ಭೋಜೇಗೌಡರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ ಎಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಪ್ರಲ್ಹಾದ್ ಜೋಶಿ ಅವರ ಕಚೇರಿಯಲ್ಲಿ ಲಂಚ ಪಡೆಯಲಾಗಿತ್ತು ಎಂಬ ಜೆಡಿಎಸ್ ಎಂಎಲ್‌ಸಿ ಭೋಜೇಗೌಡರ ಆರೋಪಕ್ಕೆ ಪ್ರಲ್ಹಾದ್ ಜೋಶಿ ತಿರುಗೇಟು ನೀಡಿರುವುದು ಹೀಗೆ. ಮುಂದೆ ಓದಿ.
ಬೆಂಗಳೂರು, ಫೆಬ್ರವರಿ. 07: ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ವೈದ್ಯಕೀಯ ಮಂಡಳಿ (ಎನ್.ಎಂ.ಸಿ) ಸದಸ್ಯರನ್ನಾಗಿ ನೇಮಿಸಲು ಶಿವಮೊಗ್ಗದ ವೈದ್ಯರೊಬ್ಬರಿಂದ ಪ್ರಲ್ಹಾದ್ ಜೋಶಿ ಅವರ ಕಚೇರಿಯಲ್ಲಿ ಲಂಚ ಪಡೆಯಲಾಗಿತ್ತು ಎಂಬ ಆರೋಪಕ್ಕೆ ಕೇಂದ್ರ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ.
ವಿಧಾನ ಪರಿಷತ್‌ನ ಜೆಡಿಎಸ್ ಸದಸ್ಯ ಎಸ್.ಎಲ್. ಭೋಜೇಗೌಡ ಈ ಆರೋಪಗಳನ್ನು ಮಾಡಿದ್ದರು. ಹೀಗಾಗಿ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು, ಫೆಬ್ರವರಿ. 07: ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ವೈದ್ಯಕೀಯ ಮಂಡಳಿ (ಎನ್.ಎಂ.ಸಿ) ಸದಸ್ಯರನ್ನಾಗಿ ನೇಮಿಸಲು ಶಿವಮೊಗ್ಗದ ವೈದ್ಯರೊಬ್ಬರಿಂದ ಪ್ರಲ್ಹಾದ್ ಜೋಶಿ ಅವರ ಕಚೇರಿಯಲ್ಲಿ ಲಂಚ ಪಡೆಯಲಾಗಿತ್ತು ಎಂಬ ಆರೋಪಕ್ಕೆ ಕೇಂದ್ರ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ.ವಿಧಾನ ಪರಿಷತ್‌ನ ಜೆಡಿಎಸ್ ಸದಸ್ಯ ಎಸ್.ಎಲ್. ಭೋಜೇಗೌಡ ಈ ಆರೋಪಗಳನ್ನು ಮಾಡಿದ್ದರು. ಹೀಗಾಗಿ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಚ್ಚರಿಕೆ ನೀಡಿದ್ದಾರೆ.ದಾಖಲೆ ಮರೆಮಾಚಲಾಗಿದೆ ಎಂದು ಆರೋಪಿಸಿರುವ ಅವರು, ಮತ್ತೊಂದು ದಾಖಲೆಯನ್ನು ಟ್ವೀಟ್ ಮಾಡಿ, ಭೋಜೇಗೌಡರು ಆರೋಪ ಮಾಡುವಾಗ ದಾಖಲೆ ಮರೆಮಾಚಿದ್ದೇಕೆ ಎಂದು ಪ್ರಶ್ನಿಸಿದ್ದಾರೆ. ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ವೈದ್ಯಕೀಯ ಮಂಡಳಿ (ಎನ್.ಎಂ.ಸಿ) ಸದಸ್ಯರನ್ನಾಗಿ ನೇಮಿಸಲು ಶಿವಮೊಗ್ಗದ ವೈದ್ಯರೊಬ್ಬರಿಂದ ಪ್ರಲ್ಹಾದ್ ಜೋಶಿ ಅವರ ಕಚೇರಿಯಲ್ಲಿ ಲಂಚ ಪಡೆಯಲಾಗಿತ್ತು ಎಂದು ಭೋಜೇಗೌಡರು ಆರೋಪಿಸಿದ್ದರು. ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ. ಹರೀಶ್ ಅಯ್ಯಣ್ಣ ಎಂಬುವವರನ್ನು ನೇಮಿಸುವುದಕ್ಕಾಗಿ ಜೋಶಿಯವರ ಕಚೇರಿಯ ಸಿಬ್ಬಂದಿ 2.5 ಕೋಟಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ್ದರು.ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಭೋಜೇಗೌಡರು ಹೇಳುವ ವ್ಯಕ್ತಿ ನಮ್ಮ ಕಚೇರಿಯಲ್ಲೇ ಇಲ್ಲ. ಅಷ್ಟಕ್ಕೂ ಭೋಜೇಗೌಡರು ಪ್ರದರ್ಶಿಸಿರುವ ಪತ್ರ ಡಾಕ್ಟರೊಬ್ಬರಿಗೆ ಬರೆದ ಪತ್ರ. ನಾನು ಡಾಕ್ಟರ್ ಅಲ್ಲ. ನನ್ನ ಕಚೇರಿಗೂ ಇದಕ್ಕೂ ಸಂಬಂಧವಿಲ್ಲ. ತಳ ಬುಡವಿಲ್ಲದ ಹಾಗೂ ಜನರನ್ನು ದಾರಿ ತಪ್ಪಿಸುವ ಆಪಾದನೆ ಇದು ಎಂದಿದ್ದಾರೆ.https://twitter.com/JoshiPralhad/status/1622979838121488388?t=_rghnl3bAIh-fyXgvKPhoA&s=08'ತಳ ಬುಡವಿಲ್ಲದೆ, ಜನರನ್ನು ದಾರಿ ತಪ್ಪಿಸುವ ಆಪಾದನೆಯನ್ನ ಭೋಜೇಗೌಡರು ಮಾಡಿದ್ದು, ಈ ತರಹದ ಆಧಾರರಹಿತ ಆಪಾದನೆಯನ್ನು ನಾನು ಗಂಭೀರವಾಗಿ ಪರಿಗಣಿಸುತ್ತೇನೆ. ಇದು ನನ್ನ ತೇಜೋವಧೆ ಮಾಡುವ ಹುನ್ನಾರವಾಗಿದ್ದು, ಭೋಜೇಗೌಡರ ವಿರುದ್ಧ ಮಾನ ನಷ್ಟ ಮೊಕದ್ದಮೆ ದಾಖಲಿಸುವ ಬಗ್ಗೆ ನಾನು ಯೋಚಿಸುತ್ತಿದ್ದೇನೆ" ಎಂದು ಹೇಳಿದ್ದಾರೆ.ದಾಖಲೆ ಮರೆಮಾಚಲಾಗಿದೆ ಎಂದು ಆರೋಪಿಸಿರುವ ಅವರು, ಮತ್ತೊಂದು ದಾಖಲೆಯನ್ನು ಟ್ವೀಟ್ ಮಾಡಿ, ಭೋಜೇಗೌಡರು ಆರೋಪ ಮಾಡುವಾಗ ದಾಖಲೆ ಮರೆಮಾಚಿದ್ದೇಕೆ ಎಂದು ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ವೈದ್ಯಕೀಯ ಮಂಡಳಿ (ಎನ್.ಎಂ.ಸಿ) ಸದಸ್ಯರನ್ನಾಗಿ ನೇಮಿಸಲು ಶಿವಮೊಗ್ಗದ ವೈದ್ಯರೊಬ್ಬರಿಂದ ಪ್ರಲ್ಹಾದ್ ಜೋಶಿ ಅವರ ಕಚೇರಿಯಲ್ಲಿ ಲಂಚ ಪಡೆಯಲಾಗಿತ್ತು ಎಂದು ಭೋಜೇಗೌಡರು ಆರೋಪಿಸಿದ್ದರು. ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ. ಹರೀಶ್ ಅಯ್ಯಣ್ಣ ಎಂಬುವವರನ್ನು ನೇಮಿಸುವುದಕ್ಕಾಗಿ ಜೋಶಿಯವರ ಕಚೇರಿಯ ಸಿಬ್ಬಂದಿ 2.5 ಕೋಟಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ್ದರು.
ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಭೋಜೇಗೌಡರು ಹೇಳುವ ವ್ಯಕ್ತಿ ನಮ್ಮ ಕಚೇರಿಯಲ್ಲೇ ಇಲ್ಲ. ಅಷ್ಟಕ್ಕೂ ಭೋಜೇಗೌಡರು ಪ್ರದರ್ಶಿಸಿರುವ ಪತ್ರ ಡಾಕ್ಟರೊಬ್ಬರಿಗೆ ಬರೆದ ಪತ್ರ. ನಾನು ಡಾಕ್ಟರ್ ಅಲ್ಲ. ನನ್ನ ಕಚೇರಿಗೂ ಇದಕ್ಕೂ ಸಂಬಂಧವಿಲ್ಲ. ತಳ ಬುಡವಿಲ್ಲದ ಹಾಗೂ ಜನರನ್ನು ದಾರಿ ತಪ್ಪಿಸುವ ಆಪಾದನೆ ಇದು ಎಂದಿದ್ದಾರೆ.
'ತಳ ಬುಡವಿಲ್ಲದೆ, ಜನರನ್ನು ದಾರಿ ತಪ್ಪಿಸುವ ಆಪಾದನೆಯನ್ನ ಭೋಜೇಗೌಡರು ಮಾಡಿದ್ದು, ಈ ತರಹದ ಆಧಾರರಹಿತ ಆಪಾದನೆಯನ್ನು ನಾನು ಗಂಭೀರವಾಗಿ ಪರಿಗಣಿಸುತ್ತೇನೆ. ಇದು ನನ್ನ ತೇಜೋವಧೆ ಮಾಡುವ ಹುನ್ನಾರವಾಗಿದ್ದು, ಭೋಜೇಗೌಡರ ವಿರುದ್ಧ ಮಾನ ನಷ್ಟ ಮೊಕದ್ದಮೆ ದಾಖಲಿಸುವ ಬಗ್ಗೆ ನಾನು ಯೋಚಿಸುತ್ತಿದ್ದೇನೆ" ಎಂದು ಹೇಳಿದ್ದಾರೆ.












Click it and Unblock the Notifications