ಡಿ. 5ರ ಕರ್ನಾಟಕ ಬಂದ್; ಬಿಬಿಎಂಪಿ ಆಯುಕ್ತರಿಂದ ಎಚ್ಚರಿಕೆ

ಬೆಂಗಳೂರು, ಡಿಸೆಂಬರ್ 01: " ಕರ್ನಾಟಕ ಬಂದ್ ದಿನ ಬಿಬಿಎಂಪಿ ವ್ಯಾಪ್ತಿಯಲ್ಲಿನ ಮಳಿಗೆಗಳನ್ನು ಮುಚ್ಚಿಸುವಂತಿಲ್ಲ. ಒತ್ತಾಯ ಪೂರ್ವಕ ಬಂದ್ ಮಾಡಿಸಿದರೆ ಕ್ರಮ ಕೈಗೊಳ್ಳಲಾಗುತ್ತದೆ" ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ಸರ್ಕಾರ ಮರಾಠ ಅಭಿವೃದ್ಧಿ ನಿಗಮ ರಚನೆಗೆ ನೀಡಿರುವ ಆದೇಶ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಡಿಸೆಂಬರ್ 5ರ ಶನಿವಾರ ಕರ್ನಾಟಕ ಬಂದ್‌ಗೆ ಕನ್ನಡ ಒಕ್ಕೂಟ ಕರೆ ನೀಡಿದೆ.

"ಪಾಲಿಕೆ ವ್ಯಾಪ್ತಿಯಲ್ಲಿ ಯಾರೂ ಸಹ ಬಲವಂತದಿಂದ ಬಂದ್ ಮಾಡಿಸುವಂತಿಲ್ಲ. ವ್ಯಾಪಾರಿಗಳಿಗೆ ಕಿರಿಕಿರಿ ನೀಡುವಂತಿಲ್ಲ. ತೊಂದರೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ" ಎಂದು ಬಿಬಿಎಂಪಿ ಆಯುಕ್ತರು ಹೇಳಿದ್ದಾರೆ.

Will Not Allow Any Group To Force A Bandh BBMP Commissioner

ಕನ್ನಡ ಪರ ಸಂಘಟನೆಗಳು ಈಗಾಗಲೇ ಬಂದ್‌ ಮಾಡಲು ಯೋಜನೆ ರೂಪಿಸಿವೆ. ಶನಿವಾರ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯ ತನಕ ಬಂದ್ ನಡೆಯಲಿದೆ. ವಿವಿಧ ಸಂಘಟನೆಗಳು ಈಗಾಗಲೇ ಬಂದ್‌ಗೆ ಬೆಂಬಲ ನೀಡಿವೆ.

ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಬಂದ್ ಬಗ್ಗೆ ಮಾಹಿತಿ ನೀಡಿದ್ದಾರೆ. "ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯ ತನಕ ಬಂದ್ ಮಾಡುತ್ತೇವೆ. ವಿಜಯಪುರದಲ್ಲಿಯೂ ಬಂದ್ ಮಾಡಲಾಗುತ್ತದೆ. ಅದನ್ನು ತಡೆಯಲಿ ನೋಡೋಣ" ಎಂದು ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸವಾಲು ಹಾಕಿದ್ದಾರೆ.

"ಶನಿವಾರ ಓಲಾ, ಊಬರ್ ಸೇವೆ ಇರುವುದಿಲ್ಲ. ಟ್ಯಾಕ್ಸಿ ಸೇವೆ ರದ್ದುಗೊಳ್ಳಲಿದೆ. ಆಟೋಗಳು ಸಹ ಸಂಚಾರ ನಡೆಸುವುದಿಲ್ಲ. ಬಂದ್‌ಗೆ ಹಲವಾರು ಸಂಘಟನೆಗಳು ಬೆಂಬಲ ನೀಡಿವೆ" ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+