ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ಮತ್ತೆ ವೈಟ್ ಟಾಪಿಂಗ್, ವಾಹನ ಸವಾರರ ಪರದಾಟ
ಬೆಂಗಳೂರು, ಏ.4: ಅತಿ ಹೆಚ್ಚು ವಾಹನ ದಟ್ಟಣೆ ಇರುವ ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ಮುನ್ಸೂಚನೆ ನೀಡದೆ ಮತ್ತೆ ವೈಟ್ ಟಾಪಿಂಗ್ ಕಾಮಗಾರಿ ಆರಂಭಿಸಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಬ್ಯಾರಿಕೇಡ್ ಅಳವಡಿಸಿ ಈಗಾಗಲೇ ಕಾಮಗಾರಿ ಶುರು ಮಾಡಿದ್ದಾರೆ. ಇದರಿಂದ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ. ಇದುವರೆಗೂ ಪರ್ಯಾಯ ಮಾರ್ಗದ ಬಗ್ಗೆ ಮಾಹಿತಿ ನೀಡಿಲ್ಲ.
ಸಾರ್ವಜನಿಕರು ಮತ್ತು ವಾಹನ ಸವಾರರಿಗೆ ಯಾವುದೇ ಮುನ್ಸೂಚನೆ ನೀಡದೆಯೇ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಸಿರ್ಸಿ ವೃತ್ತದ ವರೆಗೆ ಕೆಲಸ ಶುರು ಮಾಡಲಾಗಿದೆ. ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ ಬಗ್ಗೆ ಮತ್ತು ಪರ್ಯಾಯ ಮಾರ್ಗಗಳ ಬಗ್ಗೆ ಎಲ್ಲಿಯೂ ಸೂಚನಾ ಫಲಕಗಳನ್ನು ಅಳವಡಿಸಿಲ್ಲ.

ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ಬ್ಯಾರಿಕೇಡ್ ಹಾಕಿ ಒಂದು ಬದಿ ಡಾಂಬರ್ ತೆಗೆಯುವ ಕಾಮಗಾರಿ ಆರಂಭಿಸಲಾಗಿದೆ. ಈ ಬಗ್ಗೆ ಮಾಹಿತಿ ಇಲ್ಲದೆ ಈ ರಸ್ತೆಯಲ್ಲಿ ಬರುವ ವಾಹನಗಳು ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ಪರಿತಪಿಸುವಂತಾಗಿದೆ.
ನಾಯಂಡಹಳ್ಳಿ ಕಡೆಯಿಂದ ಸಿಸಿಬಿ ಕಚೇರಿ ಜಂಕ್ಷನ್‌ವರೆಗೆ ವೈಟ್ ಟಾಪಿಂಗ್ ಮಾಡಿದಾಗಲೂ ವಾಹನ ದಟ್ಟಣೆಯಿಂದ ಸಾಕಷ್ಟು ಸಮಸ್ಯೆಯಾಗಿತ್ತು. ಆಗಲೂ ಪರ್ಯಾಯ ಮಾರ್ಗಗಳ ವ್ಯವಸ್ಥೆ ಮಾಡಿಕೊಡದೆ ಜನರು ಪರದಾಡುವಂತೆ ಮಾಡಲಾಗಿತ್ತು.












Click it and Unblock the Notifications