ್ರ ಬಿಜೆಪಿ ವಶದಲ್ಲಿದ್ದು ಅರವಿಂದ ಲಿಂಬಾವಳಿ ಅವರು ಶಾಸಕರು.

ಕ್ಷೇತ್ರಗಳ ಬಲಾಬಲ
ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 8 ವಿಧಾನಸಭಾ ಕ್ಷೇತ್ರಗಳಿವೆ. ಸರ್ವಜ್ಞ ನಗರ, ಶಿವಾಜಿನಗರ, ಶಾಂತಿನಗರ, ಗಾಂಧಿನಗರ, ಚಾಮರಾಜಪೇಟೆ ಕ್ಷೇತ್ರಗಳು ಕಾಂಗ್ರೆಸ್ ಹಿಡಿತದಲ್ಲಿವೆ. ಸಿ.ವಿ.ರಾಮನ್ ನಗರ, ರಾಜಾಜಿನಗರ, ಮಹಾದೇವಪುರ ಕ್ಷೇತ್ರಗಳು ಬಿಜೆಪಿ ಹಿಡಿತದಲ್ಲಿವೆ.

ಜೆಡಿಎಸ್ ಪಾತ್ರವೂ ಮುಖ್ಯ
2014ರ ಚುನಾವಣೆಯಲ್ಲಿ ಜೆಡಿಎಸ್‌ನಿಂದ ನಂದಿನಿ ಆಳ್ವಾ ಅವರು ಅಭ್ಯರ್ಥಿಯಾಗಿದ್ದರು. 20,387 ಮತಗಳನ್ನು ಪಡೆದಿದ್ದರು. 2009ರ ಚುನಾವಣೆಯಲ್ಲಿ ಬಿ.ಝಡ್.ಜಮೀರ್ ಅಹಮದ್ ಖಾನ್ ಅವರು 1,62,552 ಮತಗಳನ್ನು ಪಡೆದಿದ್ದರು. ಈ ಬಾರಿ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಪಕ್ಷ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದೆ.

ರಿಜ್ವಾನ್ ಅರ್ಷದ್ ಮತ್ತೆ ಎದುರಾಳಿ
ಕಾಂಗ್ರೆಸ್‌ನ ರಿಜ್ವಾನ್ ಅರ್ಷದ್ ಮತ್ತು ಬಿಜೆಪಿಯ ಪಿ.ಸಿ.ಮೋಹನ್ ಅವರು 2014ರ ಚುನಾವಣೆಯಲ್ಲಿಯೂ ಎದುರಾಳಿಗಳಾಗಿದ್ದರು. ಪಿ.ಸಿ.ಮೋಹನ್ 5,57,130 ಮತಗಳನ್ನು ಪಡೆದಿದ್ದರು. ರಿಜ್ವಾನ್ ಅರ್ಷದ್ 4,19,630 ಮತಗಳನ್ನು ಪಡೆದಿದ್ದರು.

ಪಕ್ಷೇತರ ಅಭ್ಯರ್ಥಿ
ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. 'ಥಿಂಕ್ ಮಾಡಿ, ವೋಟ್ ಮಾಡಿ' ಎಂಬ ಘೋಷಣೆಯೊಂದಿಗೆ ಅವರು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಆಮ್ಮ ಆದ್ಮಿ ಪಕ್ಷ ಪ್ರಕಾಶ್ ರಾಜ್ ಅವರಿಗೆ ಬೆಂಬಲ ಘೋಷಣೆ ಮಾಡಿದೆ.
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ












Click it and Unblock the Notifications