Bengaluru Rains : ಹಿಂಗಾರು ಮಳೆಯ ಮೊದಲ ಆರ್ಭಟ: ಬುಧವಾರ 'ಯೆಲ್ಲೋ ಅಲರ್ಟ್'

ಬೆಂಗಳೂರು, ಅಕ್ಟೋಬರ್ 31: ಒಂದು ವಾರದಿಂದ ಚಳಿ ಆವರಿಸಿರುವ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಿಂಗಾರು ಮಳೆ ಸುರಿಯುವ ಮುನ್ಸೂಚನೆ ದೊರೆತಿದೆ. ಗುಡುಗು ಸಹಿತ ಜೋರು ಮಳೆ ನಿರೀಕ್ಷೆ ಹಿನ್ನೆಲೆ ಬುಧವಾರ ಬೆಂಗಳೂರು ನಗರಕ್ಕೆ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ.

ದೀಪಾವಳಿ ಹಬ್ಬದ ಬಳಿಕ ಒಂದಷ್ಟು ಜಿಲ್ಲೆ ಹೊರುತುಪಡಿಸಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಕಡಿಮೆಯಾಗಿ ಚಳಿ ಹೆಚ್ಚಾಗಿದೆ. ಬೆಂಗಳೂರಲ್ಲಿ ಬೆಳಗ್ಗೆ ರಾತ್ರಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ ಕಂಡು ಬರುತ್ತಿದೆ. ಇದೀಗ ನಗರದಲ್ಲಿ ಹಿಂಗಾರು ಮಳೆ ಮೊದಲ ಬಾರಿಗೆ ಆರ್ಭಟಿಸುವ ಸೂಚನೆ ನೀಡಿದೆ.

ನವೆಂಬರ್ 2ರಂದು ಬುಧವಾರ ನಗರ ಮತ್ತು ಸುಮುತ್ತಲಿನ ಪ್ರದೇಶಗಳಲ್ಲಿ ವ್ಯಾಪಕವಾಗಿ ಮಳೆ ಸುರಿಯಲಿದೆ. ಜೊತೆಗೆ ಗುಡುಗು, ಮಿಂಚಿನ ಅಬ್ಬರವು ಕಂಡು ಬರಲಿರುವ ಹಿನ್ನಲೆ ಅಂದು ಬೆಂಗಳೂರು ನಗರಕ್ಕೆ 'ಹಳದಿ' ಎಚ್ಚರಿಕೆ ನೀಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಕೇಂದ್ರ ಮುನ್ಸೂಚನೆ ನೀಡಿದೆ.

Widespread to heavy rain for Bengaluru City on Wednesday Yellow alert

ನಗರದಲ್ಲಿ ಮುಂದುವರಿದ ಚಳಿ; ಇನ್ನು ಮಂಗಳವಾರ ಕೆಲವು ಸ್ಥಳಗಳಲ್ಲಿ ಹಗುರವಾಗಿ, ಹಲವೆಡೆ ಸಾಧಾರಣವಾಗಿ ಮಳೆ ಆಗಲಿದೆ. ಒಂದೆರಡು ಕಡೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಈ ವೇಳೆ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಮತ್ತ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಷಿಯಸ್ ದಾಖಲಾಗಬಹುದು ಎಂದು ಹವಾಮಾನ ಕೇಂದ್ರದ ವರದಿ ಹೇಳಿದೆ.

ಸೋಮವಾರ ಬೆಳಗ್ಗೆ ಬೆಂಗಳೂರು ನಗರದಲ್ಲಿ ಕನಿಷ್ಠ ತಾಪಮಾನ 19ಡಿಗ್ರಿ ಸೆಲ್ಸಿಯಸ್, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 18.4 ಡಿಗ್ರಿ ಸೆಲ್ಸಿಯಸ್ ಮತ್ತು ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ 17.2ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಕಂಡು ಬಂದಿದೆ. ಮುಂದಿನ 24ಗಂಟೆ ಹೀಗೆ ಚಳಿಯ ವಾತಾವರಣ ಮುಂದುವರಿಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+