ಆರ್.ಆರ್.ನಗರ ಚುನಾವಣೆ ಮುಂದೂಡಲು ಕಾರಣಗಳು

ಬೆಂಗಳೂರು, ಮೇ 11 : ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದೆ. ಬೆಂಗಳೂರು ನಗರದ 28 ವಿಧಾನಸಭಾ ಕ್ಷೇತ್ರಗಳ ಪೈಕಿ ಜಯನಗರ ಮತ್ತು ಆರ್.ಆರ್.ನಗರದಲ್ಲಿ ಮೇ 12ರ ಶನಿವಾರ ಮತದಾನ ನಡೆಯುತ್ತಿಲ್ಲ.

ಶುಕ್ರವಾರ ಸಂಜೆ ರಾಜರಾಜೇಶ್ವರಿ ನಗರ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಪ್ರಕಟಿಸಿದ್ದಾರೆ. ಮೇ 12ರಂದು ಆರ್‌.ಆರ್.ನಗರ ಕ್ಷೇತ್ರದ ಚುನಾವಣೆ ನಡೆಯುವುದಿಲ್ಲ.

ಮೇ 28ರಂದು ರಾಜರಾಜೇಶ್ವರಿ ನಗರ ಕ್ಷೇತ್ರದ ಚುನಾವಣೆ ನಡೆಯಲಿದ್ದು, ಮೇ 31ರಂದು ಫಲಿತಾಂಶ ಪ್ರಕಟವಾಗಲಿದೆ. ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಚುನಾವಣೆ ಮುಂದೂಡುವಂತೆ ಆಯೋಗಕ್ಕೆ ಮನವಿ ಸಲ್ಲಿಸಿದ್ದವು.

Why Rajarajeshwari Nagar constituency poll postponed

ಚುನಾವಣೆ ಮುಂದೂಡಲು ಕಾರಣಗಳು

* ಮೇ 6ರಂದು ಆರ್‌.ಆರ್.ನಗರ ಕ್ಷೇತ್ರದ ವ್ಯಾಪ್ತಿಯಲ್ಲಿ 95 ಲಕ್ಷ ರೂ. ಹಣ ಟ್ರಕ್‌ನಲ್ಲಿ ಪತ್ತೆಯಾಗಿತ್ತು.

* ಜಾಲಹಳ್ಳಿ ಸಮೀಪದ ಎಸ್‌ಎಲ್‌ವಿ ಅಪಾರ್ಟ್‌ಮೆಂಟ್‌ನಲ್ಲಿ 9,746 ವೋಟರ್ ಐಡಿಗಳು ಪತ್ತೆಯಾಗಿದ್ದವು.

ಈ ಎರಡೂ ಪ್ರಕರಣಗಳ ಬಗ್ಗೆ ಚುನಾವಣಾ ಆಯೋಗ ವರದಿ ಕೇಳಿತ್ತು. ಕರ್ನಾಟಕದ ಚುನಾವಣಾ ಉಸ್ತುವಾರಿಗಳಾಗಿದ್ದವರು ಈ ಕುರಿತು ವರದಿ ನೀಡಿದ್ದರು. ಈ ವರದಿ ಅನ್ವಯ ಆಯೋಗ ಚುನಾವಣೆ ಮುಂದೂಡುವ ನಿರ್ಣಯವನ್ನು ಕೈಗೊಂಡಿದೆ.

ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಮುನಿರತ್ನ, ಬಿಜೆಪಿಯಿಂದ ಮುನಿರಾಜು ಗೌಡ ಮತ್ತು ಜೆಡಿಎಸ್‌ನಿಂದ ಜಿ.ಎಚ್.ರಾಮಚಂದ್ರ ಅಭ್ಯರ್ಥಿಗಳಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+