ಎರಡು ದಿನದಲ್ಲಿ ಸಚಿವರಿಗೆ ಖಾತೆ ಹಂಚಿಕೆ: ಬಿಎಸ್ ವೈ ಸ್ಪಷ್ಟನೆ
ಬೆಂಗಳೂರು, ಜನವರಿ 18: ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಸಚಿವರಿಗೆ ಇನ್ನೆರಡು ದಿನದಲ್ಲಿ ಖಾತೆ ಹಂಚಿಕೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸ್ಪಷ್ಟಡಿಸಿದ್ದಾರೆ.
ಬಿಡಿಎ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ, ಈಗಾಗಲೇ ಪ್ರಮಾಣ ವಚನ ಮಾಡಿರುವ ನೂತನ ಸಚಿವರಿಗೆ ಖಾತೆ ಹಂಚಿಕೆ ಬಗ್ಗೆ ಸಚಿವರ ಜತೆ ಚರ್ಚೆ ನಡೆಸುತ್ತೇನೆ. ಸದ್ಯ ನಾನು ಉಡುಪಿಗೆ ಹೋಗುತ್ತಿದ್ದೇನೆ. ಉಡುಪಿಯಿಂದ ಬಂದ ಬಳಿಕ ಖಾಲಿಯಿರುವ ಸಚಿವ ಸ್ಥಾನಗಳ ಬಗ್ಗೆ ಹಿರಿಯ ಸಚಿವರ ಜತೆ ಚರ್ಚಿಸಿ ನಾನು ತೀರ್ಮಾನ ಕೈಗೊಳ್ಳುತ್ತೇನೆ ಎಂದು ಸ್ಪಷ್ಟಪಡಿಸಿದರು.

ಇನ್ನು ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಮತ್ತು ಬಿಡಿಎ ಆಯುಕ್ತ ಮಹದೇವ್ ಅವರ ನಡುವೆ ಭಿನ್ನಾಭಿಪ್ರಾಯವಿದೆ ಎಂಬುದರ ಬಗ್ಗೆ ಸ್ಪಷ್ಟಪಡಿಸಿದ ಮುಖ್ಯಮಂತ್ರಿಗಳು, ಇಬ್ಬರೂ ಜೋಡೆತ್ತುಗಳ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಯಾವುದೇ ಗೊಂದಲ ಇಲ್ಲ. ಇಬ್ಬರೂ ಒಗ್ಗೂಡಿಯೇ ಕೆಲಸ ಮಾಡುತ್ತಿದ್ದಾರೆ. ಎಂದೂ ಆಗದ ಕಾರ್ಯಗಳು ಬಿಡಿಎನಲ್ಲಿ ಈಗ ಆಗುತ್ತಿವೆ. ಇದರ ಬಗ್ಗೆ ಯಾವುದೇ ಸಂಶಯ , ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದು ಅವರು ಹೇಳಿದರು.












Click it and Unblock the Notifications