Bengaluru Second Airport: ಹಳ್ಳ ಹಿಡಿದ ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನೆ!
Bengaluru Second Airport: ಬೆಂಗಳೂರು ಹಾಗೂ ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿಗೆ ಸಹಕಾರಿಯಾಗಬೇಕಾಗಿದ್ದ ಬೆಂಗಳೂರು ಎರಡನೇ ವಿಮಾನ ನಿಲ್ದಾಣ ಯೋಜನೆಯು ಬಹುತೇಕ ಹಳ್ಳ ಹಿಡಿಯುತ್ತಿದೆ ಎನ್ನುವ ಆತಂಕ ಶುರುವಾಗಿದೆ. ಇದಕ್ಕೆ ಮುಖ್ಯ ಕಾರಣ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ಯೋಜನೆ ಜಾರಿ ವಿಚಾರದಲ್ಲಿ ಯಾವುದೇ ಮಹತ್ವದ ಬದಲಾವಣೆಗಳು ಆಗದೆ ಇರುವುದು. ಬೆಂಗಳೂರು ಎರಡನೇ ವಿಮಾನ ನಿಲ್ದಾಣ ಯೋಜನೆಯನ್ನು ಜಾರಿ ಮಾಡುವುದಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ಯಾವುದೇ ಆಸಕ್ತಿ ತೋರಿದಂತೆ ಇಲ್ಲ.
ಇದೇ ಸಂದರ್ಭದಲ್ಲಿ ತಮಿಳುನಾಡು ಸರ್ಕಾರವು ಬೆಂಗಳೂರಿನಿಂದ ಕೆಲವೇ ಕಿ. ಮೀ ದೂರದಲ್ಲಿರುವ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಬೇಕಾದ ಎಲ್ಲಾ ಮಾದರಿಯ ಸಿದ್ಧತೆಗಳನ್ನೂ ಮಾಡಿಕೊಂಡಿದೆ. ಅಲ್ಲದೇ ಹೊಸೂರಿನಲ್ಲಿ ಅಂತಾರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆಯನ್ನೂ ಪ್ರಾರಂಭಿಸಿದೆ. ಆದರೆ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನೆ ಪ್ರಾರಂಭಕ್ಕೂ ಮುಂಚೆಯೇ ಹಳ್ಳ ಹಿಡಿದಂತೆ ಆಗಿದೆ.

ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಪ್ರಾರಂಭವಾದರೆ ಬೆಂಗಳೂರು ದಕ್ಷಿಣ ಜಿಲ್ಲೆ, ತುಮಕೂರು, ಬೆಂಗಳೂರು ನಗರ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಭೂಮಿಗೆ ಬಂಗಾರದ ಬರಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಅಲ್ಲದೇ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಈಗಾಗಲೇ ಒಂದು ಬಾರಿ ಕೇಂದ್ರ ಸರ್ಕಾರದ ಪ್ರತಿನಿಧಿಗಳನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದರೂ, ಕೇಂದ್ರ ಸರ್ಕಾರದಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಕ್ಕಿಲ್ಲ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಎಂ.ಬಿ ಪಾಟೀಲ್ ಅವರು ಈಗಾಗಲೇ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದರೂ ಈ ವಿಚಾರವಾಗಿ ಕೇಂದ್ರದಿಂದ ಯಾವುದೇ ಅಪ್ಡೇಟ್ಸ್ ಬಂದಿಲ್ಲ ಎಂದು ಹೇಳಲಾಗುತ್ತಿದೆ.
ಇನ್ನು ಬೆಂಗಳೂರಿನ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಅಧಿಕಾರಿಗಳು ಕರ್ನಾಟಕದ ಮೂರು ಪ್ರಮುಖ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವರದಿಯನ್ನು ಸಚಿವಾಲಯಕ್ಕೂ ಸಲ್ಲಿಕೆ ಮಾಡಿದ್ದಾರೆ. ಆದರೆ ಇದಾದ ಮೇಲೆ ಏನಾಗಿದೆ ಎನ್ನುವ ಬಗ್ಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರವು ಯಾವುದೇ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿಲ್ಲ.
ಗೊಂದಲದ ವಾತವರಣ: ಇನ್ನು ಬೆಂಗಳೂರಿನ ಎರಡನೇ ಅಂತಾರರಾಷ್ಟ್ರೀಯ ವಿಮಾನ ನಿಲ್ದಾಣದ ವಿಚಾರದಲ್ಲಿ ಗೊಂದಲದ ವಾತಾವರಣ ಮುಂದುವರಿದಿದೆ. ಸಾಮಾನ್ಯವಾಗಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ಮಾಡಿದ ನಂತರ ಪರಿಶೀಲನೆ ಮಾಡಿದ ನಿರ್ದಿಷ್ಟ ಸ್ಥಳ ಸೂಕ್ತವಾಗಿಲ್ಲದೆ ಇದ್ದರೆ, ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬೇರೆ ಜಾಗಗಳನ್ನು ಗುರುತಿಸುವಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಅಧಿಕಾರಿಗಳು ಆಯಾ ರಾಜ್ಯಕ್ಕೆ ಪತ್ರ ವ್ಯವಹಾರ ನಡೆಸುವುದು ಇದೆ. ಆದರೆ, ಕರ್ನಾಟಕದ ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ವಿಚಾರದಲ್ಲಿ ಆ ರೀತಿಯ ಯಾವುದೇ ಬೆಳವಣಿಗೆ ನಡೆದಿಲ್ಲ.












Click it and Unblock the Notifications