ಅತಿಥಿ ಉಪನ್ಯಾಸಕರ ಬೇಡಿಕೆಗೆ ಶೀಘ್ರದಲ್ಲೇ ಪರಿಹಾರ: ಸಚಿವ ಅಶ್ವಥ್ ನಾರಾಯಣ
ಬೆಂಗಳೂರು, ಜನವರಿ 8: ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಕುರಿತು ಚರ್ಚಿಸಲು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ನಿಯೋಗವು ಶುಕ್ರವಾರ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣರನ್ನು ಭೇಟಿ ಮಾಡಿದೆ.
ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಕೂಡ ಅಶ್ವಥ್ ನಾರಾಯಣ ಅವರನ್ನು ಭೇಟಿ ಮಾಡಿದ ಸಮಯದಲ್ಲಿ ಇದ್ದರು. ಈ ವೇಳೆ ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಆದಷ್ಟು ಬೇಗ ಪರಿಹಾರ ನೀಡುವಂತೆ ನಿಯೋಗವು ಮನವಿ ಸಲ್ಲಿಸಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಅತಿಥಿ ಉಪನ್ಯಾಸಕರ ಸಮಸ್ಯೆಗಳ ಬಗ್ಗೆ ವಿಧಾನ ಪರಿಷತ್ ಸದಸ್ಯರು, ಅತಿಥಿ ಉಪನ್ಯಾಸಕರ ಸಂಘಟನೆಗಳು ಮತ್ತು ಸಂಬಂಧಿಸಿದ ಎಲ್ಲರೊಂದಿಗೂ ಚರ್ಚಿಸಿ, ಶೀಘ್ರದಲ್ಲೇ ಪರಿಹಾರ ಕಂಡುಹಿಡಿಯಲಾಗುವುದು ಎಂದು ಭರವಸೆ ನೀಡಿದರು.

ನಿಯೋಗದಲ್ಲಿ ಸಂಘಟನೆಯ ಅಧ್ಯಕ್ಷ ಡಾ. ರಘು ಅಕಮಂಚಿ, ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ, ಎಬಿವಿಪಿ ಮುಖಂಡರಾದ ಸ್ವಾಮಿ ಮೊದಲಾದವರು ಇದ್ದರು.
14,500 ಅತಿಥಿ ಉಪನ್ಯಾಸಕರ ಬಗ್ಗೆ ರಾಜ್ಯ ಸರಕಾರ ಅಸಡ್ಡೆ; ಎಚ್‌ಡಿಕೆ
ಕರ್ನಾಟಕದಲ್ಲಿ ಕೆಲಸ ಮಾಡುತ್ತಿರುವ 14,500 ಅತಿಥಿ ಉಪನ್ಯಾಸಕರ ಬಗ್ಗೆ ರಾಜ್ಯ ಸರಕಾರ ಅಸಡ್ಡೆ ತೋರುತ್ತಿರುವುದು ಸರಿಯಲ್ಲ. ಅವರಿಗೆ ಮಾಸಿಕ 11,000 ರಿಂದ 13,000 ಗೌರವ ಧನ ನೀಡಲಾಗುತ್ತಿದೆ. ಇದು ಸರಕಾರವೇ ನಿಗದಿ ಮಾಡಿರುವ ಮೂಲ ವೇತನಕ್ಕಿಂತ ಕಡಿಮೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

ಸರಕಾರ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುತ್ತಿದ್ದು, ಭಾರತ ವಿಶ್ವಗುರು ಆಗಬೇಕು ಎಂದು ಉನ್ನತ ಶಿಕ್ಷಣ ಸಚಿವರು ಹೇಳುತ್ತಾರೆ. ಸ್ವತಃ ಪ್ರಧಾನಿಯವರು ಇದೇ ಮಾತು ಹೇಳುತ್ತಿದ್ದಾರೆ. ವಿಶ್ವಗುರು ಆಗಬೇಕು ಎಂದರೆ ಅತ್ಯಂತ ಕನಿಷ್ಠ ಸಂಬಳಕ್ಕೆ ಉಪನ್ಯಾಸಕರನ್ನು ದುಡಿಸಿಕೊಳ್ಳುವುದೇ? ಎಂದು ಎಚ್‌ಡಿಕೆ ಪ್ರಶ್ನಿಸಿದ್ದಾರೆ.

ಕಳೆದ ಡಿಸೆಂಬರ್ 10ರಿಂದ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಉನ್ನತ ಶಿಕ್ಷಣ ಸಚಿವರು ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಮುಂದಾಗಬೇಕು ಎಂದು ಆಗ್ರಹ ಮಾಡುತ್ತೇನೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications