ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Platform Ticket Price : ಬೆಂಗಳೂರಿನ ಈ ರೈಲ್ವೆ ನಿಲ್ದಾಣದ ಒಳಗೆ ಹೋದ್ರೆ 20 ರೂಪಾಯಿ ಟಿಕೆಟ್!

|
Google Oneindia Kannada News

ಬೆಂಗಳೂರು, ಅಕ್ಟೋಬರ್ 1: ಸಿಲಿಕಾನ್ ಸಿಟಿ ಮಂದಿ ಇನ್ಮುಂದೆ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್ ಗೆ ಹೋಗಬೇಕಾದರೂ 20 ರೂಪಾಯಿ ಟಿಕೆಟ್ ಖರೀದಿ ಮಾಡಬೇಕಾಗುತ್ತದೆ.
ಅಕ್ಟೋಬರ್ 31ರವರೆಗೂ ಬೆಂಗಳೂರಿನ ಪ್ರಮುಖ ರೈಲ್ವೆ ನಿಲ್ದಾಣದಲ್ಲಿನ ಪ್ಲಾಟ್‌ಫಾರ್ಮ್ ಟಿಕೆಟ್ ದರವನ್ನು ಡಬಲ್ ಮಾಡಲಾಗಿದೆ. ನೈಋತ್ಯ ರೈಲ್ವೆ ಬೆಂಗಳೂರಿನ ಪ್ರಮುಖ ರೈಲು ನಿಲ್ದಾಣಗಳಲ್ಲಿ ಅಕ್ಟೋಬರ್ 31 ರವರೆಗೆ ಪ್ಲಾಟ್‌ಫಾರ್ಮ್ ಟಿಕೆಟ್ ದರವನ್ನು 10 ರಿಂದ 20 ರೂ.ಗೆ ದ್ವಿಗುಣಗೊಳಿಸುವುದಾಗಿ ಘೋಷಿಸಿದೆ.

ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಫೇಸ್ ರೆಕಗ್ನಿಷನ್ ಸಿಸ್ಟಂಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಫೇಸ್ ರೆಕಗ್ನಿಷನ್ ಸಿಸ್ಟಂ

ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಜನಸಂದಣಿಯನ್ನು ನಿಯಂತ್ರಿಸುವ ಉದ್ದೇಶದಿಂದ ಪ್ಲಾಟ್‌ಫಾರ್ಮ್ ಟಿಕೆಟ್ ದರವನ್ನು ಏರಿಕೆ ಮಾಡಲಾಗಿದೆೆ. ಒಂದು ತಿಂಗಳ ಮಟ್ಟಿಗೆ ಈ ಟಿಕೆಟ್ ದರವನ್ನು ದ್ವಿಗುಣಗೊಳಿಸುವುದಕ್ಕೂ ಕಾರಣವಿದೆ.

Why indian Railway doubling of platform ticket rates railway stations in Bengaluru till Oct.31st

ಬೆಂಗಳೂರಿನ ಯಾವ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್ ದರ ಏರಿಕೆ?:
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್) ಬೆಂಗಳೂರು ನಗರ, ಕಂಟೋನ್ಮೆಂಟ್, ಯಶವಂತಪುರ, ಕೃಷ್ಣರಾಜಪುರಂ ನಿಲ್ದಾಣಗಳು ಮತ್ತು ಸರ್ ಎಂವಿ ಟರ್ಮಿನಲ್‌ನಲ್ಲಿ ಪ್ಲಾಟ್‌ಫಾರ್ಮ್ ಟಿಕೆಟ್ ದರವನ್ನು ಅಕ್ಟೋಬರ್ 1 ರಿಂದ 31 ರವರೆಗೆ 10 ರಿಂದ 20 ರೂಪಾಯಿಗೆ ಹೆಚ್ಚಿಸಲಾಗಿದೆ," ಎಂದು ಎಸ್‌ಡಬ್ಲ್ಯೂಆರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ದಸರಾ ಹಬ್ಬದ ಹಿನ್ನೆಲೆ ಜನಸಂದಣಿ:
ರಾಜ್ಯದಲ್ಲಿ ದಸರಾ ಹಾಗೂ ವಿಜಯ ದಶಮಿ ಹಬ್ಬದ ಹಿನ್ನೆಲೆ ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆೆ. ಇದರ ಜೊತೆಗೆ ಜನಸಂದಣಿಯು ಹೆಚ್ಚಾಗುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಶಿಸ್ತುಕ್ರಮ ತೆಗೆದುಕೊಳ್ಳಲಾಗಿದೆ. ಅನಗತ್ಯವಾಗಿ ರೈಲ್ವೆ ನಿಲ್ದಾಣಕ್ಕೆ ಆಗಮಿಸುವ ಸಾರ್ವಜನಿಕರನ್ನು ನಿಯಂತ್ರಿಸುವ ಉದ್ದೇಶದಿಂದ ಪ್ಲಾಟ್‌ಫಾರ್ಮ್‌ಗಳಲ್ಲಿ ಟಿಕೆಟ್ ದರವನ್ನು ಹೆಚ್ಚಳ ಮಾಡಲಾಗಿದೆ ಎಂದು ಹೇಳಲಾಗಿದೆ.

English summary
Why indian Railway doubling of platform ticket rates railway stations in Bengaluru till Oct.31st.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X