ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆನ್‌ಲೈನ್ ಪರೀಕ್ಷೆಗೆ ಏಕೆ ಅವಕಾಶ ನೀಡಿಲ್ಲ: ವಿಟಿಯುಗೆ ಹೈಕೋರ್ಟ್ ತರಾಟೆ

|
Google Oneindia Kannada News

ಬೆಂಗಳೂರು, ಆಗಸ್ಟ್ 12: ವೈವಾವನ್ನು ಆನ್‌ಲೈನ್ ಮೂಲಕ ನಡೆಸಿದ್ದೀರಿ ಆದರೆ ಪರೀಕ್ಷೆಗೆ ಏಕೆ ಆನ್‌ಲೈನ್‌ನಲ್ಲಿ ಅವಕಾಶ ನೀಡಿಲ್ಲ ಎಂದು ಬೆಂಗಳೂರಿನ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

Recommended Video

KG Halli , DJ halli ಪ್ರಕರಣಜ ಬಗ್ಗೆ ಕರ್ನಾಟಕ ಕಾಂಗ್ರೆಸ್ ಪತ್ರಿಕಾ ಗೋಷ್ಠಿ | Oneindia Kannada

ವಿದ್ಯಾರ್ಥಿಯೊಬ್ಬರು ಆನ್‌ಲೈನ್‌ನಲ್ಲಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತ ಮನವಿ ಮಾಡಿ ಅರ್ಜಿಯನ್ನು ಹೈಕೋರ್ಟ್‌ಗೆ ಸಲ್ಲಿಸಿದ್ದರು.

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಇಲ್ಲಿವೆ ಮುಖ್ಯಾಂಶಗಳುಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಇಲ್ಲಿವೆ ಮುಖ್ಯಾಂಶಗಳು

ಅರ್ಜಿದಾರರ ಪರ ವಕೀಲ ಭಾರ್ಗವ್ ಭಟ್ ಎಂಬುವವರು ವೈವಾವನ್ನು ಆನ್‌ಲೈನ್‌ನಲ್ಲಿ ನಡೆಸಿರುವ ಕುರಿತು ದಾಖಲೆಯನ್ನು ಕೋರ್ಟ್‌ಗೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ನ್ಯಾ. ಸುನಿಲ್ ದತ್ ಅವರಿದ್ದ ಪೀಠ ವಿಚಾರಣೆ ನಡೆಸಿ ವೈವಾವನ್ನು ಆನ್‌ಲೈನ್ ಮೂಲಕ ಮಾಡಿ ಮೇಲೆ ಪರೀಕ್ಷೆಯನ್ನು ಏಕೆ ಮಾಡಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.

Why Online Examinations Cannot Be Held, When The Viva Was Done Online? Karnataka HC Asks VTU

ಕ್ರಿಸ್ಟ್‌, ಎನ್‌ಎಲ್‌ಎಸ್‌ಐಯು ಸೇರಿದಂತೆ ಹಲವು ವಿಶ್ವವಿದ್ಯಾಲಯಗಳು ಆನ್‌ಲೈನ್‌ ಮೂಲಕವೇ ಪರೀಕ್ಷೆ ನಡೆಸಿದೆ. ವಿಟಿಯು ತಾಂತ್ರಿಕ ವಿಶ್ವವಿದ್ಯಾಲಯವಾಗಿದ್ದು ಆನ್‌ಲೈನ್‌ನಲ್ಲಿಯೇ ಪರೀಕ್ಷೆ ನಡೆಸಬಹುದಾಗಿದೆ.

ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಉತ್ತ ಪರಿಹಾರವನ್ನು ಕಂಡುಕೊಳ್ಳಬೇಕಿತ್ತು. ಹಾಗೆಯೇ ಆನ್‌ಲೈನ್‌ ಹಾಗೂ ಆಫ್‌ಲೈನ್ ಎರಡೂ ರೀತಿಯ ಪರೀಕ್ಷೆಗೆ ಅವಕಾಶ ನೀಡುವಂತ ಪೀಠವು ಸೂಚನೆ ನೀಡಿದೆ.

70 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಸುಮಾರು 1 ಲಕ್ಷ ಬ್ಯಾಕ್‌ಲಾಗ್ ವಿದ್ಯಾರ್ಥಿಗಳು ಕೂಡ ಪರೀಕ್ಷೆ ಬರೆಯಲಿದ್ದಾರೆ. ಶೇ.95ರಷ್ಟು ವಿದ್ಯಾರ್ಥಿಗಳು ಇಂಟರ್‌ನಲ್ ಪರೀಕ್ಷೆಯನ್ನು ಆನ್‌ಲೈನ್ ಮೂಲಕವೇ ಬರೆದಿದ್ದಾರೆ ಎಂದು ಭಟ್ ಮಾಹಿತಿ ನೀಡಿದ್ದಾರೆ.

English summary
The Highcourt Of Karnataka On Wednesday Asked the Visvesvaraya Technical University to respond by tomorrow on why online examination cannot be held when the viva was done online.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X