Get Updates
Get notified of breaking news, exclusive insights, and must-see stories!

ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿ ವಜಾಗೊಳ್ಳಲು ಕಾರಣಗಳು!

ಬೆಂಗಳೂರು, ಮೇ 30 : ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದಲ್ಲಿ ಮೊಹಮ್ಮದ್ ನಲಪಾಡ್‌ಗೆ ಜಾಮೀನು ಸಿಕ್ಕಿಲ್ಲ. ಬೆಂಗಳೂರಿನ ಸೆಷನ್ಸ್ ಕೋರ್ಟ್ 2ನೇಬಾರಿಯೂ ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಬೆಂಗಳೂರಿನ 63ನೇ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಬಿ.ಪರಮೇಶ್ವರ ಪ್ರಸನ್ನ ಅವರು ಬುಧವಾರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ. 'ಪ್ರಕರಣದ ಜಾರ್ಜ್ ಶೀಟ್ ಸಲ್ಲಿಕೆಯಾದರೆ ಜಾಮೀನು ಕೊಡಬೇಕೆಂದಿಲ್ಲ. ಇದೊಂದು ಗಂಭೀರವಾದ ಪ್ರಕರಣವಾಗಿದೆ' ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

2018ರ ಫೆಬ್ರವರಿಯಿಂದ ಮೊಹಮ್ಮದ್ ನಲಪಾಡ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಹಿಂದೆ ಒಂದು ಬಾರಿ ಸೆಷನ್ಸ್ ಕೋರ್ಟ್, ಒಂದು ಬಾರಿ ಕರ್ನಾಟಕ ಹೈಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದವು.

ಯು.ಬಿ.ಸಿಟಿಯ ಫರ್ಜಿ ಕೆಫೆಯಲ್ಲಿ ವಿದ್ವತ್ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ನಡೆಸಿದ್ದು, 600 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದಾರೆ. ಮೊಹಮ್ಮದ್ ನಲಪಾಡ್, ಅರುಣ್ ಬಾಬು, ಶ್ರೀ ಕೃಷ್ಣ, ಮಂಜುನಾಥ್, ಆಶ್ರಫ್, ಬಾಲಕೃಷ್ಣ, ಅಭಿಷೇಕ್, ನಾಸಿರ್ ಪ್ರಕರಣದ ಆರೋಪಿಗಳು. ಜಾಮೀನು ಅರ್ಜಿ ವಜಾಗೊಳ್ಳಲು ಕಾರಣಗಳು ಇಲ್ಲಿವೆ...

ಗಂಭೀರ ಪ್ರಕರಣ, ಪ್ರಭಾವಿ ಆರೋಪಿ

ಗಂಭೀರ ಪ್ರಕರಣ, ಪ್ರಭಾವಿ ಆರೋಪಿ

ಬೆಂಗಳೂರಿನ 63ನೇ ಸೆಷನ್ಸ್ ನ್ಯಾಯಾಲಯ ಬುಧವಾರ ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಇದು ಗಂಭೀರ ಪ್ರಕರಣವಾಗಿದೆ. ಆರೋಪಿ ಜಾಮೀನಿನ ಮೇಲೆ ಬಿಡುಗಡೆಯಾದಲ್ಲಿ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಆದ್ದರಿಂದ, ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಹಿಂದೆ ಕರ್ನಾಟಕ ಹೈಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿದಾಗ ನೀಡಿದ ಕಾರಣಗಳನ್ನು ಸೆಷನ್ಸ್ ನ್ಯಾಯ್ಯಾಲಯವೂ ಹೇಳಿದ್ದು, ಅಂದಿಗಿಂತ ಇಂದಿನ ಪರಿಸ್ಥಿತಿ ಭಿನ್ನವಾಗಿಲ್ಲ ಎಂದು ಹೇಳಿದೆ.

ವೈದ್ಯಕೀಯ ವರದಿಗಳು

ವೈದ್ಯಕೀಯ ವರದಿಗಳು

ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ವೈದ್ಯಕೀಯ ಸಾಕ್ಷಿಗಳು ಮೊಹಮ್ಮದ್ ನಲಪಾಡ್ ವಿರುದ್ಧವಾಗಿವೆ. ಆದ್ದರಿಂದ, ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಸೆಷನ್ಸ್ ಕೋರ್ಟ್ ಬುಧವಾರ ತನ್ನ ತೀರ್ಪಿನಲ್ಲಿ ಹೇಳಿದೆ.

ಇದೊಂದು ಗಂಭೀರವಾದ ಪ್ರಕರಣವಾಗಿದೆ. ಪ್ರಕರಣದ ಚಾರ್ಜ್‌ಶೀಟ್ ಕೋರ್ಟ್‌ಗೆ ಸಲ್ಲಿಕೆಯಾಗಿದ್ದರೂ ಜಾಮೀನು ನೀಡಬೇಕೆಂದಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಮಾರ್ಚ್ 2ರಂದು ಜಾಮೀನು ತಿರಸ್ಕರಿಸಿತ್ತು

ಮಾರ್ಚ್ 2ರಂದು ಜಾಮೀನು ತಿರಸ್ಕರಿಸಿತ್ತು

ಬೆಂಗಳೂರಿನ 63ನೇ ಸೆಷನ್ಸ್ ನ್ಯಾಯಾಲಯ 2ನೇ ಬಾರಿಗೆ ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಮಾರ್ಚ್ 2, 2018ರಂದು ಮೊದಲನೇ ಬಾರಿಗೆ ಅರ್ಜಿ ತಿರಸ್ಕಾರವಾಗಿತ್ತು.

ಯು.ಬಿ.ಸಿಟಿಯ ಫರ್ಜಿ ಕೆಫೆಯಲ್ಲಿ ವಿದ್ವತ್ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ನಡೆಸಿದ್ದು, 600 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದಾರೆ. ಚಾರ್ಜ್ ಶೀಟ್ ಸಲ್ಲಿಕೆಯಾದ ಕಾರಣ ಪುನಃ ಜಾಮೀನು ಪಡೆಯಲು ಅರ್ಜಿ ಸಲ್ಲಿಸಲಾಗಿತ್ತು.

ಮೊಹಮ್ಮದ್ ನಲಪಾಡ್ ಪ್ರಮುಖ ಆರೋಪಿ

ಮೊಹಮ್ಮದ್ ನಲಪಾಡ್ ಪ್ರಮುಖ ಆರೋಪಿ

ಫೆ.17ರಂದು ಯು.ಬಿ.ಸಿಟಿಯ ಫರ್ಜಿ ಕೆಫೆಯಲ್ಲಿ ವಿದ್ವತ್ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಮೊಹಮ್ಮದ್ ನಲಪಾಡ್ ಪ್ರಮುಖ ಆರೋಪಿ. ಆರೋಪಿ ಪ್ರಭಾವಿಯಾದ ಕಾರಣದಿಂದ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.

ಈ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ನಡೆಸಿದ್ದಾರೆ. 600 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ. ಮೊಹಮ್ಮದ್ ನಲಪಾಡ್, ಅರುಣ್ ಬಾಬು, ಶ್ರೀ ಕೃಷ್ಣ, ಮಂಜುನಾಥ್, ಆಶ್ರಫ್, ಬಾಲಕೃಷ್ಣ, ಅಭಿಷೇಕ್, ನಾಸಿರ್ ಆರೋಪಿಗಳಾಗಿದ್ದಾರೆ.

ಹೈಕೋರ್ಟ್‌ಗೆ ಅರ್ಜಿ ಹಾಕಬೇಕು

ಹೈಕೋರ್ಟ್‌ಗೆ ಅರ್ಜಿ ಹಾಕಬೇಕು

63ನೇ ಸೆಷನ್ಸ್ ನ್ಯಾಯಾಲಯ 2ನೇ ಬಾರಿಗೆ ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ನಲಪಾಡ್ ಜಾಮೀನು ನೀಡುವಂತೆ ಕೋರಿ ಪುನಃ ಕರ್ನಾಟಕ ಹೈಕೋರ್ಟ್‌ ಮೊರೆ ಹೋಗಬೇಕು.

2 ರಿಂದ 3 ದಿನದಲ್ಲಿ ಕರ್ನಾಟಕ ಹೈಕೋರ್ಟ್‌ಗೆ ನಲಪಾಡ್ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಹೈಕೋರ್ಟ್‌ನಲ್ಲಿ ಜಾಮೀನು ಸಿಗಲಿದೆಯೇ? ಕಾದು ನೋಡಬೇಕು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+