ಸುದ್ದಿಗೆ ರೆಕ್ಕೆಪುಕ್ಕ ಕಟ್ಟಿದ ಯಡಿಯೂರಪ್ಪ- ಶಾಸಕ ಬಾಲಕೃಷ್ಣ ಭೇಟಿ
ಮಾಗಡಿಯ ಶಾಸಕ-ಜೆಡಿಎಸ್ ಭಿನ್ನಮತೀಯ ಬಾಲಕೃಷ್ಣ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದು ಹಲವು ಕುತೂಹಲಗಳಿಗೆ ಕಾರಣವಾಗಿದೆ. ಈ ಭೇಟಿ ಹಿಂದಿನ ಕಾರಣ ಏನು ಅಂತ ತಿಳಿಯುವುದಕ್ಕೆ ಈ ವರದಿ ಓದಿ
ಮಾಗಡಿ, ಏಪ್ರಿಲ್ 20 : ಜೆಡಿಎಸ್ ನಲ್ಲಿ ಬಂಡಾಯ ಎದ್ದು ಹೊರಬಂದಿರುವ ಶಾಸಕರ ಪೈಕಿ ಒಬ್ಬರಾದ ಬಾಲಕೃಷ್ಣ ಕಾಂಗ್ರೆಸ್ ಪಕ್ಷವನ್ನು ಸೇರುತ್ತಿರುವ ಕುರಿತಂತೆ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ಹಲವು ಕುತೂಹಲಗಳಿಗೆ ಕಾರಣವಾಗಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಊಹಾಪೋಹಗಳು ಹುಟ್ಟಿಕೊಂಡಿವೆ. ವಿಧಾನಸಭೆ ಚುನಾವಣೆಗೆ ವರ್ಷ ಬಾಕಿಯಿದ್ದು, ಈಗಿನಿಂದಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮತ್ತೆ ಜೆಡಿಎಸ್‍ಗೆ ಹೋಗುವಂತಿಲ್ಲ. ಕಾಂಗ್ರೆಸ್ ಗೆ ಸೇರ್ಪಡೆಯಾದರೂ ಬಾಲಕೃಷ್ಣ ಅವರಿಗೆ ಅಲ್ಲಿ ಸ್ಥಾನ- ಮಾನಗಳು ದೊರೆಯುತ್ತವೆ ಎನ್ನಲಾಗುವುದಿಲ್ಲ.[ಸೊಗಡು ಶಿವಣ್ಣ ಮನೆಯಲ್ಲಿ ಈಶ್ವರಪ್ಪ, ಅತೃಪ್ತರು ಬುಸುಬುಸು!]

ಒಂದು ವೇಳೆ ಮುಂದಿನ ಚುನಾವಣೆಗೆ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದರೂ ಒಕ್ಕಲಿಗ ಮತವನ್ನು ಪಡೆಯುವುದು ಅಷ್ಟು ಸುಲಭವಲ್ಲ. ಕಾರಣ ಅಲ್ಲಿ ಜೆಡಿಎಸ್ ಗಟ್ಟಿಯಾಗಿದೆ. ಹೀಗಾಗಿ ಬಾಲಕೃಷ್ಣ ಅವರಿಗೆ ಮುಂದಿನ ಚುನಾವಣೆ ಸ್ವಲ್ಪ ಕಠಿಣವಾಗಿ ಪರಿಣಮಿಸಲಿದೆ. ಹೀಗಾಗಿ ಅವರು ಗೊಂದಲಕ್ಕೆ ಬಿದ್ದಿರುವುದಂತೂ ಸತ್ಯ.
ಈ ವ್ಯಾಪ್ತಿಯಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮಾತೇ ನಡೆಯುತ್ತಿರುವುದರಿಂದ ಅವರ ವಿರುದ್ಧ ಸೆಟೆದು ನಿಂತು ತನ್ನದೇ ವರ್ಚಸ್ಸು ಉಳಿಸಿಕೊಂಡು ಬಂದಿರುವ ಬಾಲಕೃಷ್ಣ ಕಾಂಗ್ರೆಸ್ ಗೆ ಹೋದರೆ ಅಲ್ಲಿ ತಮ್ಮ ಅಸ್ತಿತ್ವ ಕಂಡುಕೊಳ್ಳಲು ಸಾಧ್ಯವಾ ಎಂಬ ಪ್ರಶ್ನೆ ಕೂಡ ಅವರ ಬೆಂಬಲಿಗರನ್ನು ಕಾಡುತ್ತಿದೆ. ಹೀಗಾಗಿ ಬಿಜೆಪಿ ಸಖ್ಯವನ್ನು ಹೊಂದಲು ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರಬಹುದೇ ಎಂಬ ಕುತೂಹಲ ಜನರದ್ದಾಗಿದೆ.[ಎಚ್ ಡಿಕೆಗೆ ಮುಕ್ತ ಆಹ್ವಾನ ನೀಡಿದ ಬಂಡಾಯ ಶಾಸಕ ಬಾಲಕೃಷ್ಣ]
ಈ ಎಲ್ಲ ಊಹೆ-ಅನುಮಾನಗಳನ್ನು ತಳ್ಳಿ ಹಾಕಿರುವ ಶಾಸಕ ಬಾಲಕೃಷ್ಣ, ಏಪ್ರಿಲ್ 23 ರಂದು ನಡೆಯುವ ಡಾ.ಶಿವಕುಮಾರಸ್ವಾಮೀಜಿ 110ನೇ ಗುರುವಂದನ ಕಾರ್ಯಕ್ರಮ ಹಾಗೂ ಸಾಮೂಹಿಕ ವಿವಾಹ ಮಹೋತ್ಸವಕ್ಕೆ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಆಹ್ವಾನ ಪತ್ರಿಕೆಯನ್ನು ನೀಡಿದ್ದೇನೆ ಹೊರತು ರಾಜಕೀಯವಾಗಿ ಯಾವುದೇ ಮಾತುಕತೆ ನಡೆಸಿಲ್ಲ. ಈಗಾಗಲೇ ನಾನು ಕಾಂಗ್ರೆಸ್ ಹೋಗುವುದು ಖಚಿತವಾಗಿದೆ ಎಂದಿದ್ದಾರೆ.
ಏಪ್ರಿಲ್ 23ರಂದು ನಡೆಯುವ ಕಾರ್ಯಕ್ರಮವನ್ನು ರಾಜಕೀಯದಿಂದ ದೂರ ಇಟ್ಟು ಮಾಡುತ್ತಿದ್ದೇವೆ. ಈಗಾಗಲೇ ಇಂಧನ ಸಚಿವ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೂ ಆಹ್ವಾನ ನೀಡಿದ್ದಾಗಿ ಹೇಳಿದ್ದಾರೆ. ಈಗೆಲ್ಲ ಏನೇ ಹೇಳಿದರೂ ಎಲ್ಲದಕ್ಕೂ ಕಾಲವೇ ಉತ್ತರ ನೀಡಬೇಕಾಗಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications