ನಲಪಾಡ್ ಜಾಮೀನು ಅರ್ಜಿ ವಜಾಗೊಳ್ಳಲು 4 ಕಾರಣಗಳು
Recommended Video

ಬೆಂಗಳೂರು, ಮಾರ್ಚ್ 02 : ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರೀಸ್ ಪುತ್ರ ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿ ವಜಾಗೊಂಡಿದೆ. ಮೊಹಮ್ಮದ್ ನಲಪಾಡ್ ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಕಾಲ ಕಳೆಯಬೇಕಾಗಿದೆ.
ಶುಕ್ರವಾರ ಬೆಂಗಳೂರಿನ 63ನೇ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಪರಮೇಶ್ವರ ಪ್ರಸನ್ನ ಬಿ. ಅವರು ಜಾಮೀನು ಅರ್ಜಿಯನ್ನು ವಜಾಗೊಳಿಸಿದರು. ಮೊಹಮ್ಮದ್ ನಲಪಾಡ್ ಸೇರಿದಂತೆ ಎಲ್ಲಾ 7 ಆರೋಪಿಗಳ ಜಾಮೀನು ಅರ್ಜಿ ತಿರಸ್ಕಾರವಾಗಿದೆ.
ಫೆ.17ರಂದು ಮೊಹಮ್ಮದ್ ನಲಪಾಡ್ ಬೆಂಗಳೂರಿನ ಯು.ಬಿ.ಸಿಟಿಯಲ್ಲಿನ ಫರ್ಜಿ ಕೆಫೆಯಲ್ಲಿ ವಿದ್ವತ್ ಎಂಬ ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದರು. ಈ ಪ್ರಕರಣದಲ್ಲಿ ಮೊಹಮ್ಮದ್ ನಲಪಾಡ್ ಬಂಧಿತರಾಗಿದ್ದು, ಕೊಲೆ ಯತ್ನದ ಪ್ರಕರಣದ ದಾಖಲಾಗಿದೆ.
ಸೆಷನ್ಸ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಜಾಗೊಂಡಿರುವ ಹಿನ್ನಲೆಯಲ್ಲಿ ಸೋಮವಾರ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುತ್ತದೆ. ಮಾರ್ಚ್ 7ರ ತನಕ ಎಲ್ಲಾ ಆರೋಪಿಗಳಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಅಂದು ಪುನಃ ಅರ್ಜಿಯ ವಿಚಾರಣೆ ನಡೆಯಲಿದೆ. ಜಾಮೀನು ನಿರಾಕರಿಸಲು 4 ಕಾರಣಗಳು..

ಕಾರಣ – 1
ಮೊಹಮ್ಮದ್ ನಲಪಾಡ್ ರಿಂದ ಹಲ್ಲೆಗೊಳಗಾದ ವಿದ್ವತ್ ಇನ್ನೂ ಪೊಲೀಸರ ಮುಂದೆ ಹೇಳಿಕೆ ಕೊಟ್ಟಿಲ್ಲ ಎಂಬ ಕಾರಣ ನೀಡಿ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ.

ಕಾರಣ – 2
ವಿದ್ವತ್ ಇನ್ನೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿಲ್ಲ. ಈಗಲೇ ಜಾಮೀನು ನೀಡಿದರೆ. ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ.

ಕಾರಣ – 3
ಮೊಹಮ್ಮದ್ ನಲಪಾಡ್ ವಿದ್ವತ್ ಮೇಲೆ ಮರಣಾಂತಿಕ ಹಲ್ಲೆ ನಡೆಸಿದ್ದಾನೆ. ಆಸ್ಪತ್ರೆ ತನಕ ಹಿಂಬಾಲಿಸಿಕೊಂಡು ಬಂದು ಬೆದರಿಸಲು ಪ್ರಯತ್ನಿಸಿದ್ದಾನೆ.

ಕಾರಣ – 4
ಎನ್.ಎ.ಹ್ಯಾರೀಸ್ ಪುತ್ರ ಮೊಹಮ್ಮದ್ ನಲಪಾಡ್ ಪ್ರಭಾವಿ ವ್ಯಕ್ತಿ. ಜಾಮೀನು ನೀಡಿದರೆ ಸಾಕ್ಷ್ಯನಾಶ ಮಾಡುವ ಸಾಧ್ಯತೆ ಇದೆ.












Click it and Unblock the Notifications