ಬೆಂಗಳೂರಿಗೆ ಹೊಸ ಪ್ರದೇಶಗಳ ಸೇರ್ಪಡೆ: ಹಳೆ ಪ್ರದೇಶದಲ್ಲಿ ಭೂಮಿಗೆ ಬಂಗಾರದ ಬೆಲೆ ಇದೆಯೇ ?
ಬೆಂಗಳೂರಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬದಲಾಗಿ, ಗ್ರೇಟರ್ ಬೆಂಗಳೂರು ಆಡಳಿತ ಬಂದಿದೆ. ಗ್ರೇಟರ್ ಬೆಂಗಳೂರು ಆಡಳಿತ ಬಂದ ಮೇಲೆ ಬೆಂಗಳೂರಿಗೆ ಹೊಸ ಪ್ರದೇಶಗಳ ಸೇರ್ಪಡೆಯ ಬಗ್ಗೆಯೂ ಚರ್ಚೆ ನಡೆದಿದೆ. ಈ ರೀತಿ ಇರುವಾಗಲೇ ಮಹತ್ವದ ವಿಷಯವೊಂದು ಚರ್ಚೆಯ ಮುನ್ನೆಲೆಗೆ ಬಂದಿದೆ.
ಬೆಂಗಳೂರಿಗೆ ಇದೀಗ ಐದು ಹೊಸ ಪಾಲಿಕೆಗಳು ರಚನೆಯಾಗಿದ್ದು, ಹೊಸ ಪಾಲಿಕೆಗಳು ರಚನೆಯಾದ ಬೆನ್ನಲ್ಲೇ ಹೊಸ ಪ್ರದೇಶಗಳು ಸೇರ್ಪಡೆ ಆಗುವ ಬಗ್ಗೆಯೂ ಚರ್ಚೆ ನಡೆದಿದೆ. ಬೆಂಗಳೂರಿನ ಐದು ಪಾಲಿಕೆಗಳ ವ್ಯಾಪ್ತಿಗೆ ಹೊಸ ಪ್ರದೇಶಗಳ ಸೇರ್ಪಡೆಯಾದರೆ ಭೂಮಿಗೆ ಬಂಗಾರದ ಬೆಲೆ ಬರಲಿದೆ ಎನ್ನುವ ನಿರೀಕ್ಷೆ ಮೂಡಿದೆ. ಈ ರೀತಿ ಇರುವಾಗಲೇ ಬೆಂಗಳೂರಿಗೆ ಈಗಾಗಲೇ ಹೊಸದಾಗಿ ಸೇರ್ಪಡೆಯಾದ ಪ್ರದೇಶಗಳ ಬಗ್ಗೆಯೂ ಚರ್ಚೆ ನಡೆದಿದೆ.

ನಿವೃತ್ತ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ ಎನ್. ಮಂಜುನಾಥ್ ಪ್ರಸಾದ್ ಅವರು, ವಿವಿಧ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಬೆಂಗಳೂರಿಗೆ ಸಿಎಂಸಿಯ ಹಳ್ಳಿಗಳನ್ನು ಸೇರ್ಪಡೆಗೊಳಿಸಲಾಗಿದೆ. ಆದರೆ, ಅದಕ್ಕೆ ತಕ್ಕ ಆದಾಯ ಹೆಚ್ಚಳವಾಗಿಲ್ಲ. ಇರುವ ಅನುದಾನದಲ್ಲಿ ಜನರಿಗೆ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ನಾವು ಮಾಡುವ ಕೆಲಸ ತೃಪ್ತಿಯಾಗಿರಬೇಕು. ಸರ್. ಎಂ.ವಿಶ್ವೇಶ್ವರಯ್ಯ ಅವರ ಆದರ್ಶಗಳನ್ನು ಅಳವಡಿಸಿಕೊಂಡು ಉತ್ತಮ ಕೆಲಸ ಮಾಡಬೇಕು. ಸರ್ಕಾರಿ ಸೇವೆಯಲ್ಲಿ ಎಲ್ಲರಿಗೂ ಅವಕಾಶ ಸಿಗುವುದಿಲ್ಲ. ಬೇರೆಯವರು ಒಳ್ಳೆಯ ಮಾತುಗಳನ್ನಾಡಲೆಂದು ಕೆಲಸ ಮಾಡಬಾರದು. ತಮ್ಮ ಜವಾಬ್ದಾರಿಯನ್ನರಿತು ಕೆಲಸ ಮಾಡಬೇಕೆಂದು ಹೇಳಿದ್ದಾರೆ.
ಸರ್. ಎಂ. ವಿಶ್ವೇಶ್ವರಯ್ಯ ದಿನಾಚರಣೆಯ ಅಂಗವಾಗಿ ಸಾಧಕ/ಸಾಧಕಿ ಎಂಜಿನಿಯರ್‌ಗಳಿಗೆ ಸರ್.ಎಂ. ವಿಶ್ವೇಶ್ವರಯ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಇನ್ನು ನಾನು 2016 ರಲ್ಲಿ ಬಿಬಿಎಂಪಿ ಆಯುಕ್ತನಾಗಿದ್ದ ಸಂದರ್ಭದಲ್ಲಿ ಮಳೆಯಿಂದಾಗಿ ಬೊಮ್ಮನಹಳ್ಳಿಯಲ್ಲಿ ಸುರಿದ ಮಳೆಯಿಂದ ಬಾರಿ ಆನಾಹುತವಾಗಿತ್ತು. ಕೊಳಚೆ ನೀರು ನಿಂತು ಸಾರ್ವಜನಿಕರು ಸಂಕಷ್ಟ ಆನುಭವಿಸುತ್ತಿದ್ದರು. ಇಡೀ ರಾತ್ರಿ ಎಂಜಿನಿಯರ್ ಶ್ರಮಪಟ್ಟು ಕಾರ್ಯನಿರ್ವಹಿಸಿ ಬೆಳಗಾಗುವುದರ ಒಳಗೆ ಸಮಸ್ಯೆಯನ್ನು ಬಗೆಹರಿಸಿದ್ದರು ಎಂದು ತಿಳಿಸಿದರು.
ಸರ್. ಎಂ.ವಿಶ್ವೇಶ್ವರಯ್ಯ ಅವರು 13 ವರ್ಷದವರಾಗಿದ್ದಾಗ ಅವರ ತಂದೆ ಅಕಾಲಿಕ ಮೃತಪಟ್ಟರು. ಆದರೂ ಅವರು ಧೃತಿಗೆಡದೆ ಶಿಕ್ಷಣ ಮುಂದುವರೆಸಿ ಮಹಾನ್ ವ್ಯಕ್ತಿಯಾಗಿ ಬೆಳೆದರು. ಯಾವುದೇ ಯೋಜನೆ ಅನುಷ್ಠಾನ ಮಾಡಬೇಕಾದರೆ ಎಲ್ಲರ ಜೊತೆಯಲ್ಲಿ ಚರ್ಚಿಸಿ ಅದನ್ನು ಅನುಷ್ಠಾನಗೊಳಿಸುತ್ತಿದ್ದರು. ಎಂಜಿನಿಯರ್‌ಗಳ ಸತತ ಪರಿಶ್ರಮ, ಬುದ್ಧಿವಂತಿಕೆಯಿಂದ ಬೆಂಗಳೂರು ನಗರ ಉತ್ತಮವಾಗಿ ಬೆಳೆದು ನಿಂತಿದೆ. ಕೋವಿಡ್ ಸಂದರ್ಭದಲ್ಲಿ ಜನರ ಜೀವನ ರಕ್ಷಣೆ ಮಾಡಿದ ಕಾರ್ಯ ಸಂತೃಪ್ತಿ ತಂದಿದೆ. ಸರ್. ಎಂ.ವಿಶ್ವೇಶ್ವರಯ್ಯ ಅವರ ಆದರ್ಶಗಳನ್ನು ಎಂಜಿನಿಯರ್‌ಗಳು ಅಳವಡಿಸಿಕೊಂಡು ಕೆಲಸ ಮಾಡಬೇಕು ಎಂದಿದ್ದಾರೆ.
ಎಂಜಿನಿಯರ್‌ಗಳು ಸಮರ್ಪಕವಾಗಿ ಕೆಲಸ ಮಾಡಿದರೆ ಸಾರ್ವಜನಿಕರಿಂದ ಮೆಚ್ಚುಗೆ ಸಿಗಲಿದೆ ಎಂದು ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಗ್ರೇಟರ್ ಬೆಂಗಳೂರು ಪ್ರಾಧಿಕಾರ - ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ನೌಕರರ ಭವನದ ಬಸವ ಸಭಾಂಗಣದಲ್ಲಿ ಭಾರತ ರತ್ನ ಸರ್.ಎಂ. ವಿಶ್ವೇಶ್ವರಯ್ಯ ಜಯಂತಿ ಪ್ರಯುಕ್ತ ಇಂಜಿನಿಯರ್ ದಿನಾಚರಣೆ ಹಾಗೂ ಸರ್.ಎಂ. ವಿಶ್ವೇಶ್ವರಯ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದ್ದಾರೆ. ಮಾತುಗಳು ಬರುತ್ತವೆ ಅದರ ಕಡೆ ಗಮನಹರಿಸಬಾರದು. ಒತ್ತಡದಲ್ಲಿಯೂ ಎಂಜಿನಿಯರ್‌ಗಳು ಉತ್ತಮವಾಗಿ ಕೆಲಸ ಮಾಡುತ್ತಾರೆ. ನಾವು ಉತ್ತಮವಾಗಿ ಕೆಲಸ ಮಾಡಿದರೆ ನಮ್ಮ ಕೆಲಸವೇ ಮಾತನಾಡುತ್ತದೆ. ಉತ್ತಮ ನಗರ ನಿರ್ಮಾಣಕ್ಕೆ ಇಂಜನಿಯರ್ ಗಳ ಶ್ರಮ ಹೆಚ್ಚಿದ್ದು, ಅವರನ್ನು ಗುರುತಿಸುವ ಕೆಲಸ ಈ ದಿವಸವಾಗಿದೆ ಎಂದಿದ್ದಾರೆ.












Click it and Unblock the Notifications