ಬೆಂಗಳೂರಿನಲ್ಲಿ ಹಾಲು ತರಲು ಹೋದ ಮಹಿಳೆ ಕೊಲೆ

ಬೆಂಗಳೂರು, ಅ.28 : ಮಂಗಳವಾರ ಮುಂಜಾನೆ ಹಾಲು ತರಲು ಮನೆಯಿಂದ ಹೊರಗೆ ಹೋಗಿದ್ದ ಮಹಿಳೆಯನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ತನಿಖೆ ನಡೆಸುತ್ತಿದ್ದಾರೆ.

ಕೊಲೆಯಾದ ಮಹಿಳೆಯನ್ನು ಶಂಕರನಗರದ 4ನೇ ಕ್ರಾಸ್ ನಿವಾಸಿ ಮುತ್ತುಲಕ್ಷ್ಮೀ (52) ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ 5.30ರ ಸುಮಾರಿಗೆ ಮುತ್ತುಲಕ್ಷ್ಮೀ ಅವರು ಹಾಲು ತರಲು ಮೂರನೇ ಮಹಡಿಯಲ್ಲಿರುವ ತಮ್ಮ ಮನೆಯಿಂದ ಅಂಗಡಿಗೆ ಬಂದಿದ್ದರು.

Mahalakshmi Layout

ಬೆಳಗ್ಗೆ 6.15ರ ಸುಮಾರಿಗೆ ಮುತ್ತುಲಕ್ಷ್ಮೀ ಅವರ ಮೃತದೇಹ ಅವರ ಮನೆ ಸಮೀಪವಿರುವ ಮೋರಿಯ ಬಳಿ ಪತ್ತೆಯಾಗಿದೆ. ಸ್ಥಳೀಯರು ಇದನ್ನು ಗಮನಿಸಿ ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ. ತಲೆಗೆ ಕಬ್ಬಿಣದ ರಾಡ್‌ನಿಂದ ಹೊಡೆದು ಹತ್ಯೆ ಮಾಡಿರಬಹುದು ಎಂದು ಶಂಕಿಸಲಾಗಿದೆ.

ಸರಗಳ್ಳರು ಈ ಕೊಲೆ ಮಾಡಿರಬಹುದು ಎಂದು ಸ್ಥಳೀಯರು ಹೇಳಿದ್ದಾರೆ. ಮಹಾಕ್ಷ್ಮೀ ಲೇಔಟ್ ಪೊಲೀಸರು ಶ್ವಾನದಳದೊಂದಿಗೆ ಸ್ಥಳಕ್ಕೆ ಆಗಮಿಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಿದ್ದಾರೆ. ಬೆಳ್ಳಂಬೆಳಗ್ಗೆಯೇ ಹತ್ಯೆ ನಡೆದಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+