ರಾಜರಾಜೇಶ್ವರಿನಗರದಲ್ಲಿ ಗೃಹಿಣಿ ಅನುಮಾನಾಸ್ಪದ ಸಾವು
ಬೆಂಗಳೂರು, ಮೇ 15: ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿ ಗೃಹಿಣಿಯೊಬ್ಬರ ಶವ ನೇಣು ಬಿಗಿದ ರೀತಿಯಲ್ಲಿ ಪತ್ತೆಯಾಗಿದೆ. ಗೃಹಿಣಿ ಸಾವಿನ ಹಿಂದೆ ಹಲವು ಅನುಮಾನಗಳು ಹುಟ್ಟಿಕೊಂಡಿವೆ.
ಮಂಜುಳಾ(27) ಮೃತ ಮಹಿಳೆಮಂಜುಳಾ ಕಳೆದ ರಾತ್ರಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ವರದಕ್ಷಿಣೆಗಾಗಿ ಆಕೆಯ ಪತಿ ಗಿರೀಶ್ ಹಾಗೂ ಆಕೆಯ ಮನೆಯವರು ಕೊಲೆ ಮಾಡಿದ್ದಾರೆ ಎಂದು ಪೋಷಕರು ಆರೋಪಿಸುತ್ತಿದ್ದಾರೆ. ಸದ್ಯ ಮರಣೋತ್ತರ ಪರೀಕ್ಷೆಗಾಗಿ ಮಂಜುಳಾ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಮಂಜುಳಾ, ಗಿರೀಶ್ ಎಂಬವರನ್ನು ಮೂರು ವರ್ಷಗಳ ಹಿಂದೆ ಮದುವೆ ಆಗಿದ್ದರು. ಇದೀಗ ರಾಜರಾಜೇಶ್ವರಿನಗರದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಂಜುಳಾ ಶವ ಪತ್ತೆಯಾಗಿದೆ. ಈ ಬಗ್ಗೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮಂಜುಳಾ ಪತಿ ಗಿರೀಶ್ ನನ್ನು ವಶಕ್ಕೆ ಪಡೆದಿದ್ದಾರೆ.












Click it and Unblock the Notifications