ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅತಿಥಿ ಉಪನ್ಯಾಸಕರ ಬೇಡಿಕೆಗೆ ಶೀಘ್ರದಲ್ಲೇ ಪರಿಹಾರ: ಸಚಿವ ಅಶ್ವಥ್ ನಾರಾಯಣ

|
Google Oneindia Kannada News

ಬೆಂಗಳೂರು, ಜನವರಿ 8: ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಕುರಿತು ಚರ್ಚಿಸಲು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ನಿಯೋಗವು ಶುಕ್ರವಾರ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣರನ್ನು ಭೇಟಿ ಮಾಡಿದೆ.

ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಕೂಡ ಅಶ್ವಥ್ ನಾರಾಯಣ ಅವರನ್ನು ಭೇಟಿ ಮಾಡಿದ ಸಮಯದಲ್ಲಿ ಇದ್ದರು. ಈ ವೇಳೆ ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಆದಷ್ಟು ಬೇಗ ಪರಿಹಾರ ನೀಡುವಂತೆ ನಿಯೋಗವು ಮನವಿ ಸಲ್ಲಿಸಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಅತಿಥಿ ಉಪನ್ಯಾಸಕರ ಸಮಸ್ಯೆಗಳ ಬಗ್ಗೆ ವಿಧಾನ ಪರಿಷತ್ ಸದಸ್ಯರು, ಅತಿಥಿ ಉಪನ್ಯಾಸಕರ ಸಂಘಟನೆಗಳು ಮತ್ತು ಸಂಬಂಧಿಸಿದ ಎಲ್ಲರೊಂದಿಗೂ ಚರ್ಚಿಸಿ, ಶೀಘ್ರದಲ್ಲೇ ಪರಿಹಾರ ಕಂಡುಹಿಡಿಯಲಾಗುವುದು ಎಂದು ಭರವಸೆ ನೀಡಿದರು.

Will Try to Solve the Demands and Problems of Guest Lecturers says Minister Ashwath Narayan

ನಿಯೋಗದಲ್ಲಿ ಸಂಘಟನೆಯ ಅಧ್ಯಕ್ಷ ಡಾ. ರಘು ಅಕಮಂಚಿ, ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ, ಎಬಿವಿಪಿ ಮುಖಂಡರಾದ ಸ್ವಾಮಿ ಮೊದಲಾದವರು ಇದ್ದರು.

14,500 ಅತಿಥಿ ಉಪನ್ಯಾಸಕರ ಬಗ್ಗೆ ರಾಜ್ಯ ಸರಕಾರ ಅಸಡ್ಡೆ; ಎಚ್‌ಡಿಕೆ
ಕರ್ನಾಟಕದಲ್ಲಿ ಕೆಲಸ ಮಾಡುತ್ತಿರುವ 14,500 ಅತಿಥಿ ಉಪನ್ಯಾಸಕರ ಬಗ್ಗೆ ರಾಜ್ಯ ಸರಕಾರ ಅಸಡ್ಡೆ ತೋರುತ್ತಿರುವುದು ಸರಿಯಲ್ಲ. ಅವರಿಗೆ ಮಾಸಿಕ 11,000 ರಿಂದ 13,000 ಗೌರವ ಧನ ನೀಡಲಾಗುತ್ತಿದೆ. ಇದು ಸರಕಾರವೇ ನಿಗದಿ ಮಾಡಿರುವ ಮೂಲ ವೇತನಕ್ಕಿಂತ ಕಡಿಮೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

Will Try to Solve the Demands and Problems of Guest Lecturers says Minister Ashwath Narayan

ಸರಕಾರ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುತ್ತಿದ್ದು, ಭಾರತ ವಿಶ್ವಗುರು ಆಗಬೇಕು ಎಂದು ಉನ್ನತ ಶಿಕ್ಷಣ ಸಚಿವರು ಹೇಳುತ್ತಾರೆ. ಸ್ವತಃ ಪ್ರಧಾನಿಯವರು ಇದೇ ಮಾತು ಹೇಳುತ್ತಿದ್ದಾರೆ. ವಿಶ್ವಗುರು ಆಗಬೇಕು ಎಂದರೆ ಅತ್ಯಂತ ಕನಿಷ್ಠ ಸಂಬಳಕ್ಕೆ ಉಪನ್ಯಾಸಕರನ್ನು ದುಡಿಸಿಕೊಳ್ಳುವುದೇ? ಎಂದು ಎಚ್‌ಡಿಕೆ ಪ್ರಶ್ನಿಸಿದ್ದಾರೆ.

Will Try to Solve the Demands and Problems of Guest Lecturers says Minister Ashwath Narayan

ಕಳೆದ ಡಿಸೆಂಬರ್ 10ರಿಂದ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಉನ್ನತ ಶಿಕ್ಷಣ ಸಚಿವರು ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಮುಂದಾಗಬೇಕು ಎಂದು ಆಗ್ರಹ ಮಾಡುತ್ತೇನೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

English summary
Will try to solve the demands and problems of guest lecturers, Higher Education Minister Ashwath Narayan Said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X